ಬೆಂಗಳೂರು : ಮನೆಯಲ್ಲಿ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ತುಂಬಾ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದರೆ ಅದರಿಂದ ಅನಾಹುತಗಳು ಸಂಭವಿಸುತ್ತದೆ. ಹಾಗಾಗಿ ಅವುಗಳನ್ನು ವಾಸ್ತು ಪ್ರಕಾರ ಜೋಡಿಸಿದರೆ ತುಂಬಾ ಒಳ್ಳೆಯದು.
ವಾಸ್ತು ಶಾಸ್ತ್ರದ ಪ್ರಕಾರ ಬೆಂಕಿಗೆ ಸಂಬಂಧಿಸಿದ ವಸ್ತುಗಳನ್ನು ದಕ್ಷಿಣ ಅಥವಾ ಆಗ್ನೇಯ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರ ಆರೋಗ್ಯ ಉತ್ತಮವಾಗಿರುತ್ತದೆ. ಅವರಿಗೆ ಯಾವುದೇ ರೀತಿಯ ತೊಂದರೆ ಇರಲ್ಲ ಮತ್ತು ಯಾವುದೇ ಕಾರಣವಿಲ್ಲದೇ ರೋಗಗಳಿಗೆ ತುತ್ತಾಗುವುದು ತಪ್ಪುತ್ತದೆ. ಆದಕಾರಣ ಮನೆಯಲ್ಲಿ ಜ್ವಾಲೆಯನ್ನು ಬೆಳಗಿಸಲು , ಒಲೆ ಇಡಲು ಮತ್ತು ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ದಕ್ಷಿಣ ಅಥವಾ ಆಗ್ನೇಯ ದಿಕ್ಕನ್ನು ಆರಿಸಿಕೊಳ್ಳುವುದು ಉತ್ತಮ.