ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿತ್ತು. ಆದರೆ ಇಂದಿನ ಹವಾಮಾನ ವರದಿ ಪ್ರಕಾರ ಕರಾವಳಿ ಮಾತ್ರವಲ್ಲ ಈ ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗುವ ಸೂಚನೆಯಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿತ್ತು. ಇಂದು ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಕೇವಲ ಮೋಡ ಕವಿದ ವಾತಾವರಣವಿರಲಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜೊತೆಗೆ ಬೆಳಗಾವಿ ಜಿಲ್ಲೆಯಲ್ಲೂ ಇಂದು ಭಾರೀ ಮಳೆಯ ನಿರೀಕ್ಷೆಯಿದೆ. ಉಡುಪಿಯಲ್ಲಿ ಇದೀಗ ಎರಡು ದಿನಗಳಿಂದ ನಿರಂತರ ಮಳೆಗೆ ಕೊಂಚ ಬ್ರೇಕ್ ಬಿದ್ದಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಉಳಿದಂತೆ ಬೆಂಗಳೂರಿನಲ್ಲೂ ಇಂದೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆಯಷ್ಟೇ ಎಂದು ಕಂಡುಬಂದಿದೆ.