Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 18 ಡಿಸೆಂಬರ್ 2018 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಬಂಧು ಮಿತ್ರ ಪ್ರೀತಿ ಗಳಿಸುವಿರಿ. ಯಾವುದೋ ಒಂದು ಕೊರಗು ನಿಮ್ಮನ್ನು ಕಾಡಲಿದೆ. ಧೈರ್ಯದಿಂದ ಮುನ್ನುಗ್ಗಿದ್ದರೆ ಯಶಸ್ಸು ಸಾಧ್ಯ.

ವೃಷಭ: ವ್ಯವಹಾರದಲ್ಲಿ ಲಾಭ ಸಿಗುತ್ತದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಯಶಸ್ಸು.

ಮಿಥುನ: ಆತ್ಮವಿಶ್ವಾಸದಿಂದ ಮುನ್ನುಗ್ಗಿ. ನಿಮಗೆ ಸಿಗಬೇಕಾದ ಸ್ಥಾನಮಾನ, ಗೌರವ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಸಂಬಂಧಿಗಳ ಕಿರಿ ಕಿರಿ ಇರುತ್ತದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುತ್ತದೆ. ದೂರ ಸಂಚಾರದ ಯೋಗವಿದೆ. ಆದರೆ ಎಚ್ಚರಿಕೆ ಅಗತ್ಯ. ಆರೋಗ್ಯದಲ್ಲಿ ಏರುಪೇರಾಗಬಹುದು.

ಸಿಂಹ: ಆರೋಗ್ಯ ಸಮಸ್ಯೆ ಕಾಡಲಿದೆ. ಬಂಧು ಮಿತ್ರರಿಂದ ಸಂತಸ ಸಿಗಲಿದೆ. ಮನೆಗೆ ಬೇಕಾದ ವಸ್ತುಗಳಿಗೆ ಖರ್ಚು ಮಾಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ನೀವು ನಂಬಿಕೊಂಡವರೇ ನಿಮಗೆ ಮೋಸ ಮಾಡುವರು. ಕುಟುಂಬದೊಳಗೇ ಕಿರಿ ಕಿರಿ ಇರುತ್ತದೆ. ಮಹಿಳೆಯರಿಂದ ಸಹಕಾರ ಸಿಗುತ್ತದೆ. ಎಲ್ಲದಕ್ಕೂ ಪ್ರಯತ್ನಬಲದ ಅಗತ್ಯವಿದೆ.

ತುಲಾ: ನೀವು ನಂಬಿರುವ ವ್ಯಕ್ತಿಗಳಿಂದ ನಿಮ್ಮ ಕಾರ್ಯ ಸಾಧನೆಗೆ ಸಹಕಾರ ದೊರೆಯಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಬಹುದು. ಮಂಗಲ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ವೃಶ್ಚಿಕ: ಹಣಕಾಸಿನ ಮುಗ್ಗಟ್ಟು ಎದುರಿಸುವಿರಿ. ಕುಟುಂಬದವರ ಸಹಕಾರ ನಿರೀಕ್ಷಿಸಬೇಕಾದೀತು. ಮನಸ್ಸಿನ ನೆಮ್ಮದಿಗಾಗಿ ದೇವರ ಪ್ರಾರ್ಥನೆ ಮಾಡಿ.

ಧನು: ಕಾರ್ಯನಿಮಿತ್ತ ದೂರ ಸಂಚಾರ ಮಾಡುವಿರಿ. ಧನಾಗಮನವಾದರೂ, ಅಷ್ಟೇ ಖರ್ಚು ವೆಚ್ಚಗಳೂ ಇರುತ್ತವೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಸಂಗಾತಿಯ ಸಹಕಾರದಿಂದ ಸಂತಸ ಪಡೆಯುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಬೆನ್ನಿಗೆ ಚೂರಿ ಹಾಕುವವರು ಪಕ್ಕದಲ್ಲೇ ಇರುತ್ತಾರೆ. ಎಚ್ಚರವಾಗಿರಿ.

ಕುಂಭ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಗೀಡಾಗುವಿರಿ. ಮನಸ್ಸಿನ ನೆಮ್ಮದಿ ಹಾಳಾಗುವುದರ ಜತೆಗೆ ಆರೋಗ್ಯವೂ ಕೆಡುವುದು. ದೈವ ಪ್ರಾರ್ಥನೆಯಿಂದ ನೆಮ್ಮದಿ.

ಮೀನ: ಆರೋಗ್ಯದಲ್ಲಿ ವೃದ್ಧಿ. ಕುಟುಂಬದಲ್ಲಿ ಸಂಗಾತಿಯಿಂದ ಸಹಕಾರ ಸಿಕ್ಕಿ ಸಂತಸ ಕಾಣುವಿರಿ. ಅಂದುಕೊಂಡ ಕಾರ್ಯಗಳು ನೆರವೇರಿ ನೆಮ್ಮದಿ ಕಾಣುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments