Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 30 ಡಿಸೆಂಬರ್ 2018 (06:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಶುಭ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಹೊಸ ವಿಚಾರಗಳನ್ನು ತಿಳಿದುಕೊಳ್ಳುವಿರಿ. ಹೊಸ ಜನರೊಂದಿಗಿನ ಓಡಾಟ ಇಂದು ನಿಮ್ಮನ್ನು ಉಲ್ಲಾಸದಾಯಕವಾಗಿಡುತ್ತದೆ.

ವೃಷಭ: ಭೋಜನ ಪ್ರಿಯರಾಗಿದ್ದರೆ ಇಂದು ಉತ್ತಮ ಭೋಜನ ಸವಿಯುವಿರಿ. ಬಂಧು ಮಿತ್ರರ ಆಗಮನದಿಂದ ಸಂತೋಷ ಕಾಣುವಿರಿ. ಖರ್ಚು ವೆಚ್ಚಗಳೂ ಅಧಿಕವಾಗಲಿದೆ.

ಮಿಥುನ: ಮಿತ್ರರ ಅನಾರೋಗ್ಯ ಸುದ್ದಿ ಕೇಳಿಬಂದೀತು. ಇನ್ನೊಬ್ಬರಿಗೆ ಸಹಾಯ ಮಾಡುವ ಮೊದಲು ಯೋಚಿಸಿ ಹೆಜ್ಜೆಯಿಡಿ. ಕುಟುಂಬದವರೊಂದಿಗೆ ಕಿರಿ ಕಿರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಕರ್ಕಟಕ: ಯಾವುದೇ ಕೆಲಸ ಮಾಡುವುದಿದ್ದರೂ ಕುಟುಂಬದ ಹಿರಿಯರೊಡನೆ ಸಮಾಲೋಚನೆ ನಡೆಸಿ. ದಾಯಾದಿಗಳಿಂದ ತೊಂದರೆ ಉಂಟಾಗುವ ಸಂಭವವಿದೆ. ಆರ್ಥಿಕ ಲಾಭಗಳಿದ್ದರೂ ಅಷ್ಟೇ ಖರ್ಚು ವೆಚ್ಚಗಳಿರಲಿವೆ.

ಸಿಂಹ: ಸಮಾಜದಲ್ಲಿ ನಿಮ್ಮ ಸ್ಥಾನ ಮಾನ ಹೆಚ್ಚಾಗಿ ಗೌರವ ಸಂಪಾದಿಸುವಿರಿ. ಆರ್ಥಿಕ ಲಾಭವಾಗಲಿದೆ. ಧರ್ಮ ಕಾರ್ಯಗಳಿಗಾಗಿ ಧನ ವಿನಿಯೋಗ ಮಾಡಿಕೊಳ್ಳಬೇಕಾದೀತು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕನ್ಯಾ: ಹೊಸ ವಾಹನ ಖರೀದಿಗೆ ಮುಂದಾಗುವಿರಿ. ಆದರೆ ಖರ್ಚುಗಳ ಬಗ್ಗೆ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಇಂದು ಅತೀವ ಪ್ರಯತ್ನ ನಡೆಸಬೇಕಾದೀತು. ಹೊಸ ಜನರೊಂದಿಗೆ ವಿಶ್ವಾಸ ಬೆಳೆಸುವ ಮೊದಲು ಯೋಚಿಸಿ ಹೆಜ್ಜೆಯಿಡಿ.

ತುಲಾ: ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆಯಾದೀತು. ಕುಲದೇವರಿಗೆ ಪ್ರಾರ್ಥನೆ ಮಾಡಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಖರ್ಚು ವೆಚ್ಚಗಳು ಅಧಿಕವಾದೀತು. ಆದರೆ ಕುಟುಂಬದವರೊಂದಿಗೆ ನೆಮ್ಮದಿಯ ವಾತಾವರಣ ಅನುಭವಿಸುವಿರಿ.

ವೃಶ್ಚಿಕ: ಪ್ರೇಮಿಗಳಿಗೆ ಶುಭ ದಿನ. ದಂಪತಿಗಳು ಸರಸದ ಸಮಯ ಕಳೆಯುವರು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಹೊಸ ಮನೆ ಖರೀದಿ ಬಗ್ಗೆ ಯೋಚನೆ ಮಾಡುವಿರಿ. ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರವಿರಲಿ.

ಧನು: ಕುಟುಂಬದವರೊಂದಿಗೆ ಪ್ರವಾಸ ಹೋಗುವಿರಿ. ಪ್ರಯಾಣದಲ್ಲಿ ಎಚ್ಚರ. ಆದಷ್ಟೂ ವಾಹನ ಚಾಲನೆ ಮಾಡದೇ ಇದ್ದರೆ ಒಳ್ಳೆಯದು. ಆರ್ಥಿಕ ಲಾಭವಾಗಿ ನೆಮ್ಮದಿ ಕಾಣುವಿರಿ.

ಮಕರ: ಬೇರೆ ಬೇರೆ ಮೂಲಗಳಿಂದ ಧನಾಗಮನವಾಗಿ ಸಂತಸ ಕಾಣುವಿರಿ. ಬರಬೇಕಿದ್ದ ಬಾಕಿ ಹಣ ಸಂದಾಯವಾಗುವುದು. ಮಕ್ಕಳ ಆರೋಗ್ಯದ ಬಗ್ಗೆ  ಚಿಂತೆ ಮಾಡಬೇಕಾಗಿ ಬರಬಹುದು. ಸಂಗಾತಿಯೊಂದಿಗೆ ಉಪಯುಕ್ತ ಸಮಯ ಕಳೆಯುವಿರಿ.

ಕುಂಭ: ಯಾವುದೇ ಹೆಜ್ಜೆಯಿಡಬೇಕಾದರೂ ಏಕಾಂಗಿ ನಿರ್ಧಾರ ಕೈಗೊಂಡರೆ ಕೈ ಸುಟ್ಟುಕೊಳ್ಳಬೇಕಾದ ಪರಿಸ್ಥಿತಿ ಬಂದೀತು. ಸಂಗಾತಿಯೊಡನೆ ಕಿರಿಕ್ ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ.

ಮೀನ: ಸ್ನೇಹಿತರಿಂದ ವಂಚನೆಗೊಳಗಾಗುವ ಸಂಭವವಿದೆ. ಹಣಕಾಸಿನ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಯಾರಿಗೂ ಸಾಲ ಕೊಡಲು ಹೋಗಬೇಡಿ. ನೆಮ್ಮದಿಗಾಗಿ ಇಷ್ಟದೇವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.              

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments