Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 10 ಜನವರಿ 2019 (09:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಶೀತ  ಸಂಬಂಧೀ ಸಮಸ್ಯೆ ಕಂಡುಬರಬಹುದು. ಉದ್ಯೋಗದಲ್ಲಿ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಷಭ: ಮನೆಗೆ ಸಂಬಂಧಿಸಿದ ವಸ್ತು ಖರೀದಿಸಿಬೇಕೆಂದಿದ್ದರೆ ಇಂದೇ ಮಾಡಿ. ವಿದ್ಯಾರ್ಥಿಗಳಿಗೆ ಮುನ್ನಡೆ. ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನ ಮಾನ. ಧನ ಲಾಭವಾಗಲಿದೆ.

ಮಿಥುನ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವಂತಹ ಸಂಬಂಧ ಕೂಡಿ ಬರುವುದು. ದೂರ ಸಂಚಾರ ಯೋಗವಿದೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಮನೆಯಲ್ಲಿ ಎಷ್ಟೋ ದಿನಗಳಿಂದ ನಡೆಯಬೇಕಿದ್ದ ಶುಭ ಕಾರ್ಯ ನೆರವೇರಿಸುವಿರಿ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದಲೇ ಕಿರುಕುಳ ಎದುರಾಗಬಹುದು. ಆದಾಯ ಹೆಚ್ಚಿದಂತೆ ಖರ್ಚೂ ಹೆಚ್ಚುವುದು.

ಸಿಂಹ: ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳಿ. ಕೋಪದ ಕೈಗೆ ಬುದ್ಧಿ ಕೊಟ್ಟು ಅನಾಹುತಕ್ಕೆ ಎಡೆ ಮಾಡಿಕೊಡದಿರಿ. ಮನೆಯ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಆರೋಗ್ಯಕ್ಕಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ.

ಕನ್ಯಾ: ಇಂಜಿನಿಯರಿಂಗ್ ವೃತ್ತಿಯವರಿಗೆ ಕೊಂಚ ಒತ್ತಡದ ದಿನ. ಇತರ ಸಾಮಾನ್ಯ ಉದ್ಯೋಗಿಗಳಿಗೆ ಮುನ್ನಡೆ. ಕುಟುಂಬದವರೊಂದಿಗೆ ಚರ್ಚಿಸಿ ಯಾವುದೇ ಕೆಲಸಕ್ಕೆ ಮುಂದಾಗುವುದು ಒಳ್ಳೆಯದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಬಂಧು ಮಿತ್ರರು ಅನಿರೀಕ್ಷಿತ ವಾರ್ತೆ ಹೊತ್ತು ಮನೆಗೆ ಬರುವರು. ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆ ಅಲೆದಾಟ ತಪ್ಪದು.

ವೃಶ್ಚಿಕ: ಹೊಸದಾಗಿ ವ್ಯವಹಾರ ಮಾಡುವುದಿದ್ದರೆ ಎಚ್ಚರಿಕೆಯಿಂದ ಹೆಜ್ಜೆಯಿಡಿ. ವಂಚನೆಗೊಳಗಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನತೆ ಕಂಡುಬರುವುದು. ಪ್ರಯತ್ನ ಬಲವಿಲ್ಲದೇ ಯಾವುದೇ ಕಾರ್ಯ ಸಾಗದು.

ಧನು: ಕುಟುಂಬದವರ ಆರೋಗ್ಯ ಸಮಸ್ಯೆಗಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಧನಾಗಮನವಾಗಿ ನೆಮ್ಮದಿ ಮೂಡುವುದು. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ದೊರೆಯುವುದು. ಹಿರಿಯರಿಂದ ಪ್ರಶಂಸೆಗೊಳಗಾಗುವಿರಿ.

ಮಕರ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಎಷ್ಟೋ ದಿನದಿಂದ ಬಾಕಿಯಿದ್ದ ಸಾಲ ಮರುಪಾವತಿಯಾಗುವುದು. ಆರ್ಥಿಕವಾಗಿ ನಿಧಾನವಾಗಿ ಚೇತರಿಕೆ ಕಾಣುವಿರಿ. ದುಡುಕಿನ ವರ್ತನೆ ಬೇಡ.

ಕುಂಭ: ಉದ್ಯಮಿಗಳಿಗೆ ಆರ್ಥಿಕವಾಗಿ ನಿವ್ವಳ ಲಾಭ ಸಿಗುವುದು. ಆದರೆ ಹೊಸ ಹೂಡಿಕೆ ಮಾಡುವಾಗ ಅಪರಿಚಿತರನ್ನು ಕಣ್ಮುಚ್ಚಿ ನಂಬಬೇಡಿ. ಸಂಸಾರದಲ್ಲಿ ಸಂಗಾತಿಯಿಂದ ಸುಖ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.

ಮೀನ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಿದೇಶ ಸಂಚಾರ ಯೋಗವಿದೆ. ಕುಟುಂಬದಲ್ಲಿ ಶಾಂತಿ ನೆಲೆಸಿರುತ್ತದೆ. ಆರ್ಥಿಕ ಲಾಭವಾಗುವುದು. ಒಟ್ಟಾರೆ ಇಂದು ನಿಮ್ಮ ಪಾಲಿಗೆ ಅದ್ಭುತ ದಿನ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments