ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 13 ಮಾರ್ಚ್ 2019 (08:27 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಆರ್ಥಿಕವಾಗಿ ಲಾಭ ಕಾಣುವಿರಿ. ಆದರೆ ಕಳ್ಳತನದ ಭೀತಿಯೂ ಇದ್ದು, ಎಚ್ಚರಿಕೆ ಅಗತ್ಯ. ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ತೀವ್ರ ಶ್ರಮ ಅಗತ್ಯ.

ವೃಷಭ: ಹಳೆಯ ಮಿತ್ರರೊಬ್ಬರ ಸಹಾಯ ದೊರಕಿ ಕಾರ್ಯಗಳು ಸುಗಮವಾಗಿ ನೆರವೇರುವುದು. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಚಿಂತನೆ ಮಾಡುವಿರಿ. ಕುಲದೇವರನ್ನು ಆರಾಧಿಸಿದರೆ ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಬಂಧು ಮಿತ್ರರೊಂದಿಗೆ ಪ್ರವಾಸ ತೆರಳುವಿರಿ. ಅಲ್ಪಮಟ್ಟಿಗೆ ಆರೋಗ್ಯ ಕೈಕೊಡಬಹುದು. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ. ಕಚೇರಿ ಕೆಲಸಗಳಲ್ಲಿ ವಿಳಂಬ ಧೋರಣೆ ಅನುಸರಿಸುವಿರಿ.

ಕರ್ಕಟಕ: ಆಸ್ತಿ ವಿವಾದಗಳು ಕೋರ್ಟ್ ನಲ್ಲಿದ್ದರೆ, ಜಯ ನಿಮ್ಮದಾಗುವುದು. ಮಕ್ಕಳ ಭವಿಷ್ಯದ ಬಗ್ಗೆ ಮುಂದಾಲೋಚನೆ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಸಂತಸವಾಗಲಿದೆ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಿರಿಯರ ಮಾತಿಗೆ ಮನ್ನಣೆ ನೀಡಿ

ಕನ್ಯಾ: ವ್ಯವಹಾರಗಳಿಗೆ ಕೈ ಹಾಕಿದರೆ ಹಿನ್ನಡೆ ಅನುಭವಿಸಬೇಕಾದೀತು. ಸ್ವಲ್ಪ ದಿನ ತಾಳ್ಮೆಯಿಂದ ಕಾಯುವುದು ಒಳಿತು. ಕೌಟುಂಬಿಕ ಸಮಸ್ಯೆಯೊಂದು ನಿಮ್ಮನ್ನು ಹೈರಾಣಾಗಿಸಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ತುಲಾ: ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಸಂಗಾತಿಯೊಂದಿಗೆ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರವಿರಬೇಕು. ಆರೋಗ್ಯ ಸುಧಾರಿಸುವುದು.

ವೃಶ್ಚಿಕ: ಸಾಮಾಜಿಕ ಕಾರ್ಯಗಳಿಗಾಗಿ ಧನ ವಿನಿಯೋಗ ಮಾಡಬೇಕಾಗುವುದು. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಲಿದೆ. ಆದರೆ ಸಹೋದರರಿಂದ ಕಿರಿ ಕಿರಿ ಅನುಭವಿಸಬೇಕಾಗುತ್ತದೆ. ಕಾರ್ಯಸಾಧನೆಗಾಗಿ ದೂರ ಸಂಚಾರ ಮಾಡುವಿರಿ.

ಧನು: ಧನಾಗಮನಕ್ಕೇನೂ ಕೊರತೆಯಾಗದು. ನಿರೀಕ್ಷಿತ ಕಾರ್ಯಸಾಧನೆ ಮಾಡುವಿರಿ. ಆದರೆ ವಾಹನ ಚಾಲಕರು ಎಚ್ಚರಿಕೆಯಿಂದಿರುವುದು ಅಗತ್ಯ. ಸಂಗಾತಿಯ ಸಹಕಾರ ಸಿಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳು ಬರಬಹುದು.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಿರಿ. ಆರ್ಥಿಕವಾಗಿ ಸಮಸ್ಯೆಗಳೇನೂ ಇರದು. ಆದರೆ ಕೈಗೊಂಡ ಕಾರ್ಯಗಳಿಗೆ ಕೆಲವೊಂದು ಅಡಚಣೆಗಳು ತೋರಿಬಂದು ಅರ್ಧಕ್ಕೆ ನಿಲ್ಲಲಿವೆ. ದೇವತಾ ಪ್ರಾರ್ಥನೆ ಮಾಡಬೇಕು.

ಕುಂಭ:  ಕೋರ್ಟು, ಕಚೇರಿ ಎಂದು ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸುವುದು. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗುವುದು.

ಮೀನ: ಮಡದಿಯ ಮನದಿಚ್ಛೆ ಪೂರೈಸಲು ಕೆಲವೊಂದು ವಸ್ತು ಖರೀದಿ ಮಾಡಬೇಕಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಯಾವುದೇ ಕೆಲಸಕ್ಕೆ ಮೊದಲು ಹಿರಿಯರ ಆಶೀರ್ವಾದ ಪಡೆದು ಮುನ್ನಡೆಯಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments