ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 2 ಮೇ 2019 (06:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಅನಿರೀಕ್ಷಿತವಾಗಿ ಎಷ್ಟೋ ದಿನಗಳಿಂದ ಭೇಟಿಯಾಗದೇ ಇದ್ದ ಅತಿಥಿಗಳ ಆಗಮನವಾಗಲಿದೆ. ಉದ್ಯೋಗ ರಂಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ದೂರ ಪ್ರಯಾಣದ ಚಿಂತನೆ ಮಾಡುವಿರಿ.

ವೃಷಭ: ಸಾಂಸಾರಿಕವಾಗಿ ನೆಮ್ಮದಿ ಭಂಗ. ಸಂಗಾತಿಯೊಂದಿಗೆ ಮನಸ್ತಾಪ ತಪ್ಪದು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿಶಿತ ಫಲ ಸಿಗದು. ಆದರೆ ಆರ್ಥಿಕವಾಗಿ ಹಣಕಾಸಿನ ಹರಿವು ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಮಿಥುನ: ಸರ್ಕಾರಿ ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಸಾಧ್ಯತೆಯಿದೆ. ದೇಹಾರೋಗ್ಯ ಹದಗೆಟ್ಟು ಆಸ್ಪತ್ರೆ ಸೇರಬೇಕಾಗಬಹುದು. ವ್ಯಾಪಾರ ವಹಿವಾಟಿನಲ್ಲಿ ಕೊಂಚ ನಷ್ಟ ಅನುಭವಿಸುವಿರಿ. ವಿಚಾರ ಮಾಡಿ ಮುಂದಿನ ಹೆಜ್ಜೆಯಿಡಬೇಕು.

ಕರ್ಕಟಕ: ಸ್ವ ಉದ್ಯೋಗಿಗಳು ಆರ್ಥಿಕವಾಗಿ ನಿವ್ವಳ ಲಾಭ ಗಳಿಸುವರು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸುವಿರಿ. ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ.

ಸಿಂಹ: ಅಡೆತಡೆಗಳೊಂದಿಗೆ ಕೆಲಸ ಕಾರ್ಯಗಳು ವಿಳಂಬಗತಿಯಲ್ಲಿ ಸಾಗಲಿವೆ. ಹಾಗಿದ್ದರೂ ಸತತ ಪರಿಶ್ರಮದಿಂದ ಫಲ ಪಡೆಯುವಿರಿ. ಸಂಗಾತಿಯ ಆರೋಗ್ಯ ಹದಗೆಡಬಹುದು. ಸನ್ಮಿತ್ರರ ಸಹಕಾರ ದೊರೆಯಲಿದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಮೇಲಧಿಕಾರಿಗಳು ಅಸಮಾಧಾನಕ್ಕೆ ಕಾರಣರಾಗುವಿರಿ. ವ್ಯಾಪಾರಿಗಳಿಗೆ ಲಾಭಕರ ದಿನ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವುದು.

ತುಲಾ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವುದರಿಂದ ಕಾರ್ಯ ಸಿದ್ಧಿಯಾಗುತ್ತದೆ. ಮಿತ್ರರ ಸಂಕಷ್ಟಗಳಿಗೆ ಹೆಗಲು ಕೊಡುವಿರಿ. ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಕೌಟುಂಬಿಕವಾಗಿ ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕಾಗುತ್ತದೆ.

ವೃಶ್ಚಿಕ: ಆರ್ಥಿಕವಾಗಿ ಮತ್ತು ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಅನುಭವಕ್ಕೆ ಬರುವುದು. ಇದರಿಂದ ಮಾನಸಿಕ ನೆಮ್ಮದಿ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಹಿರಿಯರ ಮಾತಿಗೆ ಮನ್ನಣೆ ಕೊಡಿ.

ಧನು: ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಅಭಿಪ್ರಾಯಗಳಿಗೆ ಕಿವಿಗೊಡಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಕೋರ್ಟು ಕಚೇರಿ ವ್ಯವಹಾರಗಳನ್ನು ಮುಂದೂಡುವುದು ಒಳ್ಳೆಯದು. ದುಡುಕಿನ ವರ್ತನೆ ಬೇಡ.

ಮಕರ: ವ್ಯಾಪಾರ ವಹಿವಾಟುಗಳಲ್ಲಿ ಜಯ ಸಿಗುವುದು. ನಿರೀಕ್ಷಿಸಿದ ಆದಾಯ ಗಳಿಸುವಿರಿ. ಹೊಸ ಬಂಡವಾಳ ಹೂಡಿಕೆಗೆ ಚಿಂತನೆ ಮಾಡುವಿರಿ. ಸಹೋದರರ ವಿವಾಹ ಸಂಬಂಧ ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಸಂಗಾತಿಯ ಅಗತ್ಯಗಳನ್ನು ಪೂರೈಲು ಧನವಿನಿಯೋಗ ಮಾಡಬೇಕಾಗುತ್ತದೆ. ಮನೆ ಬದಲಾವಣೆ ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಕೈಗೆ ಸಿಕ್ಕ ಅವಕಾಶವನ್ನು ಹಾಳು ಮಾಡದೇ ಬಳಸಿಕೊಂಡರೆ ಉತ್ತಮ ಫಲ ಪಡೆಯುವಿರಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶಕೊಡಬೇಡಿ. ನಿಮ್ಮ ಬಗ್ಗೆ ಚಾಡಿ ಮಾತು ಕೇಳಿಬರಬಹುದು. ಅದಕ್ಕೆ ಉದಾಸೀನವೇ ಮದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments