Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 22 ಮೇ 2019 (06:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ವೃತ್ತ ರಂಗದಲ್ಲಿ ಕಾರ್ಯದೊತ್ತಡ ಹೆಚ್ಚಿರುವುದರಿಂದ ತಾಳ್ಮೆ ಮಿತಿ ಮೀರಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಹಿರಿಯರ ಸಲಹೆಗಳು ಪಥ್ಯವಾಗದೇ ಹೋಗಬಹುದು. ತಾಳ್ಮೆ ಅಗತ್ಯ.

ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಕಾರ್ಯಸಾಧನೆಗೆ  ಕಠಿಣ ಪರಿಶ್ರಮ ಅಗತ್ಯ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣ ಇರಲಿ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಬೆಲೆ ಸಿಕ್ಕೀತು.

ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾದೀತು. ಅನವಶ್ಯಕ ಮಾತು, ವಾದ ವಿವಾದಗಳಿಂದ ಸಂಬಂಧದಲ್ಲಿ ಬಿರುಕು ಮೂಡಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕರ್ಕಟಕ: ವ್ಯಾಪಾರ, ವಹಿವಾಟಿನಲ್ಲಿ ಮುನ್ನಡೆ, ಯಶಸ್ಸು ಇರಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರು ಶುಭ ಫಲ ನಿರೀಕ್ಷಿಸಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನೀವಂದುಕೊಂಡಂತೆಯೇ ನಡೆಯಲಿದೆ. ದೇವರ ಹರಕೆಗಳನ್ನು ತೀರಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

 
ಕನ್ಯಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚಿನ ಗಮನ ಹರಿಸಬೇಕಾದೀತು. ಸಾಲಗಾರರ ಕಾಟದಿಂದ ಹೈರಾಣಾಗುವಿರಿ. ಆರ್ಥಿಕ ಪರಿಸ್ಥಿತಿ ನಿಭಾಯಿಸುವುದರ ಬಗ್ಗೆ ಗಮನಹರಿಸಬೇಕು. ತುಂಬಾ ಒಳ್ಳೆಯವರಾಗಲು ಹೋದರೆ ನಿಮಗೇ ತೊಂದರೆ ತಪ್ಪಿದ್ದಲ್ಲ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಕೆಲಸದೊತ್ತಡವಿದ್ದರೂ ನಿಮ್ಮ ಪರಿಶ್ರಮಕ್ಕೆ ಬೆಲೆ ಸಿಗುವುದು. ಚಾಡಿ ಮಾತಿಗೆ ಕಿವಿಗೊಡಬೇಡಿ. ವೈವಾಹಿಕ ಸಂಬಂಧಗಳು ಕೂಡಿಬರುವುದು. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ಇರಬಹುದು.

ವೃಶ್ಚಿಕ: ವಿದ್ಯಾರ್ಥಿಗಳು ಶಿಕ್ಷಕರು, ಪೋಷಕರಿಂದ ಪ್ರಶಂಸೆಗೊಳಗಾಗುವರು. ಕಾರ್ಯಕ್ಷೇತ್ರದಲ್ಲಿ ತಾಳ್ಮೆಯಿಂದ ವರ್ತಿಸಿದರೆ ಉತ್ತಮ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಯಾವುದೇ ಕೆಲಸಕ್ಕೆ ಹೊರಡುವುದಿದ್ದರೂ ಸಂಗಾತಿಯ ಸಹಕಾರ ಇರುವುದರಿಂದ ಸುಗಮವಾಗಿ ನೆರವೇರುತ್ತದೆ. ಸಮಸ್ಯೆಗಳು ಹಂತ ಹಂತವಾಗಿ ದೂರವಾಗಿ, ಮನೆಯಲ್ಲಿ ನೆಮ್ಮದಿಯ ವಾತಾವರಣವಿರುವುದು.

ಮಕರ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಲಾಭ ಕಂಡುಬರುವುದು. ದಾಯಾದಿಗಳಿಂದ ವಿಶ್ವಾಸದ್ರೋಹವಾಗಬಹುದು.

ಕುಂಭ: ಉದ್ಯೋಗದಲ್ಲಿ ಬದಲಾವಣೆಯಾಗಲಿದೆ. ಆಸ್ತಿ ಖರೀದಿಗೆ ಸಕಾಲ. ಅನಿರೀಕ್ಷಿತವಾಗಿ ಬರುವ ವಾರ್ತೆಗಳು ಸಂತಸ ನೀಡಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮನಸ್ಸಿನ ನೆಮ್ಮದಿಗೆ ದೇವತಾ ಪ್ರಾರ್ಥನೆ ಮಾಡಿ.

ಮೀನ: ದೇವರ ಅನುಗ್ರಹ ನಿಮ್ಮ ಮೇಲಿದ್ದು, ಅಂದುಕೊಂಡ ಕಾರ್ಯಗಳು ನೆರವೇರುವುದು. ನಿರುದ್ಯೋಗಿಗಳು ಬಯಸಿದ ಉದ್ಯೋಗ ಗಳಿಸುವರು. ಸಾಂಸಾರಿಕವಾಗಿ ಹಳೆಯ ಸಂಬಂಧಗಳಿಗೆ ಮರುಜೀವ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments