Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 19 ಜೂನ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ವೃತ್ತಿ ಜೀವನದಲ್ಲಿ ಬಿಡುವಿಲ್ಲದ ದುಡಿಮೆಯಿಂದಾಗಿ ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಆದರೆ ಆತುರದ ನಿರ್ಧಾರ ಬೇಡ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಬಹುದು.

ವೃಷಭ: ಕಷ್ಟದ ಸಮಯದಲ್ಲಿ ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗುವುದು. ಮನೆಯಲ್ಲಿ ಶುಭ ಕಾರ್ಯಗಳ ಸಿದ್ಧತೆ ಮಾಡುವಿರಿ.

ಮಿಥುನ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಹೀಗಾಗಿ ಕೈಗೊಂಡ ಕಾರ್ಯಗಳಲ್ಲಿ ಜಯ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಮುನ್ನಡೆ ಯೋಗವಿದೆ. ಆದರೆ ಸರ್ಕಾರಿ ಕೆಲಸಗಳಲ್ಲಿ ಅಡೆತಡೆಗಳುಂಟಾಗುವ ಸಾಧ್ಯತೆಯಿದೆ.

ಕರ್ಕಟಕ: ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿರೀಕ್ಷಿತ ಜಯ ನಿಮ್ಮದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಓಡಾಟ ನಡೆಸಬೇಕಾಗುತ್ತದೆ. ಮನೆ, ಆಸ್ತಿ ಖರೀದಿ ವಿಚಾರದಲ್ಲಿ ಲಾಭವಾಗಲಿದೆ.

ಸಿಂಹ: ಕೌಟುಂಬಿಕವಾಗಿ ನೀವು ಇಂದು ಕೈಗೊಳ್ಳುವ ಕೆಲಸಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ದುಡುಕಿನ ವರ್ತನೆ ತೋರದಿರಿ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

 
ಕನ್ಯಾ: ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಅಗತ್ಯ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.

ತುಲಾ: ಸಾಂಸಾರಿಕವಾಗಿ ಸಂತೋಷದಾಯಕ ದಿನಗಳಿವು. ಮಕ್ಕಳಿಂದ ಮನಸ್ಸಿಗೆ ಖುಷಿಕೊಡುವ ವಿಚಾರಗಳನ್ನು ಆಲಿಸುವಿರಿ. ಗರ್ಭಿಣಿಯರು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು, ಆದರೆ ಖರ್ಚಿನ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಋಣಾತ್ಮಕ ಚಿಂತನೆಗಳಿಂದ ಕೆಲಸದ ಮೇಲೆ ಆಲಸ್ಯತನ ತೋರುವಿರಿ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವ್ಯಾಪಾರಿಗಳು ಕೊಂಚ ನಷ್ಟ ಅನುಭವಿಸುವರು. ತಾಳ್ಮೆ ಅಗತ್ಯ.

ಧನು: ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮೇಲುಗೈ ಸಾಧಿಸುವಿರಿ. ವಾಹನ ಖರೀದಿಗೆ ಮುಂದಾಗುವಿರಿ. ದೂರ ಸಂಚಾರ ಕೈಗೊಳ್ಳಬೇಕಾದ ಅನಿವಾರ್ಯತೆ ಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಿ, ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ದೇಹಾರೋಗ್ಯದ ಬಗ್ಗೆ ಚಿಂತೆಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ಜೀವನ ಮಾಡಿ.

ಕುಂಭ: ಅತಿ ಆಸೆ ಪಡಲು ಹೋದರೆ ಕೇಡು ತಪ್ಪಿದ್ದಲ್ಲ ಎಂಬುದನ್ನು ಮರೆಯದಿರಿ. ಮಹಿಳೆಯರಿಂದ ಅಪವಾದದ ಭೀತಿಯಿದೆ. ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆ ಅಗತ್ಯ. ಧನಾಗಮನಕ್ಕೆ ನಾನಾ ಮಾರ್ಗ ಹುಡುಕುವಿರಿ.

ಮೀನ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಆದರೆ ನಿಮ್ಮ ಎಲ್ಲಾ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ವೃತ್ತಿರಂಗದಲ್ಲಿ ಯಶಸ್ಸು ಗಳಿಸುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಖುಷಿಯಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮೀ ಫೋಟೊವನ್ನು ಈ ದಿಕ್ಕಿಗೆ ಮುಖಮಾಡಿ ಇಟ್ಟು ಪೂಜಿಸಿದರೆ ಹಣದ ಸಮಸ್ಯೆ ಎಂದೂ ಎದುರಾಗಲ್ಲ