Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 6 ಜುಲೈ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ಅಂದುಕೊಂಡ ಕಾರ್ಯಗಳು ನೆರವೇರಿ ಮನಸ್ಸಿಗೆ ಖುಷಿ ನೀಡುವುದು. ಸಂಗಾತಿಯೊಂದಿಗಿನ ಮನಸ್ತಾಪಗಳು ದೂರವಾಗುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ವೃಷಭ: ಆತುರದ ನಿರ್ಧಾರದಿಂದ ಉತ್ತಮ ಅವಕಾಶಗಳನ್ನು ಕೈ ಚೆಲ್ಲಬೇಡಿ. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಆದಾಯದ ನಾನಾ ಮೂಲಗಳನ್ನು ಹುಡುಕುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ಸ್ವ ಉದ್ಯೋಗದ ಕಡೆ ಮನಸ್ಸು ವಾಲಲಿದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಮುಖ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಉದ್ಯೋ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಪರವಾಗಿ ಇರುತ್ತಾರೆ. ಅದರ ಸದ್ಬಳಿಕೆ ಮಾಡಿಕೊಳ್ಳಬೇಕು. ಅನಿರೀಕ್ಷಿತವಾಗಿ ಬರುವ ನೆಂಟರಿಂದ ಶುಭ ವಾರ್ತೆ ಆಲಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸಂಕಷ್ಟದ ಸಮಯದಲ್ಲಿ ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆತ್ಮಸ್ಥೈರ್ಯದಿಂದ ಮುನ್ನಡೆದರೆ ಶತ್ರುಗಳೂ ನಿಮ್ಮಿಂದ ದೂರ ಸರಿಯುವರು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿಬರುತ್ತದೆ.

 
ಕನ್ಯಾ: ಮಕ್ಕಳ ಆರೋಗ್ಯ ಹದಗೆಟ್ಟು ಚಿಂತೆಗೆ ಕಾರಣವಾಗುವುದು. ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಗೆ ಪಥ್ಯವಾಗದೇ ಇರಬಹುದು. ಆಪ್ತ ಮಿತ್ರರ ನೆರವಿನಿಂದ ಕಷ್ಟದಿಂದ ಪಾರಾಗುವಿರಿ.

ತುಲಾ: ದೈವಾನುಗ್ರಹದಿಂದ ಇಂದು ನೀವು ಕೈ ಹಿಡಿದ ಕೆಲಸಗಳು ಯಶಸ್ವಿಯಾಗಿ ನೆರವೇರಲಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿರಲಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ಕಳೆ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ವಾಹನ ಸವಾರರು ಎಚ್ಚರಿಕೆಯಿಂದಿರುವುದು ಉತ್ತಮ.

ಧನು: ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸಾಹಿತ್ಯ, ಕಲಾ ಕ್ಷೇತ್ರದಲ್ಲಿರುವವರಿಗೆ ಗೌರವ, ಹೆಸರು ಹೆಚ್ಚಾಗುವುದು. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೊಗ ಸಿಗಲಿದೆ.

ಮಕರ: ಕೃಷಿಕರಿಗೆ ಇದುವರೆಗೆ ಇದ್ದ ತೊಂದರೆಗಳು ದೂರವಾಗುವುದು. ಆಸ್ತಿ ಖರೀದಿ, ಗೃಹ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಬಹುದು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ಕುಂಭ: ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರುವುದು. ವ್ಯವಹಾರದಲ್ಲಿ ಮುನ್ನಡೆಯಿರಲಿದೆ.

ಮೀನ: ಕಾರ್ಯ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ನಿಮ್ಮ ಉತ್ಸಾಹ ಭಂಗವಾಗಲಿದೆ. ಸಾಂಸಾರಿಕವಾಗಿ ಕಿರಿ ಕಿರಿ ಇದ್ದರೂ ಸಂಗಾತಿಯಿಂದ ಸಹಕಾರ ದೊರೆಯುವುದು. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸುದ್ದಿ ಕಾದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕುಟುಂಬ ಆನಂದಮಯವಾಗಿರಲು ದೀಪದ ಎಣ್ಣೆಗೆ ಇದನ್ನ ಸೇರಿಸಿ ದೇವರ ಮುಂದೆ ಇಡಿ