Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 23 ಆಗಸ್ಟ್ 2019 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬಾರದೇ ಚಿಂತೆಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸ ಮಾಡಬೇಕಾಗುತ್ತದೆ. ಹಾಗಿದ್ದರೂ ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ದೊರಕುವುದು. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾಗಬಹುದು. ಸ್ವ ಉದ್ಯೋಗಿಗಳಿಗೆ ನಿವ್ವಳ ಲಾಭ ಸಿಗಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

ಮಿಥುನ: ಸಂಗಾತಿಯ ಮನೋಕಾಮನೆಗಳನ್ನು ಪೂರೈಸುವಿರಿ. ಆದಾಯಕ್ಕಿಂತ ಹೆಚ್ಚು ಖರ್ಚಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಕಡಿಮೆಯಾಗಬಹುದು. ಹಿರಿಯರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಆರ್ಥಿಕವಾಗಿ ಚೇತರಿಕೆ ಕಂಡುಬಂದು ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡುವಿರಿ.

ಸಿಂಹ: ರಾಜಕೀಯ ರಂಗದವರಿಗೆ ಸ್ಥಾನ ಮಾನ ಹೆಚ್ಚುವುದು. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದ ವ್ಯವಹರಿಸಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಸಂಗಾತಿಯ ಜತೆಗೆ ಕೌಟುಂಬಿಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ವಿರಸ ಮೂಡಬಹುದು. ದುಡುಕಿನ ಮಾತನಾಡಲು ಹೋಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ.

ತುಲಾ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಿಗಾಗಿ ಓಡಾಟ ನಡೆಸುವಿರಿ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಅರ್ಧಕ್ಕೆ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ್ಯತೆಯಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಹಿರಿಯರ ಸಲಹೆಗಳು ಪಥ್ಯವಾಗದು. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರಶಂಸೆಗೊಳಗಾಗುವರು. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರದಲ್ಲಿ ಕಿರಿ ಕಿರಿಯಾಗಬಹುದು. ಆದರೆ ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಮಾತಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು. ಸಣ್ಣ ವ್ಯಾಪಾರಿಗಳಿಗೆ ಮುನ್ನಡೆಯಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಕರ: ಹೊಸ ಜನರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ತಾಳ್ಮೆ ಅಗತ್ಯ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಂದ ಅಂದುಕೊಂಡ ಕಾರ್ಯಗಳನ್ನು ಪೂರ್ತಿ ಮಾಡಲಾಗದು. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯಿಂದ ಕಿರಿ ಕಿರಿ ತಪ್ಪದು. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು. ತಾಳ್ಮೆಯಿಂದಿರಿ.

ಮೀನ: ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆಯಿರುತ್ತದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಚಿಂತನೆ ಮಾಡುವರು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ದ್ರಾ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?