Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 24 ಆಗಸ್ಟ್ 2019 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹೋಪಯೋಗಿ ವಸ್ತುಗಳ ಖರೀದಿ ಯೋಗವಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಸಂಗಾತಿ ಜತೆಗೆ ಅಸಮಾಧಾನವಾಗುವುದು. ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ವೃಷಭ: ಧನಾಗಮನ ವೃದ್ಧಿಸಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ವೃತ್ತಿ ರಂಗದಲ್ಲಿ ಉನ್ನತ ಸ್ಥಾನ ಮಾನ ಲಭ‍್ಯವಾಗುವುದು. ಅಧಿಕಾರಿ ವರ್ಗದವರಿಗೆ ಮುನ್ನಡೆ ಯೋಗವಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಿಥುನ: ಮೇಲ್ವರ್ಗದ ಅಧಿಕಾರಿಗಳಿಗೆ ವೇತನ ಹೆಚ್ಚಳ ಸಂಭವ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೇವತಾ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಅವಿವಾಹಿತ ಸ್ತ್ರೀಯರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಲಭ‍್ಯವಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ.

ಸಿಂಹ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಸಿಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಯಾರಿಗೂ ಈ ದಿನ ಸಾಲ ಕೊಡಲು ಹೋಗಬೇಡಿ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕನ್ಯಾ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಅನಿರೀಕ್ಷಿತ ರೂಪದಲ್ಲಿ ಖರ್ಚು ವೆಚ್ಚಗಳು ಎದುರಾಗಲಿವೆ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು. ಉದ್ಯೋಗದಲ್ಲಿ ವರ್ಗಾವಣೆಯ ಭೀತಿಯಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿವೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು.

ವೃಶ್ಚಿಕ: ದೇವತಾ ದರ್ಶನದಿಂದ ಮನಸ್ಸಿಗೆ ನೆಮ್ಮದಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರಾಸಕ್ತಿ ಉಂಟಾದೀತು. ಸಾಂಸಾರಿಕವಾಗಿ ಸಂತಸದ ದಿನಗಳು ನಿಮ್ಮದಾಗಲಿವೆ. ಅನಿರೀಕ್ಷಿತವಾಹಿ ಹಳೆಯ ಮಿತ್ರನ ಭೇಟಿ ಸಾಧ್ಯತೆ. ಆರೋಗ್ಯದಲ್ಲಿ ಎಚ್ಚರಿಕೆಯಿರಲಿ.

ಧನು: ರಾಜಕೀಯ ರಂಗದಲ್ಲಿ ಉತ್ತಮ ಸ್ಥಾನ ಮಾನ ಲಭ‍್ಯವಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ನಿಮ್ಮ ಆರೋಗ್ಯದಲ್ಲಿ ಸುಧಾರಣೆಯಾಗುವುದು. ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ.

ಮಕರ: ನೂತನ ವೃತ್ತಿಯಲ್ಲಿ ಮುನ್ನಡೆಯಾಗಲಿದೆ. ಸಾಕಷ್ಟು ಧನಾಗಮನವಾಗುವುದರಿಂದ ಅಂದುಕೊಂಡ ಕಾರ್ಯ ಸುಗಮವಾಗಿ ನೆರವೇರಿಸುವಿರಿ. ಸಾಂಸಾರಿಕವಾಗಿ ಸಂತಸದ ಕ್ಷಣ ನಿಮ್ಮದಾಗುವುದು. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಕುಂಭ: ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವಾಗ್ವಾದವಾಗುವ ಸಾಧ್ಯತೆಯಿದೆ. ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು.

ಮೀನ: ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಲಿವೆ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments