ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 31 ಆಗಸ್ಟ್ 2019 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ನಿವಾರಣೆಯಾಗಿ ನೆಮ್ಮದಿ ಸಿಗಲಿದೆ. ಭೂಮಿ, ಮನೆ ಖರೀದಿ ವ್ಯವಹಾರ ಮಾಡಲು ಇದು ಉತ್ತಮ ದಿನ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ದಾಯಾದಿಗಳ ವೈಷಮ್ಯಕ್ಕೆ ಕೊನೆ ಹಾಡಲು ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆರೋಗ್ಯ ಸಮಸ್ಯೆಯಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ಆದಾಯವಿದ್ದಷ್ಟೇ ಖರ್ಚೂ ಇರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು.

ಮಿಥುನ: ಆರ್ಥಿಕವಾಗಿ ನಿವ್ವಳ ಲಾಭ ಸಿಗುವುದರಿಂದ ಆದಾಯಕ್ಕೆ ಕೊರತೆಯಿರದು. ಆದರೆ ವಿಶ್ವಾಸಕ್ಕೆ ದ್ರೋಹ ಬಗೆಯುವವರು ನಿಮ್ಮ ಬೆನ್ನ ಹಿಂದೆಯೇ ಇರುವರು. ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆ. ಸಂಚಾರದಲ್ಲಿ ಜಾಗ್ರತೆ ವಹಿಸಿ.

ಕರ್ಕಟಕ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡಬಂದೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗುವುದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕಿಳಿಸಲು ಇದು ಸಕಾಲ. ಕಾರ್ಯನಿಮಿತ್ತ ಅಧಿಕ ಓಡಾಟವಿರುತ್ತದೆ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಅನಿರೀಕ್ಷಿತವಾಗಿ ನೆಂಟರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಖರ್ಚಿನ ಬಗ್ಗೆ ಹಿಡಿತವಿರಲಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ.

ಕನ್ಯಾ: ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಎದುರಾಗಲಿವೆ. ಹಾಗಿದ್ದರೂ ನೀವು ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಆರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ತುಲಾ: ಧಾರ್ಮಿಕ ಕಾರ್ಯಗಳನ್ನು ನೆರವೇರಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಉದ್ಯೋಗ ರಂಗದಲ್ಲಿ ಉತ್ತಮ ಅವಕಾಶಗಳು ಎದುರಾಗಲಿವೆ. ಕೃಷಿಕರಿಗೆ ಕೊಂಚ ಹಿನ್ನಡೆಯಾಗಬಹುದು. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಎಲ್ಲವೂ ನೀವು ಅಂದುಕೊಂಡಂತೆ ನೆರವೇರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡುವರು. ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಖರ್ಚಿನ ಬಗ್ಗೆ ಹಿಡಿತವಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಮಾಡುವುದು ಅಗತ್ಯ. ನಿಮ್ಮ ಅದೃಷ್ಟ ಚೆನ್ನಾಗಿದ್ದು, ನೀವು ಅಂದುಕೊಂಡ ಕಾರ್ಯಗಳು ನಿಮಗೆ ಬೇಕಾದ ರೀತಿಯಲ್ಲಿ ನೆರವೇರಲಿದೆ. ಚಾಡಿ ಮಾತುಗಳನ್ನು ಅಲಕ್ಷಿಸುವುದು ಒಳ್ಳೆಯದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದುವೇ ಸಕಾಲ. ಆರಂಭಿಕ ವಿಘ್ನಗಳನ್ನು ದೂರ ಮಾಡಲು ಕುಲದೇವರ ಪ್ರಾರ್ಥನೆ ಮಾಡಿ. ಮಕ್ಕಳ ಭವಿಷ್ಯದ ಬಗ್ಗೆ ಹೊಸ ಯೋಜನೆ ರೂಪಿಸುವಿರಿ. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯವಾಗುವುದು.

ಕುಂಭ: ಸಂಗಾತಿಯ ಅನಾರೋಗ್ಯ ಚಿಂತೆಗೀಡು ಮಾಡುವುದು. ಕೌಟುಂಬಿಕವಾಗಿ ಕೆಲವೊಂದು ಮಹತ್ವದ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆದಾಯವಿದ್ದಷ್ಟೇ ಖರ್ಚೂ ಬರಲಿದೆ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಿದೆ. ವಾಹನ ಸವಾರರು ಚಾಲನೆ ಸಮಯದಲ್ಲಿ ಎಚ್ಚರವಿರಬೇಕು.

ಮೀನ: ನಿರೀಕ್ಷಿತ ರೀತಿಯಲ್ಲಿ ಕೆಲಸ ಕಾರ್ಯಗಳು ನೆರವೇರುವುದರಿಂದ ಚಿಂತೆ ಮಾಡಬೇಕಾಗಿಲ್ಲ. ಮಹಿಳಾ ಉದ್ಯೋಗಿಗಳಿಗೆ ಶುಭ ಫಲಗಳಿವೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಅವಿವಾಹಿತರ ವಿವಾಹ ಪ್ರಯತ್ನದಲ್ಲಿ ಯಶಸ್ಸು ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments