Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 2 ಸೆಪ್ಟಂಬರ್ 2019 (06:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಕಿರು ಪ್ರವಾಸ, ಪ್ರೀತಿ ಪಾತ್ರರ ಭೇಟಿ ಸಾಧ್ಯತೆ. ಹಾಗಿದ್ದರೂ ಸಂಗಾತಿಯ ಕೆಲವೊಂದು ನಿರ್ಧಾರಗಳು ಪಥ್ಯವಾಗದೇ ಬೇಸರವಾಗುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ದೂರ ಸಂಚಾರ ಸಾಧ್ಯತೆ.

ವೃಷಭ: ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ಯೋಗವಿದೆ. ಯಂತ್ರ ಸಂಬಂಧವಾದ ಕೆಲಸ ಮಾಡುವವರಿಗೆ ಯಶಸ್ಸು. ನಿರುದ್ಯೋಗಿಗಳಿಗೆ ಅವಕಾಶಗಳು ಹುಡುಕಿಕೊಂಡು ಬರಲಿವೆ. ಕೌಟುಂಬಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

ಮಿಥುನ: ಕೌಟುಂಬಿಕವಾಗಿ ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವ್ಯಯವಾಗಲಿದೆ. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಭೂಮಿ, ಮನೆ ಖರೀದಿಗೆ ಕೆಲವು ದಿನ ಕಾಯುವುದು ಒಳಿತು. ವ್ಯಾಪಾರಿ ವರ್ಗದವರಿಗೆ ಮುನ್ನಡೆಯಿರುತ್ತದೆ.

ಕರ್ಕಟಕ: ವ್ಯಾಪಾರ, ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಅನಿರೀಕ್ಷಿತ ರೂಪದಲ್ಲಿ ಕೆಲಸ ಕಾರ್ಯಗಳು ನೀವಂದುಕೊಂಡಂತೇ ನಡೆಯಲಿವೆ. ಆರ್ಥಿಕವಾಗಿ ಕೊಂಚ ಇಕ್ಕಟ್ಟಿನ ಪರಿಸ್ಥಿತಿ ಎದುರಾದರೂ ಚಿಂತೆ ಬೇಕಾಗಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕಾರ್ಯ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ವೃತ್ತಿರಂಗದಲ್ಲಿ ಸಮಚಿತ್ತ ಪ್ರದರ್ಶಿಸಬೇಕಾಗುತ್ತದೆ. ನಿಮ್ಮ ತಾಳ್ಮೆ ಕೆಣಕುವ ಘಟನೆಗಳು ನಡೆಯಲಿವೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಮನೋಭಾವ ಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ವ್ಯಾಪಾರಿಗಳಿಗೆ ಉತ್ತಮ ಬಂಡವಾಳ ಹೂಡಿಕೆಗೆ ಅವಕಾಶಗಳು ಎದುರಾಗಲಿವೆ. ಅನಿವಾರ್ಯ ಕಾರಣಗಳಿಂದ ಬೇರೆ ಊರಿಗೆ ಪ್ರಯಾಣ ಮಾಡಬೇಕಾಗುತ್ತದೆ. ಮಾನಸಿಕವಾಗಿ ನೆಮ್ಮದಿಗೆ ಭಂಗ ತರುವಂತಹ ಘಟನೆಗಳು ನಡೆಯಲಿವೆ. ತಾಳ್ಮೆಯಿಂದಿರುವುದು ಮುಖ್ಯ.

ವೃಶ್ಚಿಕ: ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ ಯೋಗವಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಮುಖ್ಯ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಅಗತ್ಯ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಧನು: ಅನಿರೀಕ್ಷಿತವಾಗಿ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ನಿರೀಕ್ಷಿತ ರೀತಿಯಲ್ಲಿ ಕಾರ್ಯಸಿದ್ಧಿಯಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಮಕ್ಕಳ ಭವಿಷ್ಯಕ್ಕಾಗಿ ಧನ ವ್ಯಯಮಾಡಬೇಕಾಗುತ್ತದೆ.

ಮಕರ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯುವುದು. ಚಿಂತೆ ಬೇಕಾಗಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು.

ಕುಂಭ: ಯಾವುದೋ ಕಾರಣಗಳಿಂದ ಕುಂಠಿತವಾಗಿದ್ದ ಕೆಲಸಗಳು ಪೂರ್ತಿಯಾಗಲಿವೆ. ವೃತ್ತಿರಂಗದಲ್ಲಿ ನಿಮ್ಮ ಪ್ರತಿಭೆಯನ್ನು ತೋರ್ಪಡಿಸಲು ಅವಕಾಶಗಳು ಸಿಗುವುದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ.

ಮೀನ: ವೈಯಕ್ತಿಕ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಅನವಶ್ಯಕ ವಿಚಾರಗಳಲ್ಲಿ ತಲೆ ತೂರಿಸಲು ಹೋಗಿ ಸಂಬಂಧ ಹಾಳುಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಕಿರು ಸಂಚಾರ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

ಮುಂದಿನ ಸುದ್ದಿ
Show comments