Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 7 ಸೆಪ್ಟಂಬರ್ 2019 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅಧಿಕಾರಿ ವರ್ಗದವರಿಗೆ ವರ್ಗಾವಣೆಯ ಸಂಭವವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಆದಾಯ ಉತ್ತಮವಾಗಿರುತ್ತದೆ. ಆದರೆ ವಂಚನೆಗೊಳಗಾಗುವ ಭೀತಿಯಿದೆ. ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗ ಲಾಭ.

ವೃಷಭ: ಇದುವರೆಗೆ ಇದ್ದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ವಿದ್ಯಾರ್ಥಿಗಳಿಗೆ ಚಿತ್ತಚಾಂಚಲ್ಯ ಕಾಡಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವಾಹನ ಚಾಲಕರು ಚಾಲನೆಯಲ್ಲಿ ಅತೀವ ಎಚ್ಚರಿಕೆ ವಹಿಸಬೇಕು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಂಬಿಕೊಂಡವರಿಂದಲೇ ವಂಚನೆಗೊಳಗಾಗುವ ಅಪಾಯವಿದೆ. ಮನಸ್ಸಿಗೆ ಬೇಸರವಾಗುವ ಘಟನೆಗಳು ನಡೆಯಬಹುದು. ನಿರುದ್ಯೋಗಿಗಳಿಗೆ ಹಲವು ಅವಕಾಶಗಳು ಒದಗಿಬರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

ಕರ್ಕಟಕ: ಅಂದುಕೊಂಡ ಕೆಲಸ ಕಾರ್ಯಗಳನ್ನು ನಿರೀಕ್ಷಿತ ರೀತಿಯಲ್ಲಿ ಮಾಡಿ ಮುಗಿಸುವಿರಿ. ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದರೆ ಲಾಭ ಕೈಗೆ ಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬರಬಹುದು. ಅವಿವಾಹಿತರ ವಿವಾಹ ಪ್ರಯತ್ನ ಫಲಗೂಡಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ವ್ಯವಹಾರದಲ್ಲಿ ಮುನ್ನಡೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಹಣಕಾಸಿನ ವ್ಯವಹಾರದಲ್ಲಿ ಕೆಸಲ ಮಾಡುತ್ತಿದ್ದರೆ ಇಂದು ಅದೃಷ್ಟ ನಿಮ್ಮ ಕೈ ಹಿಡಿಯಲಿದೆ. ಅಂದುಕೊಂಡ ಕಾರ್ಯ ನೆರವೇರುವುದು. ಉತ್ತಮ ಲಾಭ ಸಿಗುವುದು. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಫಲಿತಾಂಶ.

ತುಲಾ: ಹಿರಿಯರೊಡನೆ ಕೌಟುಂಬಿಕ ವಿಚಾರವಾಗಿ ಅನಗತ್ಯ ವಾದ ವಿವಾದವಾಗದಂತೆ ಎಚ್ಚರಿಕೆ ವಹಿಸಿ. ಅರ್ಧಕ್ಕೇ ನಿಂತು ಹೋದ ಕೆಲಸಗಳಿಗೆ ಚಾಲನೆ ನೀಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಸಂಗಾತಿಯ ಮನೋಕಾಮನೆ ಪೂರೈಸುವಿರಿ.

ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ ಕಂಡುಬರುವುದು, ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ನಡೆಸುವಿರಿ. ಅಧಿಕಾರಿ ವರ್ಗದವರಿಗೆ ಮುನ್ನಡೆಯಿದೆ. ಅನಿರೀಕ್ಷಿತವಾಗಿ ಶುಭ ಸುದ್ದಿ ಕಾದಿದೆ.

ಧನು: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ನಿಮ್ಮ ಮನೋಕಾಮನೆಗಳನ್ನು ಪೂರೈಸಲು ಪಣ ತೊಡುವಿರಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಬಹುದು. ಆರೋಗ್ಯದಲ್ಲಿ ಸುಧಾರಣೇಯಾಗುವುದು.

ಮಕರ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳನ್ನು ನೆರವೇರಿಸುವಿರಿ. ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮನೋಕಾಮನೆಗಳು ಪೂರ್ತಿಯಾಗುವುದು. ಸಾಂಸಾರಿಕವಾಗಿಯೂ ನೆಮ್ಮದಿಯ ದಿನವಾಗಲಿದೆ.

ಕುಂಭ: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆಯ ಕಂಡುಬರುವುದು. ಸಂಗಾತಿಯೊಂದಿಗೆ ಸಣ್ಣ ಪುಟ್ಟ ಮನಸ್ತಾಪಗಳು ಕಂಡುಬರುವುದು. ತಾಳ್ಮೆಯಿಂದ ವ್ಯವಹರಿಸಿ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬರಲಿದೆ.

ಮೀನ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಭಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಇಷ್ಟ ಮಿತ್ರರ ಭೇಟಿ, ಪ್ರವಾಸ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments