Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 9 ಸೆಪ್ಟಂಬರ್ 2019 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳಿಗೆ ಅಂತ್ಯ ಕಾಣಿಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಹೊಸ ಕೆಲಸಗಳಿಗೆ ಕೈ ಹಾಕಲು ಸೂಕ್ತ ದಿನ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ಋಣಾತ್ಮಕ ಚಿಂತನೆಗಳನ್ನು ದೂರ ಮಾಡಿ.

ವೃಷಭ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ತೋರಿಬರುವುದು. ಮಿತ್ರರ ಸಹಕಾರದಿಂದ ಉದ್ಯೋಗ ಕ್ಷೇತ್ರದಲ್ಲಿ ಬರುವ  ಅಡೆತಡೆಗಳನ್ನು ದಾಟುವಿರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಸಂಗಾತಿಯ ಸಲಹೆಗಳಿಗೆ ಕಿವಿಗೊಡದಿದ್ದರೆ ಅಪಾಯ ತಪ್ಪಿದ್ದಲ್ಲ. ಉದ್ಯೋಗದಲ್ಲಿ ಮುನ್ನಡೆಯಿರುವುದು. ಆರ್ಥಿಕವಾಗಿ ಖರ್ಚಿನ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಅಧಿಕ ಲಾಭ ತಂದುಕೊಡುವ ಉದ್ಯೋಗದ ಬಗ್ಗೆ ಚಿಂತನೆ ನಡೆಸುವಿರಿ. ನಿಮ್ಮ ಕ್ರಿಯಾಶೀಲತೆಯನ್ನು ಬಳಸಿಕೊಳ್ಳಲು ಸಕಾಲವಿದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕೌಟುಂಬಿಕವಾಗಿ ಹೊಂದಾಣಿಕೆಯಿಂದಿರಬೇಕು.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಉತ್ತಮವಾಗುವುದು. ಹಣಕಾಸಿನ ಪರಿಸ್ಥಿತಿ ಸುಧಾರಿಸಿ ಆದಾಯ ದ್ವಿಗುಣಗೊಳ್ಳುವುದು. ಹೊಸ ಕೆಲಸಗಳಿಗೆ ಕೈ ಹಾಕಲು ಸೂಕ್ತ ದಿನ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಆಸ್ತಿ ವಿವಾದಗಳಿಗೆ ಅಂತ್ಯ ಸಿಗಲಿದೆ. ಮನೆ ರಿಪೇರಿ ಕೆಲಸಗಳಿಗೆ ಹೆಚ್ಚಿನ ಧನವ್ಯಯವಾಗಲಿದೆ. ನೂತನ ದಂಪತಿಗಳಿಗೆ ಸಂತಾನ ಪಲ ಸೂಚನೆ ಸಿಗುವುದು. ಇಷ್ಟ ಮಿತ್ರರ ಭೇಟಿಯಾಗುವಿರಿ. ಕೌಟುಂಬಿಕವಾಗಿ ನೆಮ್ಮದಿಯಿರುವುದು.

ತುಲಾ: ಕೃಷಿ ಕ್ಷೇತ್ರದಲ್ಲಿರುವವರಿಗೆ ಕೊಂಚ ವಾತಾವರಣದ ಅನಾನುಕೂಲ ಕೆಲಸದ ಮೇಲೆ ಪರಿಣಾಮ ಬೀರಬಹುದು. ಆರ್ಥಿಕವಾಗಿ ಕೊಂಚ ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ಪ್ರೀತಿ ಪಾತ್ರರಿಗಾಗಿ ಅಮೂಲ್ಯ ಸಮಯ ಮೀಸಲಿಡಬೇಕಾಗುತ್ತದೆ.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯೆತೆಯಿದೆ. ಆದರೆ ಉದರ ಸಂಬಂಧೀ ಅನಾರೋಗ್ಯ ಕಾಡಬಹುದು, ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗುತ್ತದೆ, ಪ್ರಯಾಣದಲ್ಲಿ ಕಳ್ಳತನವಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗದಲ್ಲಿ ಕಾರ್ಯದೊತ್ತಡ ಅಧಿಕವಾಗಿರುವುದು.

ಧನು: ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಧನವಿನಿಯೋಗ ಮಾಡಬೇಕಾಗುತ್ತದೆ. ದುಡುಕಿನ ವರ್ತನೆ ತೋರದಿರಿ. ಮಾತಿನ ಮೇಲೆ ನಿಗಾ ಇರಲಿ. ಸಹೋದರರೊಂದಿಗೆ ಆಸ್ತಿ ವಿಚಾರಕ್ಕೆ ವಿವಾದವಾಗಬಹುದು. ತಾಳ್ಮೆಯಿಂದಿರಿ.

ಮಕರ: ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಭೂಮಿ ವಿಚಾರಕ್ಕೆ ಸಂಬಂಧಿಸಿದ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಸಿಗುವುದು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳ ಸಂಭವ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳನ್ನು ದೂರ ಮಾಡಿ ಗಟ್ಟಿ ನಿರ್ಧಾರ ಕೈಗೊಳ್ಳಬೇಕಾದ ದಿನವಿದು. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹೆಚ್ಚಿನ ಧನಾರ್ಜನೆಗೆ ಮಾರ್ಗ ಹುಡುಕುವಿರಿ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು.

ಮೀನ: ಮಹಿಳಾ ಉದ್ಯೋಗಿಗಳು ಉದ್ಯೋಗದಲ್ಲಿ ಶುಭ ಫಲ ಪಡೆಯುವರು. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ಶೈಕ್ಷಣಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನೇ ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಶಂಕರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಶನಿ ದೋಷವಿರುವವರು ಇಂದು ಆಂಜನೇಯನ ಈ ಸ್ತೋತ್ರವನ್ನು ಓದಿ

ಮಂಗಳವಾರ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

ಮುಂದಿನ ಸುದ್ದಿ
Show comments