ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 11 ಸೆಪ್ಟಂಬರ್ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಹಿಳೆಯರಿಂದ ಧನಲಾಭವಾಗಲಿದೆ. ಆದರೂ ಮಾನಸಿಕವಾಹಿ ಹಲವು ಚಿಂತೆಗಳು ಕಾಡಲಿವೆ.ಸಂಗಾತಿಯ ಮನೋಕಾಮನೆ ಪೂರೈಸಲು ಮುಂದಾಗಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡದಿಂದ ಹೈರಾಣಾಗುವಿರಿ.

ವೃಷಭ: ವಿನಾಕಾರಣ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಕಿರಿ ಕಿರಿ ಉಂಟಾಗಬಹುದು. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ಹೊಂದಿರುವವರಿಗೆ ಶುಭ ಫಲ ಸಿಗುವುದು.

ಮಿಥುನ: ಆರ್ಥಿಕವಾಗಿ ಆದಾಯ ಕಡಿಮೆಯಾಗಿ ಹಣಕಾಸಿನ ಮುಗ್ಗಟ್ಟುಗಳು ತಲೆದೋರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸವಿರುವುದು. ಆದರೆ ಸಕಾಲದಲ್ಲಿ ಮಿತ್ರರಿಂದ ಸಹಕಾರ ದೊರೆಯುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಹಿರಿಯರ ಆಶೀರ್ವಾದ ನಿಮ್ಮ ಮೇಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡುವಿರಿ. ದೇವಾಲಯ ಸಂದರ್ಶನ ಮಾಡುವಿರಿ. ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ವೆಚ್ಚಗಳಾಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಾಡಲಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಕಿರಿ ಕಿರಿ.

ಕನ್ಯಾ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಹಿತಶತ್ರುಗಳು ಬೆನ್ನ ಹಿಂದೆಯೇ ಇರುತ್ತಾರೆ, ಎಚ್ಚರದಿಂದಿರುವುದು ಮುಖ್ಯ. ಆರ್ಥಿಕವಾಗಿ ನಾನಾ ಬಗೆಯ ಖರ್ಚು ವೆಚ್ಚಗಳು ಎದುರಾಗಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮನೆ ಬಳಕೆಗಾಗಿ ನೂತನ ವಸ್ತುಗಳ ಖರೀದಿ ಮಾಡುವಿರಿ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವವರಿಗೆ ಉನ್ನತಿ ಸಿಗುವುದು. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ, ಎಚ್ಚರಿಕೆಯಿಂದಿರಬೇಕಾಗುತ್ತದೆ.

ಧನು: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ಪಡೆಯುವಿರಿ. ಹೂಡಿಕೆ ಮಾಡಲು ಇದು ಸಕಾಲ. ಹೊಸ ವಾಹನ, ಮನೆ ಖರೀದಿ ಬಗ್ಗೆಯೂ ಚಿಂತನೆ ನಡೆಸುವಿರಿ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ.

ಮಕರ: ನಿಮ್ಮ ಉತ್ತಮ ನಡುವಳಿಕೆ ಎಲ್ಲರಿಂದ ಪ್ರಶಂಸೆಗೊಳಗಾಗುವುದು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸಲಿದ್ದೀರಿ. ಹಿರಿಯರು ಆರೋಗ್ಯದ ಮೇಲೆ ಕಾಳಜಿ ವಹಿಸಬೇಕು. ಕಷ್ಟದ ಸಮಯದಲ್ಲಿ ಸನ್ಮಿತ್ರರ ಸಹಕಾರ ದೊರೆಯುವುದು.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದರಿಂದ ಮನಸ್ಸಿಗೆ ಸಂತಸವಾಗುವುದು. ಮಹಿಳಾ ಅಧಿಕಾರಿಗಳಿಗೆ ಶುಭ ಫಲ. ಸಾಂಸಾರಿಕವಾಗಿ ನೆಮ್ಮದಿಯಿರುತ್ತದೆ.

ಮೀನ: ಇಷ್ಟಮಿತ್ರರ ಭೇಟಿ, ಭೋಜನ ಸಾಧ್ಯತೆಯಿದೆ. ಉದ್ಯೋಗ ಕ್ಷೇತ್ರದಲ್ಲಿ ಏನೋ ಒಂದು ರೀತಿಯ  ಅಸಮಾಧಾನವಿರುವುದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶಕೊಡಬೇಡಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕೇಳುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments