Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 8 ಅಕ್ಟೋಬರ್ 2019 (07:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ಬಂಧುಮಿತ್ರರ ಭೇಟಿ ಸಾಧ‍್ಯತೆಯಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಆದರೂ ತಾಳ್ಮೆಯಿಂದ ನಡೆದುಕೊಂಡರೆ ನೆಮ್ಮದಿಗೆ ಕೊರತೆಯಿರದು. ಖರ್ಚು ವೆಚ್ಚದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ವಿಘ‍್ನಗಳು ಎದುರಾಗಬಹುದು. ಎದೆಗುಂದದೇ ಮುನ್ನಡೆಯಬೇಕು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದ ಆರಂಭ ಮಾಡಿ. ಹೊಸ ವಸ್ತುಗಳ ಖರೀದಿ ಸಾಧ್ಯತೆಯಿದೆ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ಪ್ರೀತಿ ಪಾತ್ರರ ಇಚ್ಛೆಗೆ ಬೆಲೆ ಕೊಡಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಕರ್ಕಟಕ: ವ್ಯವಹಾರ, ವ್ಯಾಪಾರ ಕ್ಷೇತ್ರದಲ್ಲಿ ಉನ್ನತಿಯಿರಲಿದೆ. ಹೊಸ ಬಂಡವಾಳ ಹೂಡಿಕೆಗೆ ಇದು ಸಕಾಲ. ಹಿತಶತ್ರುಗಳ ಬಗ್ಗೆ ಎಚ್ಚರದಿಂದಿರಿ. ವಾಹನ ಸವಾರರು ಎಚ್ಚರವಾಗಿರಬೇಕು. ಸಂಗಾತಿಯ ಮನದಾಸೆ ಪೂರೈಸುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಶುಭ ಕೆಲಸಗಳನ್ನು ಆರಂಭಿಸಲು ಇದು ಹೇಳಿ ಮಾಡಿಸಿದ ದಿನವಾಗಿರಲಿದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ಅಗತ್ಯ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಸಿಗಲಿದೆ.

 
ಕನ್ಯಾ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಕೌಟುಂಬಿಕವಾಗಿ ಸುಂದರ ಕ್ಷಣಗಳನ್ನು ಕಳೆಯುವಿರಿ. ಪ್ರೀತಿ ಪಾತ್ರರೊಂದಿಗೆ ಕಿರು ಪ್ರವಾಸ ಮಾಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದ ಚಿಂತೆ ಕಾಡಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಹೋದರಿಯರಿಂದ ಆಸ್ತಿ ವಿಚಾರವಾಗಿ ಕಿರಿ ಕಿರಿ ಉಂಟಾದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಶುಭ ಕಾರ್ಯಗಳನ್ನು ನಡೆಸಲು ಸಕಾಲ.

ವೃಶ್ಚಿಕ: ಅಧಿಕ ಧನಲಾಭವಾಗುವ ಕೆಲಸಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಸ್ವ ವ್ಯವಹಾರ ಮಾಡುವವರಿಗೆ ಸಣ್ಣ ಮಟ್ಟಿಗಿನ ಲಾಭ ಕಂಡುಬರಲಿದೆ. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ.

ಧನು: ಅನಿರೀಕ್ಷಿತವಾಗಿ ಇಷ್ಟಮಿತ್ರರು, ಬಂಧುಗಳ ಭೇಟಿಯಾಗಿ ಮನಸ್ಸಿಗೆ ನೆಮ್ಮದಿಯಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ.  ಆದಾಯ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ಅಗತ್ಯ. ಹಿರಿಯರಿಂದ ಬಂದ ಬಳವಳಿಯನ್ನು ಕಾಪಾಡಿಕೊಳ್ಳುವ ಜವಾಬ್ಧಾರಿ ನಿಮ್ಮದಾಗಲಿದೆ.

ಮಕರ: ಹೆಚ್ಚು ಲಾಭ ಬರುವಂತಹ ಉದ್ಯೋಗದ ಕಡೆಗೆ ಚಿಂತನೆ ನಡೆಸುವಿರಿ. ಆದರೆ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆ ಅಗತ್ಯ. ವಾಹನ, ಭೂಮಿ ಖರೀದಿ ಯೋಗವಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ. ಮಹಿಳೆಯರಿಗೆ ಇಂದು ಅಂದುಕೊಂಡಿದ್ದು ನೆರವೇರಿದ ಖುಷಿ ಸಿಗುವುದು.

ಕುಂಭ: ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ವಿನಾಕಾರಣ ವಾಗ್ವಾದಕ್ಕಿಳಿಯಬೇಡಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಸಿಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮೀನ: ಮಹಿಳಾ ಉದ್ಯೋಗಿಗಳಿಗೆ ಶುಭ ಫಲ ಪ್ರಾಪ್ತಿಯಾಗುವುದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ. ನಿಮ್ಮ ಬೆಳವಣಿಗೆ ಕಂಡು ಸಹೋದ್ಯೋಗಿಗಳೇ ಅಸೂಯೆಪಡಬಹುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!