ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 10 ಅಕ್ಟೋಬರ್ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಲು ಮರೆಯದಿರಿ.

ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ಅಡೆತಡೆಗಳು ಎದುರಾಗಲಿವೆ. ಸ್ವ ಉದ್ಯೋಗಿಗಳಿಗೆ ಮುನ್ನಡೆ ಸಿಗುವುದು. ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಿ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಮಿಥುನ: ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಕರ್ಕಟಕ: ಪಾಲು ಬಂಡವಾಳ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೂಡಿಕೆ ಮಾಡಿ. ವಂಚನೆಗೊಳಗಾಗುವ ಭೀತಿಯಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಸಂಗಾತಿಯ ಮನೋಕಾಮನೆ ಪೂರೈಸುವಿರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚಲಿದ್ದು, ಗೌರವ ಪ್ರಾಪ್ತಿಯಾಗುವುದು. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಪ್ರಾಪ್ತಿಯಾಗುವುದು. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

 
ಕನ್ಯಾ: ವ್ಯವಹಾರದಲ್ಲಿ ಹೆಚ್ಚಿನ ಧನಲಾಭವಾಗುವ ಸಾಧ‍್ಯತೆಯಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆಯಿಂದ ಉದ್ಯೋಗದಲ್ಲಿ ಉನ್ನತಿ ಸಿಗುವುದು.

ತುಲಾ: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಬಹು ದಿನಗಳ ಕನಸು ನನಸಾಗಲಿವೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಶ್ಚಿಕ: ಸಂಗಾತಿಯ ಮಾತಿನಂತೆ ನಡೆದರೆ ಇಂದು ನಿಮಗೆ ಶುಭ ಫಲ ಸಿಗುವುದು. ದುಡುಕು ವರ್ತನೆ, ನಿರ್ಧಾರದಿಂದ ಕಾರ್ಯ ನಡೆಯದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗುವುದು.

ಧನು: ನಿಮ್ಮ ನಿರ್ಧಾರಗಳೇ ನಡೆಯಬೇಕೆಂಬ ಹಠದಿಂದಾಗಿ ಬೇರೆಯವರ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ದುಂದುವೆಚ್ಚಗಳಿಗೆ ಕಡಿವಾಣ ಹಾಕಿ. ಸಾಧು ಸಂತರ ಭೇಟಿ ಸಾಧ‍್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಹೆಚ್ಚಿನ ಧನಲಾಭಕ್ಕೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಶುಭ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಿಗೆ ಶುಭ ದಿನ.

ಕುಂಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಉದರ ಸಂಬಂಧೀ ಆರೋಗ್ಯದ ಸಮಸ್ಯೆಗಳು ಕಂಡುಬರಬಹುದು. ಎಚ್ಚರಿಕೆ ಅಗತ್ಯ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವುದರಿಂದ ಕಾರ್ಯ ಪ್ರಾಪ್ತಿಯಾಗುವುದು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮಾಡುವ ತಪ್ಪುಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಅನುಭವಿಸಬೇಕಾಗಬಹುದು. ಸ್ವ ಉದ್ಯೋಗಿಗಳಿಗೆ ಮುನ್ನಡೆ ಸಿಗಲಿದೆ. ಮನೆಯಲ್ಲಿ ಶುಭ ಕಾರ್ಯಗಳು ನೆರವೇರಲಿವೆ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗಕ್ಕಾಗಿ ಕರೆ ಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments