Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
  • facebook
  • twitter
  • whatsapp
share
ಶನಿವಾರ, 26 ಅಕ್ಟೋಬರ್ 2019 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನೆಯಲ್ಲಿ ಬಂಧು ಮಿತ್ರರ ಆಗಮನದಿಂದ ಓಡಾಟ ಹೆಚ್ಚಾಗಲಿದೆ. ಮಕ್ಕಳ ವಿಚಾರವಾಗಿ ಹಲವು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.

ವೃಷಭ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಆದರೆ ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗದ ಕರೆ ಬರದೇ ನಿರಾಶೆಯಾಗಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ವ್ಯಾಪಾರ ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದಿರಿ.

ಮಿಥುನ: ಸ್ವ ಉದ್ಯೋಗಿಗಳಿಗೆ ವ್ಯಾಪಾರದಲ್ಲಿ ಲಾಭವಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕೌಟುಂಬಿಕವಾಗಿ ಹೊಸದೊಂದು ಜವಾಬ್ಧಾರಿಗೆ ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ಸಿಗಲಿದೆ. ನೆರೆಹೊರೆಯವರ ಚಾಡಿ ಮಾತಿನಿಂದ ಮನಸ್ಸಿಗೆ ಬೇಸರವಾಗಬಹುದು. ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ಸಾಮಾಜಿಕವಾಗಿ ಸ್ಥಾನ ಮಾನಗಳ ಬಗ್ಗೆ ಚಿಂತೆ ಮಾಡದೇ ಕೆಲಸ ಮಾಡಿ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಭಾಗ್ಯವಿದೆ. ದೇವತಾ ಪ್ರಾರ್ಥನೆ ಮಾಡಿ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಲಾಭವಾಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಮನಸ್ಸು ಮಾಡುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡುವಿರಿ.

ತುಲಾ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವ್ಯಾಪಾರ ವ್ಯವಹಾರದಲ್ಲಿ ಉನ್ನತಿ ಕಾಣಲಿದ್ದೀರಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ.

ವೃಶ್ಚಿಕ: ಸ್ವ ಉದ್ಯೋಗಿಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಬಹುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಹಿರಿಯರ ಸಲಹೆ ಕೇಳಿ ಮುನ್ನಡೆದರೆ ಕೈಗೊಂಡ ಕೆಲಸದಲ್ಲಿ ಯಶಸ್ಸು ಸಾಧಿಸಬಹುದು. ಕೌಟುಂಬಿಕವಾಗಿ ಅಚ್ಚರಿಯ ವಾರ್ತೆಗಳು ಕೇಳಿಬರಲಿದೆ.

ಧನು: ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ನಿಮ್ಮ ದುಡುಕು ಮಾತಿನಿಂದ ಪ್ರೀತಿ ಪಾತ್ರ ಮನ ನೋಯಿಸದಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಹನೆಯಿಂದ ವರ್ತಿಸಬೇಕಾಗುತ್ತದೆ. ದುಡುಕಿ ಕೈಗೊಳ್ಳುವ ನಿರ್ಧಾರಗಳಿಂದ ಮುಂದೆ ತೊಂದರೆಯಾಗಬಹುದು. ಕೃಷಿಕರಿಗೆ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗುವುದು.

ಕುಂಭ: ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಅಂದುಕೊಂಡ ಕೆಲಸಗಳನ್ನು ನೆರವೇರಿಸಲು ಕೆಲವೊಂದು ಅಡ್ಡಿ ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆಯೊಂದಿಗೆ ದಿನ ಆರಂಭಿಸಿದರೆ ಎಲ್ಲವೂ ಶುಭವಾಗುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಸಿಗಲಿದೆ.
ಮೀನ: ಹೊಸ ಆಸ್ತಿ, ಮನೆ ಖರೀದಿಗೆ ಮನಸ್ಸು ಮಾಡುವಿರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯ ಸಲಹೆ ಪಾಲಿಸಿ. ಹಿತ ಶತ್ರುಗಳ ಬಗ್ಗೆ ಎಚ್ಚರವಾಗಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

Share this Story:
  • facebook
  • twitter
  • whatsapp

Follow Webdunia Hindi

ಮುಂದಿನ ಸುದ್ದಿ

webdunia
ದೀಪಾವಳಿ ಹಬ್ಬಕ್ಕೆ ದೀಪಗಳನ್ನು ಹಚ್ಚುವಾಗ ಈ ತಪ್ಪು ಮಾಡಬೇಡಿ