Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 3 ನವೆಂಬರ್ 2019 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಬಿಡುವಿಲ್ಲದ ದುಡಿಮೆಯಿರಲಿದೆ. ಇದರಿಂದ ದೇಹ ಹೈರಾಣಾಗಬಹುದು. ಆದರೆ ತಾಳ್ಮೆ, ಸಮಾಧಾನದಿಂದ ವ್ಯವಹರಿಸುವುದು ಮುಖ್ಯ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವೇರ್ಪಡಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಓಡಾಟ ನಡೆಸಬೇಕಾಗುತ್ತದೆ. ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ವಿವಾದವಾಗದಂತೆ ಎಚ್ಚರಿಕೆ ವಹಿಸಬೇಕು. ಇಷ್ಟ ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಸ್ವ ಉದ್ಯೋಗಗಿಳಿಗೆ ನಿರೀಕ್ಷಿತ ಲಾಭ ಕಂಡುಬರುವುದು. ಕಾರ್ಯ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಮನೆಯಲ್ಲಿ ಕಳ್ಳತನವಾಗದಂತೆ ಎಚ್ಚರವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಅಪವಾದದಗಳು ಎದುರಾದೀತು. ಎಚ್ಚರಿಕೆಯಿಂದ ವ್ಯವಹರಿಸಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಲಾಭ ತೋರಿಬರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರುವುದು. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರುವುದು. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

 
ಕನ್ಯಾ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಕಂಡುಬರುವುದು. ಮನೆಯಲ್ಲಿ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.

ತುಲಾ: ಸಾಂಸಾರಿಕವಾಗಿ ಸುಂದರ ದಿನಗಳಿವು. ನಿಮ್ಮ ನಿರ್ಧಾರಗಳಿಗೆ ಸಂಗಾತಿಯ ಸಹಮತ ಸಿಗುವುದು. ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮನೆಯಲ್ಲಿ ಒಂದು ರೀತಿಯ ಅಶಾಂತಿಯ ವಾತಾವರಣವಿರುವುದು. ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುವುದು. ಪ್ರೀತಿ ಪಾತ್ರರ ಮನನೋಯಿಸದಂತೆ ವರ್ತಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ದುಡುಕಿನ ಮಾತನಾಡಿ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಹಣಕಾಸಿನ ಹರಿವಿಗೆ ತೊಂದರೆಯಿರದು. ವಿದ್ಯಾರ್ಥಿಗಳು ಕಠಿಣ ಪ್ರಯತ್ನ ನಡೆಸಿದರೆ ಮಾತ್ರ ಫಲ ಸಿಗಬಹುದು.

ಮಕರ: ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಸಾಧ‍್ಯತೆ. ಪಾಲು ಬಂಡವಾಳ ಹೂಡಿಕೆ ಮಾಡುವಾಗ ಯೋಚಿಸಿ ಹೆಜ್ಜೆಯಿಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕುಂಭ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ವ್ಯವಹಾರದಲ್ಲಿ ನಿವ್ವಳ ಲಾಭ ಸಿಗಲಿದೆ. ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಕಂಡುಬರುವುದು. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆ ಸಿಗುವುದು.

ಮೀನ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಹಿಸಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗುವುದು. ಸಂಗಾತಿಯ ಮನೋಭಿಲಾಷೆ ಪೂರೈಸಲು ಧನ ವ್ಯಯ ಮಾಡಬೇಕಾಗುತ್ತದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ