Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 20 ನವೆಂಬರ್ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಬಾಕಿ ಹಣ ಪಾವತಿ ಚಿಂತೆ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಸ್ವ ವ್ಯವಹಾರ ಮಾಡುವವರಿಗೆ ಉನ್ನತಿಯ ಯೋಗವಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ.

ವೃಷಭ: ಚಿಂತಿತ ಕಾರ್ಯಗಳು ಅಡೆತಡೆಗಳಿದ್ದರೂ ಅಂತಿಮವಾಗಿ ನೀವಂದುಕೊಡಂತೆ ನೆರವೇರುವುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗುವುದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಅಂದುಕೊಂಡ ಕಾರ್ಯಗಳನ್ನು ಚಿಂತೆಯಿಲ್ಲದೇ ನೆರವೇರಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿರಬರಲಿದೆ. ಹೊಸ ಮಿತ್ರರ ಭೇಟಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ ಕಾದಿದೆ.

ಕರ್ಕಟಕ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು.  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯಿಂದ ಉನ್ನತ ಸ್ಥಾನ ಮಾನ ಸಿಗುವುದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ದೈವಾನುಗ್ರಹದಿಂದ ಈ ದಿನ ನೀವು ಕೈಗೊಂಡ ಕಾರ್ಯಗಳಲ್ಲಿ ಪ್ರಗತಿ ಸಾಧಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ.

 
ಕನ್ಯಾ: ಯಾವುದೇ ಕೆಲಸಕ್ಕೂ ಮುನ್ನ ಕುಟುಂಬ ಸದಸ್ಯರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ವೃತ್ತಿರಂಗದಲ್ಲಿ ಎಂದಿನಂತೆ ಕಾರ್ಯದೊತ್ತಡವಿರಲಿದೆ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಸಂಗಾತಿಯ ಸಹಕಾರದಿಂದ ಹೊಸ ಕೆಲಸಗಳು ಸುಸ್ರೂತ್ರವಾಗಿ ನಡೆಯಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಯ ಯೋಗವಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಮುನ್ನಡೆ ಲಭಿಸುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಪಾಲು ಬಂಡವಾಳ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಿ. ಮನೆಯಲ್ಲಿ ಹೊಸ ಸದಸ್ಯರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಯೋಗ್ಯತೆಗೆ ಮೀರಿ ಕೆಲಸಗಳು ಸಿಕ್ಕಾಗ ಅದನ್ನು ಬಳಸಿಕೊಳ್ಳುವ ಕಲೆ ಗೊತ್ತಿರಬೇಕು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರ ಸಂಚಾರದಲ್ಲಿ ಎಚ್ಚರಿಕೆಯಿಂದಿರಬೇಕು.

ಕುಂಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ನಿರಂತರ ಓಡಾಟದಿಂದ ದೇಹಾಯಾಸವಾಗಬಹುದು. ಮಾನಸಿಕವಾಗಿ ಕಿರಿ ಕಿರಿಯಾಗುವಂತಹ ಘಟನೆಗಳು ನಡೆಯಬಹುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು.

ಮೀನ: ಮನೆಯಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ಮೂಡದಂತೆ ಎಚ್ಚರಿಕೆ ವಹಿಸಬೇಕು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಅಭ್ಯಾಸಗಳು ನಿಮ್ಮನ್ನ ಬಡವರನ್ನಾಗಿಸುತ್ತದೆ