Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 22 ನವೆಂಬರ್ 2019 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಆದಾಯದಷ್ಟೇ ಖರ್ಚೂ ಇರಲಿದೆ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕಲಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿದೆ.

ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ವಂಚನೆಗೊಳಗಾಗುವ ಭೀತಿಯಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ. ಕಿರು ಸಂಚಾರ ಯೋಗವಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ ಕಾರ್ಯ ಸಾಧನೆಗೆ ಅಡ್ಡಿಯಾಗದು. ಕೌಟುಂಬಿಕವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ಮನೆಯಲ್ಲಿ ಸಮಾಧಾನಕರ ವಾತಾವರಣವಿರುವುದು. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ವ್ಯಾಪಾರಿಗಳಿಗೆ ಅಲ್ಪ ಮಟ್ಟಿನ ನೆಮ್ಮದಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಸಿಗಲಿದೆ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಸ್ವ ಉದ್ಯೋಗಿಗಳಿಗೆ ಮುನ್ನಡೆಯ ಲಾಭವಾಗಲಿದೆ. ವಿವಾಹ ಪ್ರಯತ್ನಗಳಿಗೆ ಫಲ ಸಿಗಲಿದೆ. ದೂರ ಸಂಚಾರ ಕೈಗೊಳ್ಳಬೇಕಾಗಿದ್ದು, ಪ್ರಯಾಣದಲ್ಲಿ ಎಚ್ಚರ.

 
ಕನ್ಯಾ: ಉದ್ಯೋಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಂಗಾತಿಯ ಸಲಹೆಗೆ ಕಿವಿಗೊಡುವುದು ಉತ್ತಮ. ಮಕ್ಕಳಿಂದ ಸಂತಸ ಸಿಗಲಿದೆ. ನೆರೆಹೊರೆಯವರೊಂದಿಗೆ ವರ್ತಿಸುವಾಗ ಎಚ್ಚರಿಕೆಯಿಂದಿರಿ.

ತುಲಾ: ಇಷ್ಟ ಮಿತ್ರರ ಭೇಟಿ ಮಾಡಲಿದ್ದೀರಿ. ಮನಸ್ಸಿಗೆ ಸಂತಸವಾಗುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಕಾಳಜಿ ವಹಿಸಿ. ಸಂಗಾತಿಯ ಮನದಾಸೆ ಪೂರೈಸಲು ಖರ್ಚು ವೆಚ್ಚಗಳಾಗಬಹುದು.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಅರಸುವಿಕೆಗಾಗಿ ದೂರ ಸಂಚಾರ ಮಾಡಬೇಕಾಗಬಹುದು. ವಾಹನ, ಭೂಮಿ ಖರೀದಿ ಯೋಗವಿದೆ. ಆದರೆ ವ್ಯವಹಾರ ಮಾಡುವಾಗ ಅಪರಿಚಿತರನ್ನು ನಂಬಿ ಹೂಡಿಕೆ ಮಾಡಬೇಡಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ.

ಧನು: ಮಕ್ಕಳೊಂದಿಗೆ ಸಂತಸದ ಕ್ಷಣ ನಿಮ್ಮದಾಗುವುದು. ಆದರೆ ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಾಗಲಿದ್ದು ಅಧಿಕ ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಮೇಲೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಮನೆಗೆ ಹೊಸ ಅತಿಥಿಗಳ ಆಗಮನವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ.

ಕುಂಭ: ಕಾರ್ಯನಿಮಿತ್ತ ಓಡಾಟ ಅಧಿಕವಾಗಲಿದ್ದು, ದೇಹಾಯಾಸವಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಮಾಡುವಿರಿ. ವಾಹನ ಸಂಚಾರ ಮಾಡುವಾಗ ಅಪಘಾತ ಭೀತಿಯಿದೆ, ಎಚ್ಚರಿಕೆಯಿಂದಿರಿ. ದಾಯಾದಿಗಳ ವೈಮನಸ್ಯಗಳು ನಿವಾರಣೆಯಾಗಲಿವೆ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಾಗದು. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನಕೊಡುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವ ದೇವಾಲಯಕ್ಕೆ ಹೋದಾಗ ಈ ವಿಚಾರ ತಿಳಿದಿರಲಿ