Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 2 ಡಿಸೆಂಬರ್ 2019 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೇವರ ಸ್ಮರಣೆ ಮಾಡಿಕೊಂಡು ದಿನದ ಆರಂಭ ಮಾಡಿದರೆ ಯಶಸ್ಸು ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕೌಟುಂಬಿಕ ಕಲಹಗಳಿಗೆ ಪರಿಹಾರ ಕಂಡುಕೊಳ್ಳಲು ದಾರಿ ಹುಡುಕುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಷಭ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳೆಲ್ಲವೂ ಕೈಗೂಡಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ದೂರವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಿಥುನ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ವ್ಯಾಪಾರ, ವ್ಯವಹಾರದಲ್ಲಿ ಅಲ್ಪ ಲಾಭ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಅವಿವಾಹಿತರಿಗೆ ಶೀಘ್ರವೇ ಕಂಕಣ ಭಾಗ್ಯ ಕೂಡಿಬರಲಿದೆ. ನಿಮಗೆ ಪ್ರಿಯವೆನಿಸುವ ವಸ್ತುಗಳು ಕೈ ಸೇರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಸಂಗಾತಿಯ ಮನದಾಸೆಯಂತೆ ನಡೆದುಕೊಂಡರೆ ಉತ್ತಮ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗುವುದು. ರಾಜಕೀಯ ವೃತ್ತಿಯಲ್ಲಿರುವವರಿಗೆ ಯಶಸ್ಸು ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಬಹುದಿನಗಳ ಪ್ರಯತ್ನಕ್ಕೆ ಫಲ ಸಿಗುವುದು. ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ.

 
ಕನ್ಯಾ: ಕೃಷಿಕರಿಗೆ ವ್ಯವಹಾರದಲ್ಲಿ ಕೊಂಚ ನಷ್ಟವಾಗಬಹುದು. ಕೆಳಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ಸ್ವ ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಬೇಕಾಗುತ್ತದೆ.

ತುಲಾ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ವಿದೇಶ ಯಾನ ಅಥವಾ ದೂರ ಸಂಚಾರ ಮಾಡಬೇಕಾಗಬಹುದು. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಇಷ್ಟಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿ ಕೊಡುವುದು.

ವೃಶ್ಚಿಕ: ಪ್ರೇಮಿಗಳ ಗುಟ್ಟು ಬಹಿರಂಗವಾಗಲಿದೆ. ಹಿರಿಯರಿಂದ ಬಂದ ವಸ್ತುಗಳು ಕಳ್ಳತನವಾಗುವ ಭೀತಿಯಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಖರ್ಚು ವೆಚ್ಚಗಳಾಗಲಿವೆ. ಎಚ್ಚರಿಕೆಯಿರಲಿ.

ಧನು: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗನವಾಗಲಿದೆ. ಪ್ರೀತಿ ಪಾತ್ರರು, ಸ್ನೇಹಿತರ ಭೇಟಿ ಮನಸ್ಸಿಗೆ ಸಂತಸ ನೀಡುವುದು. ಮಕ್ಕಳ ವಿಚಾರದಲ್ಲಿ ಚಿಂತೆಯಾಗಬಹುದು. ನೆರೆಹೊರೆಯವರ ಚಾಡಿಮಾತುಗಳಿಗೆ ಕಿವಿಗೊಡಬೇಕಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನೂತನ ದಂಪತಿಗಳಿಗೆ ಮಧು ಚಂದ್ರ ಭಾಗ್ಯವಿದೆ. ಮಿತ್ರರೊಂದಿಗೆ ಪ್ರವಾಸ, ಮೋಜು ಮಾಡುವಿರಿ. ಆದರೆ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣ ಅಗತ್ಯ. ವಾಹನ ಸವಾರರಿಗೆ ಅಪಘಾತದ ಭಯವಿದೆ. ನಿರುದ್ಯೋಗಿಗಳಿಗೆ ಸ್ವ ಉದ್ಯೋಗವೇ ಉತ್ತಮ.

ಕುಂಭ: ಗೃಹ ಸಂಬಂಧೀ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಿ ದೇಹಾಯಾಸವಾದೀತು. ಹಾಗಿದ್ದರೂ ನೀವು ಅಂದುಕೊಂಡ ಕೆಲಸಗಳು ನೆರವೇರಿದ ತೃಪ್ತಿ ಇರಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆದಾಯವಿದ್ದಷ್ಟೇ ಖರ್ಚೂ ಇರುವುದು.

ಮೀನ: ಕೋರ್ಟು ಕಚೇರಿ ವ್ಯವಾಹರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರುವುದು. ಸರಕಾರಿ ಉದ್ಯೋಗದಲ್ಲಿರುವವರಿಗೆ ವರ್ಗಾವಣೆ ಭೀತಿಯಿರಲಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳೊಂದಿಗೆ ಸಂತಸದ ಕಾಲ ಕಳೆಯುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಕಾರಣಕ್ಕೂ ಈ ನಾಲ್ಕು ರಾಶಿಯವರು ಸಾಲ ಮಾಡಬೇಡಿ