ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 18 ಡಿಸೆಂಬರ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಲ್ಲಾ ಇದ್ದೂ ಏನೋ ಕಳೆದುಕೊಂಡ ರೀತಿ ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಯಾರೂ ಬ್ರೇಕ್ ಹಾಕಲಾಗದು.

ವೃಷಭ: ಖರ್ಚು ಮಾಡಲು ಹಲವು ಕಾರಣಗಳು ಎದುರಾಗಲಿವೆ. ಹಿರಿಯರ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ದೊರಕಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮಿಥುನ: ಯಂತ್ರಗಳ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಮುನ್ನಡೆ ದೊರೆಯಲಿದೆ. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ಆದರೆ ಮಾನಸಿಕ ನೆಮ್ಮದಿಗೆ ಭಂಗ ತರುವ ಘಟನೆಗಳು ನಡೆದೀತು. ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ.

ಕರ್ಕಟಕ: ಕೋಪದ ಕೈಗೆ ಬುದ್ಧಿ ಕೊಟ್ಟು, ಆತುರದ ನಿರ್ಧಾರ ತೆಗೆದುಕೊಂಡರೆ ನಷ್ಟ ನಿಮಗೇ ಎನ್ನುವುದನ್ನು ಅರಿತುಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳಿಂದ ಮನಸ್ಸಿಗೆ ಕಿರಿ ಕಿರಿಯಾದೀತು. ತಾಳ್ಮೆಯಿಂದ ವರ್ತಿಸಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಿಂಹ: ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಬರಲಿವೆ. ನೂತನ ಕಾರ್ಯಗಳಿಗೆ ಕೈ ಹಾಕಲು ಅವಸರ ಬೇಡ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕಿರು ಸಂಚಾರ ಮಾಡಬೇಕಾಗಬಹುದು.

ಕನ್ಯಾ: ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯುತ್ತದೆ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸುವಿರಿ. ಸಾಂಸಾರಿಕವಾಗಿ ಇದುವರೆಗೆ ಇದ್ದ ಕಷ್ಟಗಳು ನಿಧಾನವಾಗಿ ದೂರವಾಗಲಿದೆ. ಖರ್ಚು ವೆಚ್ಚಗಳು ಅಧಿಕವಾದೀತು. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.

ತುಲಾ: ನೀವು ನಿರೀಕ್ಷಿಸಿದ ರೀತಿಯಲ್ಲಿ ಕಾರ್ಯಗಳು ನೆರವೇರಲಿವೆ. ಆದಾಯದಲ್ಲಿ ಹೆಚ್ಚಳವಾಗಲಿದೆ. ಆದರೆ ದುಂದು ವೆಚ್ಚ ಮಾಡಬೇಡಿ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸದಿದ್ದರೆ ಬೇಡದ ತೊಂದರೆಗಳನ್ನು ಮೈಮೇಲೆಳೆದುಕೊಳ್ಳಬೇಕಾಗಬಹುದು. ದೇವಾಲಯ ಸಂದರ್ಶನ ಯೋಗವಿದೆ. ಹಿತಶತ್ರುಗಳ ಕಾಟವಿರಲಿದೆ. ಎಚ್ಚರಿಕೆಯಿಂದಿರಿ.

ಧನು: ಆರ್ಥಿಕವಾಗಿ ನಾನಾ ರೀತಿಯ ಖರ್ಚುಗಳು ಕಂಡುಬರುವುದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆಯಿರಲಿದೆ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಲಿವೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೂರ ಸಂಚಾರ ಮಾಡುವಾಗ ಎಚ್ಚರವಿರಲಿ.

ಮಕರ: ವಿರೋಧಿಗಳನ್ನು ಸಮರ್ಥವಾಗಿ ಎದುರಿಸುವ ಆತ್ಮವಿಶ್ವಾಸ ಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗಬಹುದು. ಹೊಸ ವ್ಯಾಪಾರ, ವ್ಯವಹಾರಗಳಿಗೆ ಕೈ ಹಾಕಲು ಇದು ಸುಸಮಯ.

ಕುಂಭ: ವಿದ್ಯಾರ್ಥಿ ವೃಂದದವರು ಶಿಕ್ಷಕರಿಂದ ಪ್ರಶಂಸೆಗೊಳಗಾಗುವರು. ಕಾರ್ಮಿಕ ವರ್ಗದವರಿಗೆ ವೇತನ ಹೆಚ್ಚಳ ಸಾಧ್ಯತೆಯಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿಗಾಗಿ ಧನವ್ಯಯಮಾಡಬೇಕಾಗುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.

ಮೀನ: ಬೆಟ್ಟದಂತೆ ಬಂದ ಕಷ್ಟಗಳು ಮಂಜಿನಂತೆ ಕರಗಿಹೋದ ಅನುಭವವಾಗಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments