ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 19 ಡಿಸೆಂಬರ್ 2019 (09:21 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದಾಯಾದಿಗಳಿಂದ ಆಸ್ತಿ ಸಂಬಂಧವಾಗಿ ತೊಂದರೆಗಳು ಎದುರಾಗಬಹುದು. ಹಿರಿಯರ ಮಧ‍್ಯಸ್ಥಿಕೆಗೆ ಬೆಲೆ ಕೊಡಿ. ದೇಹಾರೋಗ್ಯದಲ್ಲಿ ಹೊಸ ಸಮಸ್ಯೆಗಳು ಕಂಡುಬಂದು ಚಿಂತೆಗೆ ಕಾರಣವಾಗಬಹುದು. ಆರ್ಥಿಕವಾಗಿ ಆದಾಯದ ಸದ್ಭಳಕೆ ಮಾಡಿ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಮಹಿಳೆಯರಿಂದ ಅಪವಾದದ ಭೀತಿಯಿರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮಾತಿನ ಮೇಲೆ ನಿಗಾ ಇರಲಿ. ದುಡುಕಿ ಮಾತನಾಡಿ ಪ್ರೀತಿ ಪಾತ್ರ ಮನಸ್ಸು ನೋಯಿಸದಿರಿ. ಆರ್ಥಿಕವಾಗಿ ಹಂತ ಹಂತವಾಗಿ ಸುಧಾರಣೆ ಕಂಡುಕೊಳ್ಳುವಿರಿ. ಋಣ ಸಂದಾಯವಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಕಾರ ಸಿಗಲಿದೆ. ಮನೆ/ವಾಸಸ್ಥಳ ಬದಲಾವಣೆ ಮಾಡುವಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಆದಷ್ಟು ತಾಳ್ಮೆಯಿಂದಿದ್ದಷ್ಟೂ ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಾಣಬಹುದು. ಸಂಗಾತಿಯ ಸಹಕಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬರಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸುವಿರಿ. ನಿಮ್ಮ ಪ್ರಯತ್ನ ಬಲವನ್ನು ಕೈ ಬಿಡಬೇಡಿ. ಸಂಗಾತಿಯಿಂದ ಸುಖ ಸಂತೋಷ ಸಿಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ನೆರವಾಗುವಿರಿ.

ತುಲಾ: ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಅಂದುಕೊಂಡಿದ್ದನ್ನು ಸಾಧಿಸುವಿರಿ. ಮೇಲಧಿಕಾರಿಗಳಲ್ಲಿ ಸಂಯಮದಿಂದ ವರ್ತಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿದೆ. ಕೌಟುಂಬಿಕ ಜವಾಬ್ಧಾರಿಗಳಿಗೆ ಹೆಗಲುಕೊಡಬೇಕಾಗುತ್ತದೆ.

ವೃಶ್ಚಿಕ: ವ್ಯವಹಾರದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಗಮನ ಕಳೆದುಕೊಳ್ಳಬೇಡಿ. ಉದಾಸೀನ ಮಾಡಿದರೆ ಅಪಾಯ ತಪ್ಪಿದ್ದಲ್ಲ. ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು. ಚಿಂತಿತ ಕೆಲಸಗಳು ಅಂದುಕೊಂಡಂತೇ ನಡೆಯುವುದು.

ಧನು: ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ನಿಮಿತ್ತ ವಿದೇಶ ಯಾನದ ಭಾಗ್ಯವಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ.

ಮಕರ: ವಿವಿಧ ಮೂಲಗಳಿಂದ ಧನ ಪ್ರಾಪ್ತಿ ಯೋಗವಿದೆ. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ದಾಂಪತ್ಯ ಜೀವನದಲ್ಲಿ ಸುಖ ಪ್ರಾಪ್ತಿಯಾಗಬಹುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕುಂಭ: ಕೌಟುಂಬಿಕವಾಗಿ ಪತ್ನಿ-ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಸರಕಾರಿ ಕೆಲಸದಲ್ಲಿ ಮುನ್ನಡೆ ಸಿಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರದ ಸಂದರ್ಶನ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಮಹಿಳೆಯರಿಗೆ ಸಂತಸದ ದಿನವಾಗಲಿದೆ.

ಮೀನ: ಕೆಲಸ ಕಾರ್ಯಗಳಲ್ಲಿ ನಿರುತ್ಸಾಹ ಕಂಡುಬರಲಿದೆ. ಕೌಟುಂಬಿಕ ವಿಚಾರದಲ್ಲಿ ಕಲಹವಾಗದಂತೆ ಎಚ್ಚರವಹಿಸಿ. ನೆರೆಹೊರೆಯವರ ಮಾತಿಗೆ ಕಿವಿಗೊಡಬೇಕಾಗಿಲ್ಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಆದಾಯಕ್ಕೆ ಹೆಚ್ಚಳಕ್ಕೆ ದಾರಿ ಹುಡುಕುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments