Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 25 ಡಿಸೆಂಬರ್ 2019 (06:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಾನಸಿಕವಾಗಿ ಒಂದು ರೀತಿಯ ಗೊಂದಲ ಕಾಡಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ಹಾಗಿದ್ದರೂ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ದೂರ ಸಂಚಾರ  ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಇಷ್ಟ ದೇವರ ಪ್ರಾರ್ಥನೆಯಿಂದ ಮನಸ್ಸಲ್ಲಿ ಅಂದುಕೊಂಡ ಕೆಲಸ ನೆರವೇರುವುದು.

ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶಯಾನ ಮಾಡುವ ಯೋಗವಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ದಿನದಂತ್ಯಕ್ಕೆ ಅಚ್ಚರಿ.

ಕರ್ಕಟಕ: ಹಿರಿಯರ ತೀರ್ಥ ಯಾತ್ರೆಗಳಿಗೆ ಏರ್ಪಾಟು ಮಾಡುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಕಂಡುಬರಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕೊರತೆಯುಂಟಾಗಬಹುದು.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನೀವು ಅಂದುಕೊಂಡಂತೇ ಕೆಲಸಗಳು ನೆರವೇರಿ ಮನಸ್ಸಿಗೆ ನೆಮ್ಮದಿಯಾಗುವುದು. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ಮಿತ್ರರಿಗಾಗಿ ಕೆಲವೊಂದು ತ್ಯಾಗಕ್ಕೆ ಸಿದ್ಧರಾಗಬೇಕಾಗುತ್ತದೆ. ಸಹೋದರರೊಂದಿಗೆ ಆಸ್ತಿ ವಿವಾದ ತಲೆದೋರಬಹುದು. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ನೀವು ಅಂದುಕೊಂಡ ಕೆಲಸ ಕಾರ್ಯಗಳು ಅರ್ಧಕ್ಕೇ ನಿಂತುಹೋದೀತು. ಆದರೂ ತಾಳ್ಮೆ ಕಳೆದುಕೊಳ್ಳಬೇಡಿ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.

ಧನು: ಸಕಾರಾತ್ಮಕವಾಗಿ ಯೋಚನೆ ಮಾಡಬೇಕಾದ ಅಗತ್ಯವಿದೆ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದಲೇ ಬರುವಂತಹ ಸಮಸ್ಯೆಗಳನ್ನು ನಿವಾರಿಸುವಿರಿ. ಮಕ್ಕಳಿಂದ ಸಂತಸ ನಿರೀಕ್ಷಿಸಬಹುದು. ಆದರೆ ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ.

ಮಕರ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಹಿತಶತ್ರುಗಳೊಂದಿಗೆ ವ್ಯವಹರಿಸುವಾಗ ಎಚ್ಚರವಾಗಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಆದರೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ವಹಿಸಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಋಣಾತ್ಮಕ ಚಿಂತನೆಗೆ ಅವಕಾಶ ಕೊಡದಿರಿ.

ಮೀನ: ವೃತ್ತಿರಂಗದಲ್ಲಿ ಮಹಿಳೆಯರಿಂದ ಅಪವಾದದ ಭೀತಿಯಿದೆ. ನೆರೆಹೊರೆಯವರೊಂದಿಗೆ ದುಡುಕಿನ ವರ್ತನೆ ತೋರದಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲ ಬಾಧೆಯಿಂದ ಮುಕ್ತರಾಗುವಿರಿ. ಸಾಧು ಸಂತರ ಭೇಟಿ ಸಾಧ‍್ಯತೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments