ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 27 ಡಿಸೆಂಬರ್ 2019 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಮಾನಸಿಕ ಗೊಂದಲಗಳನ್ನು ಪರಿಹರಿಸಲು ದೇವರ ಮೊರೆ ಹೋಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ವ್ಯವಹಾರದಲ್ಲಿ ಮುನ್ನಡೆ, ಲಾಭ ಗಳಿಸುವಿರಿ. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಲಿದೆ.

ಮಿಥುನ: ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ. ಇಷ್ಟ ಮಿತ್ರರ ಭೇಟಿ, ಪ್ರವಾಸ ಸಾಧ್ಯತೆಯಿದೆ. ಆರ್ಥಿಕವಾಗಿ ಹಣಕಾಸಿನ ಮುಗಟ್ಟುಗಳು ಬಗೆಹರಿಯಲಿವೆ. ಸಂಗಾತಿಯ ಮನದಾಸೆ ಪೂರೈಸುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ರಂಗದಲ್ಲಿರುವವರಿಗೆ ಅಭಿವೃದ್ಧಿ ತೋರಿಬರಲಿದೆ. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ಅಡೆತಡೆಗಳು ಬಂದರೂ ಅಂತಿಮ ಜಯ ಒದಗಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗವಾಗಲಿದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಜನಮನ್ನಣೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬರುವ ಕಷ್ಟಗಳಿಗೆ ನಿಮ್ಮ ಕ್ರಿಯಾಶೀಲತೆಯಿಂದಲೇ ಪರಿಹಾರ ಕಂಡುಕೊಳ್ಳುವಿರಿ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

ಕನ್ಯಾ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಹಿರಿಯರಿಂದ ಉಡುಗೊರೆ ಸ್ವೀಕರಿಸುವಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣವಿರುವುದು. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡವಿರಲಿದ್ದು, ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ತುಲಾ: ಕಾರ್ಯಕ್ಷೇತ್ರದಲ್ಲಿ ಕಂಡುಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಿತ್ರರ ನೆರವು ಸಿಗಲಿದೆ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಆಲಿಸುವಿರಿ.

ವೃಶ್ಚಿಕ: ಸಹೋದರರ ವಿವಾಹ ಸಂಬಂಧವಾಗಿ ಓಡಾಟ ನಡೆಸಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸುತ್ತೀರಿ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಏಕಾಗ್ರತೆ ಕಳೆದುಕೊಳ್ಳಬಹುದು.

ಧನು: ನಿಮ್ಮ ದುಡುಕು ಮಾತುಗಳಿಗೆ ಕಡಿವಾಣ ಹಾಕುವುದು ಉತ್ತಮ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ. ಆದರೆ ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಅನಿವಾರ್ಯ. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಸಂದರ್ಶನ ಕರೆ ಬರುವುದು.

ಮಕರ: ಕೃಷಿಕರಿಗೆ ಇಂದು ಕೈಗೊಳ್ಳುವ ವ್ಯವಹಾರದಲ್ಲಿ ಲಾಭ ಸಿಗಲಿದೆ. ಹೊಸ ವ್ಯಾಪಾರ, ವ್ಯವಹಾರಗಳಿಗೆ ಕೈ ಹಾಕಲು ಸಕಾಲ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ದೇವಾಲಯ ಸಂದರ್ಶನ ಯೋಗವಿದೆ.

ಮೀನ: ವ್ಯವಹಾರದಲ್ಲಿ ಅಡೆತಡೆಗಳು ಎದುರಾಗಬಹುದು. ಆದರೆ ನಿರಾಶೆ ಬೇಡ. ಸಕಾಲಕ್ಕೆ ಸಂಗಾತಿಯಿಂದ ಬರುವ ಸಲಹೆಗಳು ಕೈಗೂಡಲಿವೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments