Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 28 ಡಿಸೆಂಬರ್ 2019 (07:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ಅಡೆತಡೆಗಳನ್ನು ನಿವಾರಿಸಲು ಸಹೋದ್ಯೋಗಿಗಳ ನೆರವು ಪಡೆಯಬೇಕಾಗುತ್ತೆ. ಕೌಟುಂಬಿಕವಾಗಿ ಹೊಸ ಚಿಂತೆಗಳು ಶುರುವಾಗಲಿವೆ. ದೇವಾಲಯ ಸಂದರ್ಶನ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಅಭ್ಯಾಸ ಅಗತ್ಯವಿದೆ.

ವೃಷಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ಮನೆ ಅಥವಾ ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಅನಿರೀಕ್ಷಿತವಾಗಿ ಬರುವ ಅತಿಥಿಗಳಿಂದ ನಿಮ್ಮ ಸಂತಸ ಹೆಚ್ಚಾಗಲಿದೆ. ಪ್ರೀತಿ ಪಾತ್ರರೊಂದಿಗೆ ಇಷ್ಟಭೋಜನ ಮಾಡುವಿರಿ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಸಂಚಾರ ಮಾಡಬೇಕಾಗಬಹುದು. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಆಸ್ತಿ ವಿವಾದಗಳಿಗೆ ಅಂತ್ಯ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗಬಹುದು.

ಸಿಂಹ: ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ದುಡುಕು ಮಾತುಗಳಿಗೆ ಕಡಿವಾಣ ಹಾಕುವುದು ಅಗತ್ಯ. ಪ್ರೇಮಿಗಳಿಗೆ ಶುಭ ದಿನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಉದ್ಯೋಗ ಕ್ಷೇತ್ರದಲ್ಲಿ ಎಂದಿನಂತೆ ಕಾರ್ಯದೊತ್ತಡವಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಇಂದು ಕೈ ಹಾಕುವ ಕೆಲಸಗಳು ಯಶಸ್ವಿಯಾಗಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ನಿವಾರಣೆಯಾಗಿ ಅಭಿವೃದ್ಧಿ ಕಂಡುಬರಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ವೃತ್ತಿರಂಗದಲ್ಲಿ ಅಡೆತಡೆಗಳು ನೂರಾರಿದ್ದರೂ ಮುನ್ನಡೆಗೆ ತೊಂದರೆಯಾಗದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ತಾಳ್ಮೆಯಿಂದಿರಿ.

ಧನು: ಸಂಗಾತಿಯ ಕಷ್ಟಗಳಿಗೆ ಹೆಗಲು ಕೊಡಬೇಕಾಗುತ್ತದೆ. ಸಾಂಸಾರಿಕವಾಗಿ ಜವಾಬ್ಧಾರಿ ಹೆಚ್ಚಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗಲಿದೆ. ಆಕಸ್ಮಿಕವಾಗಿ ಹಳೆಯ ಮಿತ್ರರ ಭೇಟಿಯಾಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು.

ಮಕರ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಪ್ರೀತಿ ಪಾತ್ರರ ಸಲಹೆಗಳನ್ನು ಪಾಲಿಸುವುದು ಉತ್ತಮ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆರ್ಥಿಕವಾಗಿ ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಚಿಂತೆಯಾಗಬಹುದು.

ಕುಂಭ: ಗೃಹ ಸಂಬಂಧೀ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಿ ದೇಹಾಯಾಸವಾಗಬಹುದು. ವಾತ ಸಂಬಂಧೀ ಆರೋಗ್ಯದ ಸಮಸ್ಯೆ ಕಂಡುಬರಬಹುದು. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಿಬರಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ.

ಮೀನ: ಸಣ್ಣ ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ, ವೇತನ ಹೆಚ್ಚಳ ಸಂಭವವಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಕಂಡುಬರಲಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಕುಂಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೀಗೆ ಮಾಡಿ