Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 1 ಜನವರಿ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯ ಅಸಮಾಧಾನಕ್ಕೆ ಗುರಿಯಾಗುವಿರಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಾಂಸಾರಿಕವಾಗಿ ಸಮಾಧಾನಕರ ದಿನ. ಹಾಗಿದ್ದರೂ ಋಣಾತ್ಮಕ ಚಿಂತನೆಗಳು ಕಾಡಲಿವೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾಗಲಿದೆ.

ವೃಷಭ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಇದರಿಂದ ಕೆಲಸದಲ್ಲಿ ಉತ್ಸಾಹ ಕಳೆದುಕೊಳ್ಳಲಿದ್ದೀರಿ. ಶುಭ ಮಂಗಲ ಕಾರ್ಯಗಳ ಸಿದ್ಧತೆ ನಡೆಸಬೇಕಾಗುತ್ತದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ಮುನ್ನಡೆ.

ಮಿಥುನ: ವಾಹನ ಸಂಚಾರದಲ್ಲಿ ತುಸು ಎಚ್ಚರಿಕೆಯಿಂದಿರಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯಾದೀತು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆಯಿದ್ದರೂ ಆರೋಗ್ಯ ಹದತಪ್ಪುವುದು.

ಕರ್ಕಟಕ: ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು. ವ್ಯಾಪಾರ ವ್ಯವಹಾರದಲ್ಲಿ ಏರುಪೇರಾಗಬಹುದು. ಆರ್ಥಿಕವಾಗಿ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಅಗತ್ಯ. ವಂಚಕರ ಹಾವಳಿಯಿರಲಿದೆ. ಎಚ್ಚರಿಕೆಯಿಂದಿರುವುದು ಅಗತ್ಯ. ದೇವರ ಪ್ರಾರ್ಥನೆ ಮಾಡಿ.

ಸಿಂಹ: ವ್ಯಾಪಾರಿಗಳಿಗೆ ಅಧಿಕ ಲಾಭ ಬರುವುದು. ನಿವೇಶನ, ಮನೆ ಖರೀದಿಗೆ ಚಿಂತನೆ ನಡೆಸುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಎಷ್ಟೇ ಅನುಕೂಲಗಳಿದ್ದರೂ ಏನೋ ಒಂದು ರೀತಿಯ ಕೊರತೆ ಮನಸ್ಸಿಗೆ ಕಾಡುತ್ತಲೇ ಇರುವುದು. ಮಾನಸಿಕವಾಗಿ ನೆಮ್ಮದಿ ಕಂಡುಕೊಳ್ಳಲು ದೇವರ ಮೊರೆ ಹೋಗುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಹಿತಶತ್ರುಗಳಿಂದ ದೂರವಿರಿ.

ತುಲಾ: ಕಾರ್ಯಕ್ಷೇತ್ರದಲ್ಲಿ ಶತ್ರು ಪೀಡೆ ಇರಲಿದೆ. ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ‍್ನಗಳು ಎದುರಾಗಲಿವೆ. ಮಿತ್ರರ ಸಹಾಯ ದೊರೆಯಲಿದೆ. ಮಹಿಳೆಯರಿಗೆ ಶುಭ ಫಲಗಳಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆದಾಯಕ್ಕಿಂತ ಹೆಚ್ಚು ಖರ್ಚುಗಳು ಕಂಡುಬರಬಹುದು. ಗೃಹ ಸಂಬಂಧೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವರು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಧನು: ವಾತು ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ತೋರಿಬರಲಿವೆ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ಶತ್ರು ಬಾಧೆ ನಾಶವಾಗಲಿದೆ.

ಮಕರ: ಆಪ್ತರೊಂದಿಗೆ ಪ್ರವಾಸ, ಯಾತ್ರೆ ಮನಸ್ಸಿಗೆ ಖುಷಿಕೊಡಲಿದೆ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ದೂರ ಸಂಚಾರದಲ್ಲಿ ಕಳ್ಳತನದ ಭೀತಿಯಿದೆ, ಎಚ್ಚರಿಕೆ ಅಗತ್ಯ. ನೆರೆಹೊರೆಯವರಿಂದ ಚಾಡಿ ಮಾತುಗಳು ಕೇಳಿಬಂದೀತು. ತಾಳ್ಮೆಯಿಂದಿರಿ.

ಕುಂಭ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ವರ್ಗಾವಣೆಯ ಭೀತಿಯಿರಲಿದೆ. ಅನವಶ್ಯಕ ಮಾತನಾಡಲು ಹೋದರೆ ಕಲಹಕ್ಕೆ ದಾರಿಯಾದೀತು. ತಾಳ್ಮೆಯಿಂದಿರಿ. ಆರ್ಥಿಕವಾಗಿ ಧನವ್ಯಯವಾಗಲಿದೆ. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸುವಿರಿ.

ಮೀನ: ಅನವಶ್ಯಕವಾಗಿ ಆಪ್ತರ ನಿಷ್ಠುರಕ್ಕೆ ಕಾರಣರಾಗುವಿರಿ. ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಹಿಡಿಸದೇ ಹೋಗಬಹುದು. ಆದಾಯ ವೃದ್ಧಿಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಮಕ್ಕಳ ವಿಚಾರವಾಗಿ ಚಿಂತೆಯಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments