Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 6 ಜನವರಿ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ತಾಳ್ಮೆಯಿಂದಲೇ ನಿಭಾಯಿಸಬೇಕಾಗುತ್ತದೆ. ಸಾಂಸಾರಿಕವಾಗಿ ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಮನಸ್ಸಿಗೆ ಮುದ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ವೃತ್ತಿರಂಗದಲ್ಲಿ ಕಷ್ಟದ ಸಂದರ್ಭದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಬರುವಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಅಣಿಯಾಗಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಕರ್ಕಟಕ: ಅಧಿಕ ಧನ ಲಾಭ ತರುವ ಯೋಜನೆಗಳಿಗೆ ಕೈ ಹಾಕುವ ಮೊದಲು ಯೋಚಿಸಿ ಹೆಜ್ಜೆಯಿಡಿ. ಹಿತ ಶತ್ರುಗಳಿಂದ ವಂಚನೆ ಸಾಧ‍್ಯತೆಯಿದೆ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಉತ್ತಮವಾಗಲಿದೆ. ಸ್ವ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭವಾಗಿದೆ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗವಿದೆ.

ಕನ್ಯಾ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಕೌಟುಂಬಿಕವಾಗಿ ಜವಾಬ್ಧಾರಿಗಳು ಅಧಿಕವಾಗಲಿವೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳೂ ಇರಲಿವೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಬಹುದು. ಸಹೋದರರೊಂದಿಗಿನ ಮನಸ್ತಾಪಗಳು ದೂರವಾಗಲಿವೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭವಾಗುವುದು. ದೇವತಾ ಪ್ರಾರ್ಥನೆ ಮಾಡಿದರೆ ಮತ್ತಷ್ಟು ಶುಭವಾಗಲಿದೆ.

ವೃಶ್ಚಿಕ: ಮಿತ್ರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವಿರಿ. ಉದ್ದೇಶಿತ ಕಾರ್ಯಗಳಿಗೆ ಅಡೆತಡೆಗಳು ಎದುರಾದೀತು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಉಂಟಾಗಬಹುದು. ತಾಳ್ಮೆಯಿಂದಿರಿ.

ಧನು: ವೃತ್ತಿರಂಗದಲ್ಲಿ ಸಂಯಮದಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಮಾತಿಗೆ ಕಿವಿಗೊಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಿ ಬರಬಹುದು. ಅನಿರೀಕ್ಷಿತವಾಗಿ ಭೇಟಿಯಾಗುವ ಹಳೆಯ ಮಿತ್ರನಿಂದ ನಿಮ್ಮ ಸಮಸ್ಯೆಯೊಂದಕ್ಕೆ ಪರಿಹಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯನ್ನು ಅಲಕ್ಷಿಸಬೇಡಿ. ಮಾನಸಿಕ ನೆಮ್ಮದಿಗಾಗಿ ದೇವರ ಪ್ರಾರ್ಥನೆ ಮಾಡಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಅನುಭವಕ್ಕೆ ಬರಲಿದೆ. ಆರ್ಥಿಕವಾಗಿ ಇದುವರೆಗೆ ಇದ್ದ ಹಣದ ಅಡಚಣೆಗಳು ದೂರವಾಗಲಿವೆ. ಅಂದುಕೊಂಡ ಕೆಲಸಕ್ಕೆ ಚಾಲನೆ ನೀಡುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶಿಸುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಈ ಗಿಡವನ್ನು ಬೆಳೆಸಿ