Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 11 ಜನವರಿ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆಗಾಗ ಸಂಗಾತಿಯ ಜತೆಗೆ ಮನಸ್ತಾಪವಾಗಿ ಮಾನಸಿಕವಾಗಿ ಚಿಂತೆಯಾಗಬಹುದು. ಯಾವುದೇ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದಲೇ ಎದುರಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಪಡೆಯಲಿದ್ದೀರಿ. ಬಂಧು ಮಿತ್ರರ ಸಹಕಾರ ದೊರೆಯಲಿದೆ.

ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಇದರಿಂದಾಗಿ ನೀವು ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಹೊಸ ವಾಹನ ಖರೀದಿ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಸಿಟ್ಟಿನ ಭರದಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸಂಯಮ ಕಾಪಾಡಿಕೊಳ್ಳಿ. ವ್ಯಾಪಾರ ವ್ಯವಹರಾದಲ್ಲಿ ಮುನ್ನಡೆಯಿರಲಿದೆ. ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲು ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಹಿರಿಯರ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ.

ಸಿಂಹ: ಹಿಂದೆ ಮಾಡಿದ ಪಾಪ ಕಾರ್ಯಗಳಿಗೆ ಪ್ರಾಯಶ್ಚಿತ ಅನುಭವಿಸಲಿದ್ದೀರಿ. ಅನಿರೀಕ್ಷಿತ ರೂಪದಲ್ಲಿ ಧನ ಲಾಭವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವಾಹನ ಖರೀದಿಯಿಂದ ನಷ್ಟವಾಗಬಹುದು. ಆರೋಗ್ಯದಲ್ಲಿ ಕಾಳಜಿಯಿರಲಿ.

ಕನ್ಯಾ: ಮಾಡದ ತಪ್ಪಿಗೆ ಅನುಭವಿಸುವ ಪರಿಸ್ಥಿತಿ ನಿಮ್ಮದಾಗುತ್ತದೆ. ವೃತ್ತಿರಂಗದಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು.

ತುಲಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಯನ್ನು ಪ್ರಕಟಿಸಲಿದ್ದೀರಿ. ದೈವಾನುಕೂಲದಿಂದ ಯಶಸ್ಸು ನಿಮ್ಮ ಕೈಹಿಡಿಯಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಬೆನ್ನ ಹಿಂದೆ ಇರುವ ನಯವಂಚಕರ ವಂಚನೆ ಬೆಳಕಿಗೆ ಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಮಾಹಿತಿಯಿಟ್ಟುಕೊಳ್ಳಿ. ಸಾಂಸಾರಿಕವಾಗಿ ಇಷ್ಟಾರ್ಥ ಸಿದ್ಧಿಗೆ ದೇವರ ಮೊರೆ ಹೋಗುವಿರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಧನು: ಅನಿರೀಕ್ಷಿತವಾಗಿ ಬರುವ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಮನಸ್ಸಿಗೆ ನೋವಾಗಬಹುದು. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಮಾಡುವ ಯೋಗವಿದೆ. ವೃತ್ತಿರಂಗದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರ್ಥಿಕವಾಗಿ ಉತ್ತಮ ವರಮಾನ ಪಡೆಯುವಿರಿ. ಸಂಗಾತಿಗೆ ಉಡುಗೊರೆ ನೀಡುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ವಾಹನ ಚಾಲನೆ ವೃತ್ತಿಯಲ್ಲಿರುವವರಿಗೆ ಅನಿರೀಕ್ಷಿತವಾಗಿ ಭೇಟಿಯಾಗುವ ವ್ಯಕ್ತಿಯಿಂದ ಭವಿಷ್ಯಕ್ಕೆ ಹೊಸ ದಾರಿ ಸಿಗಲಿದೆ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರಶಂಸೆಗೊಳಗಾಗಲಿದ್ದಾರೆ. ಆರ್ಥಿಕವಾಗಿ ಅಭಿವೃದ್ಧಿಯಿದ್ದರೂ ಹೊಸ ಯೋಜನೆಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.

ಮೀನ: ಸಾಂಸಾರಿಕವಾಗಿ ಇರುವ ಹಲವು ಸಮಸ್ಯೆಗಳನ್ನು ಪರಿಹರಿಸಲು ಹಿರಿಯರ ಸಲಹೆ ಪಡೆಯಿರಿ. ನಿರುದ್ಯೋಗಿಗಳಿಗೆ ನಿರಾಶೆಯಾಗಬುದು. ಸ್ವ ಉದ್ಯೋಗಿಗಳಿಗೆ ಮುನ್ನಡೆಯಿರಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಫಲ ಸಿಗಲಿದೆ. ನೂತನ ದಂಪತಿಗೆ ಸಂತಸದ ದಿನ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments