Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 26 ಜನವರಿ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸ್ವ ವೃತ್ತಿಯವರಿಗೆ ಇಂದೂ ಕೂಡಾ ಬಿಡುವಿಲ್ಲದ ಕೆಲಸವಿರಲಿದೆ. ಆರೋಗ್ಯದ ಮೇಲೆ ಕಾಳಜಿಯಿರಲಿ. ಸಂಗಾತಿಯ ಕೆಲಸಗಳಿಗೆ ಸಹಾಯ ಮಾಡುವಿರಿ. ದಾಯಾದಿಗಳ ನಡುವೆ ಅಸೂಯೆ, ಸ್ಪರ್ಧಾತ್ಮಕ ಮನೋಭಾವ ಕಂಡುಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.

ವೃಷಭ: ಆರ್ಥಿಕವಾಗಿ ಆದಾಯ ಹೆಚ್ಚಳವಾಗಲಿದೆ. ಇದರಿಂದ ಗೃಹ ಸಂಬಂಧೀ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅನುಕೂಲವಾಗುವುದು. ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮಿಥುನ: ಆಸ್ತಿ ವಿವಾದಗಳಿಂದಾಗಿ ಮಾನಸಿಕ ನೆಮ್ಮದಿ ಇರದು. ಹಿರಿಯರ ಸಲಹೆಯನ್ನು ಪಾಲಿಸಿ. ಧನಾದಾಯಕ್ಕೆ ನಾನಾ ಮೂಲಗಳನ್ನು ಕಂಡುಕೊಳ್ಳುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆಗಳು ಸಿಗಲಿದೆ.

ಕರ್ಕಟಕ: ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ನೂತನ ವಾಹನ ಖರೀದಿಗೆ ಇದು ಸಕಾಲ. ಗೃಹ ಸಂಬಂಧೀ ಕೆಲಸಗಳಿಗೆ ಚಾಲನೆ ನೀಡುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಾಗುವುದು.

ಸಿಂಹ: ಪಾಲು ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಶೈಕ್ಷಣಿಕ ರಂಗದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಲಿವೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಕೌಟುಂಬಿಕವಾಗಿ ತಮ್ಮವರು ಎಂದು ನೀವು ಇದುವರೆಗೆ ಅಂದುಕೊಂಡಿದ್ದವರಿಂದಲೇ ವಂಚನೆ ಬೆಳಕಿಗೆ ಬರುವುದು. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಗಮನವಿರಲಿ. ಮಕ್ಕಳಿಗೆ ಉಡುಗೊರೆ ನೀಡುವಿರಿ.

ತುಲಾ: ನಿಮ್ಮ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಗಲಿದೆ. ಹೊಸ ವ್ಯಕ್ತಿಗಳ ಭೇಟಿಯಿಂದ ಹೊಸ ಐಡಿಯಾಗಳು ಹೊಳೆಯಲಿವೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಗೃಹ ಬಳಕೆ ವಸ್ತುಗಳ ಖರೀದಿ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ವಿಘ‍್ನಗಳು ತೋರಿಬಂದೀತು. ಸಂಗಾತಿಯ ಸಲಹೆಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮವಿದ್ದರೆ ಮಾತ್ರ ಯಶಸ್ಸು. ಆಕಸ್ಮಿಕವಾಗಿ ಧನಲಾಭವಾಗಲಿದೆ.

ಧನು: ನಿಮ್ಮ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಹಿತಶತ್ರುಗಳ ಕಾಟದಿಂದ ತೊಂದರೆ ಅನುಭವಿಸಬೇಕಾಗಬಹುದು. ವೈವಾಹಿಕ ಸಂಬಂಧಗಳು ಸುಸ್ರೂತ್ರವಾಗಿ ಮುಂದುವರಿಯುವುದು. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು.

ಮಕರ: ಕೈ ಹಿಡಿದ ಕೆಲಸವನ್ನು ಪೂರ್ತಿ ಮಾಡದೇ ಬಿಡಲಾರಿರಿ. ಆದರೆ ನಿಮ್ಮ ದುಡುಕು ಮಾತುಗಳಿಂದ ಇನ್ನೊಬ್ಬರಿಗೆ ನೋವಾಗದಂತೆ ನೋಡಿಕೊಳ್ಳಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭಫಲವಿದೆ.

ಕುಂಭ: ಮನೆ ಕಟ್ಟಲು ಆರಂಭಿಸಿದ್ದರೆ ಕೆಲಸಗಳು ಸುಸ್ರೂತ್ರವಾಗಿ ಮುಂದುವರಿಯಲಿದೆ. ಆಸ್ತಿ ವಿಚಾರದಲ್ಲಿ ದಾಯಾದಿಗಳೊಂದಿಗೆ ವಿವಾದಗಳು ಪರಿಹಾರವಾಗಲಿದೆ. ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಮಹಿಳೆಯರಿಗೆ ಶುಭದಿನ.

ಮೀನ: ಹಂತ ಹಂತವಾಗಿ ಅಭಿವೃದ್ಧಿ ಅನುಭವಕ್ಕೆ ಬರುವುದು. ಆರ್ಥಿಕವಾಗಿ ಆದಾಯಕ್ಕೆ ಕೊರೆತೆಯಿರದು. ಕಷ್ಟದಲ್ಲಿರುವ ಮಿತ್ರನಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಸಕಾಲದಲ್ಲಿ ಸಂಗಾತಿ ನೀಡುವ ಸಲಹೆಗಳು ಉಪಯೋಗಕ್ಕೆ ಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments