Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 29 ಜನವರಿ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆದಾಯದಲ್ಲಿ ವೃದ್ಧಿಯಾಗಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಹಾಗಿದ್ದರೂ ಉದ್ಯೋಗ ನಷ್ಟದ ಭೀತಿ, ಸ್ಥಾನ ಪಲ್ಲಟ ಭೀತಿಯಿಂದಾಗಿ ಒಂದು ರೀತಿಯ ಅಸ್ಥಿರತೆ ಕಾಡಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಎಷ್ಟೇ ಒಳ್ಳೆಯ ಕೆಲಸ ಮಾಡಿದರೂ ಅದಕ್ಕೆ ಚಾಡಿ ಹೇಳುವವರು ನಿಮ್ಮ ಸುತ್ತಮುತ್ತಲಿರುತ್ತಾರೆ. ಮಾನಸಿಕವಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ನಿರುದ್ಯೊಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಿಥುನ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಮೇಲ್ವರ್ಗದ ಅಧಿಕಾರಿಗಳಿಗೆ ಉದ್ಯೋಗದಲ್ಲಿ ಅಡೆತಡೆಗಳು ತೋರಿಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ನೆರೆಹೊರೆಯವರೊಂದಿಗೆ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವ್ಯಾಪಾರ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಚಿಂತೆ ಬೇಡ.

ಸಿಂಹ: ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ಸ್ಥಾನ ಮಾನ ವೃದ್ಧಿಯಾಗಲಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಕನ್ಯಾ: ವಿದ್ಯಾರ್ಥಿಗಳಿಗೆ ಆಲಸ್ಯತನದಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಬಹುದು. ಹೊಸ ಕೆಲಸಗಳಿಗೆ ಕೈಹಾಕಲು ಒಂದು ರೀತಿಯ ನಿರುತ್ಸಾಹ ಕಂಡುಬರಬಹುದು. ಸಾಂಸಾರಿಕವಾಗಿ ಸಂಯಮದಿಂದ ನಡೆದುಕೊಳ್ಳುವುದು ಉತ್ತಮ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಸಂಯಮ, ತಾಳ್ಮೆಯಿಂದ ನಡೆದುಕೊಳ್ಳಿ. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ವೃತ್ತಿರಂಗದಲ್ಲಿ ನೀವು ಅಂದುಕೊಂಡ ಕೆಲಸ ನೆರವೇರಲಿದೆ. ವೈವಾಹಿಕ ವಿಚಾರಗಳಲ್ಲಿ ಹಿನ್ನಡೆಯಾಗಬಹುದು.

ವೃಶ್ಚಿಕ: ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ದುಡಿತದಿಂದ ದೇಹಾಯಾಸವಾಗಬಹುದು. ಇನ್ನೊಬ್ಬರ ಮೇಲೆ ಅವಲಂಬಿಸುವ ಗುಣ ಬಿಟ್ಟು ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಿ.

ಧನು: ನಿಮ್ಮ ಉದಾಸೀನ ಪ್ರವೃತ್ತಿಯಿಂದಾಗಿ ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಒಳಿತು. ಹಠಮಾರಿ ಧೋರಣೆ ಪಕ್ಕಕ್ಕಿಡಿ. ವೃತ್ತಿರಂಗದಲ್ಲಿ ಕಿರಿ ಕಿರಿ ತಪ್ಪದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಕರ: ವಿದ್ಯಾರ್ಥಿಗಳಿಗೆ ಆಲಸ್ಯತನದಿಂದಾಗಿ ನಿರೀಕ್ಷಿತ ಫಲಿತಾಂಶ ಸಿಗದೇ ಹೋಗಬಹುದು. ವೃತ್ತಿರಂಗದಲ್ಲಿ ಜವಾಬ್ಧಾರಿಗಳು ಹೆಚ್ಚಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳು ಸಂತೋಷದ ಕ್ಷಣ ಅನುಭವಿಸುವರು.

ಕುಂಭ: ಗೃಹಸಂಬಂಧೀ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸುವುದರಿಂದ ದೇಹಾಯಾಸವಾಗಬಹುದು. ಆದಾಯಕ್ಕೆ ಮೀರಿ ಖರ್ಚಾಗಬಹುದು, ಕೊಂಚ ಮಿತಿಯಿರಲಿ. ಯೋಗ್ಯ ವಯಸ್ಕರಿಗೆ ವಿವಾಹ ಭಾಗ್ಯವಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮೀನ: ಪ್ರಯತ್ನಬಲದಿಂದ ನಿಮ್ಮ ಕಾರ್ಯ ಸಾಧನೆ ಮಾಡಿಕೊಳ್ಳಲಿದ್ದೀರಿ. ಕಷ್ಟದ ಸಮಯದಲ್ಲಿ ಕುಟುಂಬ ವರ್ಗದವರ ಶ್ರೀರಕ್ಷೆ ಸಿಗಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಭಿವೃದ್ಧಿಯಾಗುವುದು. ಹೊಸ ಬಂಡವಾಳ ಹೂಡಿಕೆ ಮಾಡುವ ಮುನ್ನ ಎಚ್ಚರಿಕೆ ವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂತಹ ಸ್ಥಳಗಳಲ್ಲಿ ಮತ್ತು ಈ ರೀತಿ ಇರುವವರಿಗೆ ಮಾತ್ರ ಲಕ್ಷ್ಮೀ ಒಲಿಯುತ್ತಾಳಂತೆ