Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 30 ಜನವರಿ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರುವುದು. ನಿವೇಶನ ಖರೀದಿ ಯೋಗವಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ವೃಷಭ: ಆಸ್ತಿ ವಿಚಾರವಾಗಿ ತಂದೆ-ಮಕ್ಕಳ ನಡುವೆ ಭಿನ್ನಾಭಿಪ್ರಾಯ ಏರ್ಪಡಲಿದೆ. ಕೋರ್ಟು ಕಚೇರಿ ಕಲಾಪಗಳಿಗೆ ಅಲೆದಾಟ ನಡೆಸಬೇಕಾಗುತ್ತದೆ. ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ್ನಗಳು ಎದುರಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ವೃತ್ತಿರಂಗದಲ್ಲಿ ವಿಳಂಬ ಗತಿಯಲ್ಲಿ ಕೆಲಸ ಕಾರ್ಯಗಳು ನಡೆಯಲಿದೆ. ಹೆಣ್ಣು ಮಕ್ಕಳಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಸಾಂಸಾರಿಕವಾಗಿ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ಮಾನಸಿಕವಾಗಿ ಉದ್ವೇಗಕ್ಕೊಳಗಾಗಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸ್ಪಂದನೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ಸಿಂಹ: ಹಿರಿಯರೊಡನೆ ಅನವಶ್ಯಕವಾಗಿ ವಾಗ್ವಾದಗಳಾಗದಂತೆ ಎಚ್ಚರಿಕೆ ವಹಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಮುನ್ನಡೆ ತೋರಿಬರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಹಿನ್ನಡೆಯುಂಟಾಗಬಹುದು. ದೂರ ಸಂಚಾರ ಮಾಡುವಾಗ ಕಳ್ಳತನವಾಗದಂತೆ ಎಚ್ಚರಿಕೆ ವಹಿಸಿ.

ಕನ್ಯಾ: ಉದರ ಸಂಬಂಧೀ ಸಮಸ್ಯೆಯಿಂದ ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಭಿನ್ನಾಭಿಪ್ರಾಯಗಳು ಎದುರಾಗಬಹುದು. ಹಿರಿಯರ ಸಲಹೆಗೆ ಕಿವಿಗೊಡಿ. ವೈದ್ಯಕೀಯ ವೃತ್ತಿಯವರಿಗೆ ಮುನ್ನಡೆಯಿರಲಿದೆ. ಸಂಚಾರದಲ್ಲಿ ಜಾಗ್ರತೆಯಿರಲಿ.

ತುಲಾ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಕ್ರಿಯಾಶೀಲತೆಯಿಂದ ಪರಿಹಾರ ಕಂಡುಕೊಳ್ಳುವಿರಿ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಂದ ಆಲಸ್ಯತನ ಕಂಡುಬರಬಹುದು.

ವೃಶ್ಚಿಕ: ವ್ಯಾಪಾರ, ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಆರ್ಥಿಕವಾಗಿ ಆದಾಯದಲ್ಲಿ ಹೆಚ್ಚಳವಾಗಲಿದೆ. ಪ್ರೀತಿ ಪಾತ್ರರ ಮನದಾಸೆ ಪೂರೈಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಫಲ ಸಿಗಲಿದೆ.

ಧನು: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರುವುದು. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಕರ: ನಿಮ್ಮ ಹೊಸ ಯೋಚನೆ, ವಿಚಾರಗಳಿಂದ ಬರುವಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ‍್ಳುವಿರಿ. ಅಧಿಕಾರಿ ವರ್ಗದವರಿಗೆ ಮುಂಬಡ್ತಿ ಯೋಗವಿದೆ. ವಾಹನ ಖರೀದಿಯಿಂದ ಲಾಭವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕುಂಭ: ದೈವಾನುಗ್ರಹದಿಂದ ನೀವು ಅಂದುಕೊಂಡ ಕಾರ್ಯಗಳನ್ನು ಇಂದು ಸುಗಮವಾಗಿ ನೆರವೇರಿಸುವಿರಿ. ಪತ್ನಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮೀನ: ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಕೆಲವು ಸಮಯ ಕಾಯುವುದು ಒಳಿತು. ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಆಪ್ತರ ಹಿತವಚನ ಉಪಯೋಗಕ್ಕೆ ಬರುವುದು. ದಿನದಂತ್ಯಕ್ಕೆ ಶುಭ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಟರ್ ವ್ಯೂ ಗೆ ಹೋಗುವವರು ದೇವರ ಅನುಗ್ರಹ ಪಡೆಯಲು ಹೀಗೆ ಮಾಡಿ