ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 5 ಫೆಬ್ರವರಿ 2020 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳು ಅಧಿಕವಾಗಿದ್ದರೂ ನಿಮ್ಮ ಗುರಿ ತಲುಪಲಿದ್ದೀರಿ. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಉತ್ತಮ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಲಿದೆ.

ವೃಷಭ: ಹೊಸ ಉದ್ಯಮದಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಿಗಲಿದೆ. ಸಾಂಸಾರಿಕವಾಗಿ ಒತ್ತಡಗಳು ಕಡಿಮೆಯಾಗಲಿವೆ. ಸಂಗಾತಿಯ ಸಹಕಾರ ಸಿಗಲಿದೆ. ಆದರೆ ದುಡುಕಿ ಮಾತನಾಡಲು ಹೋಗಬೇಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ಸೂಕ್ತ ತೀರ್ಮಾನ ತೆಗೆದುಕೊಳ್ಳಲು ಗೊಂದಲಗಳು ಕಾಡಲಿವೆ. ಹಿರಿಯರ ಸಲಹೆಗೆ ಕಿವಿಗೊಡಿ. ಆತ್ಮೀಯರೊಂದಿಗೆ ಇದ್ದಿದ್ದ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರಲಿದೆ.

ಕರ್ಕಟಕ: ಸಣ್ಣ ಪುಟ್ಟ ವಿಚಾರದಲ್ಲಿ ಸಂಸಾರದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರಲಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು. ಕ್ರಯವಿಕ್ರಯಗಳಲ್ಲಿ ಲಾಭ ಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಕಂಡುಬರಲಿದೆ. ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ವೇದಿಕೆ ಸಿಗಲಿದೆ. ಸಾಂಸಾರಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರುವುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ.

ಕನ್ಯಾ: ಇಂದಿನ ದಿನ ನಿಮಗೆ ಸಾಧಾರಣವಾಗಿರಲಿದ್ದು, ವೃತ್ತಿರಂಗದಲ್ಲಿ ಕಾರ್ಯದೊತ್ತಡವಿದ್ದರೂ ನಿಮ್ಮ ಕೆಲಸಕ್ಕೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಕಲಹಗಳಾಗದಂತೆ ಎಚ್ಚರವಹಿಸಿ. ಗೃಹ ಕೃತ್ಯಗಳಿಗೆ ವಿಘ್ನಗಳು ಬಂದೀತು. ಎಚ್ಚರ.

ತುಲಾ: ದುರ್ಜನರ ಸಂಗದಿಂದ ಅಶುಭ ಫಲ ಸಿಕ್ಕೀತು. ಆದಷ್ಟು ಉತ್ತಮ ಸ್ನೇಹ ಸಂಬಂಧ ಮಾಡಿಕೊಳ್ಳಿ. ಕಾಲು, ಮಂಡಿ ನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಶ್ಚಿಕ: ವ್ಯಾಪಾರ, ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಖರ್ಚು ವೆಚ್ಚದ ಬಗ್ಗೆ ಎಚ್ಚರವಿರಲಿ. ಶತ್ರು ಪೀಡೆ ನಾಶವಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಮಾನಸಿಕವಾಗಿ ನಿಮ್ಮ ಆತ್ಮಸ್ಥೈರ್ಯ ಹೆಚ್ಚಲಿದ್ದು, ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಧೈರ್ಯ ಬರುವುದು. ಮಕ್ಕಳಿಂದ ಒಳ್ಳೆಯ ಸುದ್ದಿ ಕೇಳಲಿದ್ದೀರಿ. ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಕೆಲವೊಂದು ಸಮಸ್ಯೆಗಳಿಂದ ಮಾನಸಿಕವಾಗಿ ಚಿಂತೆಯಾದರೂ ಸಂಗಾತಿಯ ಸಹಕಾರ ಸಿಗಲಿದೆ. ನಿರುದ್ಯೋಗಿಗಳಿಗೆ ಪ್ರಯತ್ನಬಲ ಮುಂದುವರಿಸಬೇಕಾಗುತ್ತದೆ. ಕೃಷಿಕರಿಗೆ ಸಣ್ಣ ಮಟ್ಟಿನ ಲಾಭವಾಗಬಹುದು.

ಕುಂಭ: ಕುಟುಂಬ ವರ್ಗದವರಿಂದ ಶಾಂತಿ ಸಮಾಧಾನ ಸಿಗಲಿದೆ. ಹೊಸ ಕೆಲಸಗಳನ್ನು ಆರಂಭಿಸುವಾಗ ಅಶುಭ ಫಲಗಳು ಕಂಡುಬಂದರೆ ಕುಲದೇವರ ಪ್ರಾರ್ಥನೆ ಮಾಡಿ ಮುಂದುವರಿಯಿರಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಸಂಚಾರದಿಂದ ಕಾರ್ಯಸಿದ್ಧಿ.

ಮೀನ: ಸಹನೆ ಕಳೆದುಕೊಳ್ಳದೇ ಸಂಯಮದಿಂದ ನಡೆದುಕೊಂಡಲ್ಲಿ ಸಂಬಂಧವೂ ಉಳಿದುಕೊಳ್ಳುವುದು. ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ತೋರಿಬಂದೀತು. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments