Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 10 ಫೆಬ್ರವರಿ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸದಾಗಿ ಕೆಲವು ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದೇವರ ಪ್ರಾರ್ಥನೆ ಮಾಡಿ.

ವೃಷಭ: ಸಂಗಾತಿಯೊಂದಿಗೆ ಮಕ್ಕಳ ಭವಿಷ್ಯದ ವಿಚಾರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳುವಿರಿ. ವೃತ್ತಿರಂಗದಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರ ನಡೆಸಬೇಕಾಗುತ್ತದೆ.

ಮಿಥುನ: ಸ್ವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ, ಆರ್ಥಿಕವಾಗಿ ಲಾಭವಾಗಲಿದೆ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ಕರ್ಕಟಕ: ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಮಾಡುವಿರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಹಿನ್ನಡೆಯಾಗಬಹುದು. ಚಿಂತೆ ಬೇಡ.

ಕನ್ಯಾ: ವೃತ್ತಿರಂಗದಲ್ಲಿ ಹೊಸಬರೊಂದಿಗೆ ವ್ಯವಹಾರ ನಡೆಸುವಾಗ ಎಚ್ಚರ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕುವಿರಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು. ಕೆಲವು ದಿನ ಕಾಯುವುದು ಉತ್ತಮ.

ತುಲಾ: ಅಧಿಕ ಲಾಭ ತಂದುಕೊಡುವ ಯೋಜನೆಗಳಿಗೆ ಕೈ ಹಾಕಿ ನಷ್ಟ ತಂದುಕೊಳ್ಳಬೇಡಿ. ಸಂಗಾತಿಯ ಸಲಹೆಗೆ ಕಿವಿಗೊಡಿ. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಆದರೆ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆಪಡುವರು. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರವಾಗಿರಿ.

ಧನು: ಸಹೋದರರೊಂದಿಗಿನ ಮನಸ್ತಾಪಗಳು ದೂರವಾಗಲಿದೆ. ಆದರೆ ಸಂಗಾತಿಯೊಂದಿಗೆ ದುಡುಕಿನ ವರ್ತನೆ ತೋರಿದರೆ ಮನಸ್ತಾಪ ಗ್ಯಾರಂಟಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಕರ: ವೃತ್ತಿರಂಗದಲ್ಲಿ ಸಾಧಾರಣ ಯಶಸ್ಸು ನಿಮ್ಮದಾಗಲಿದೆ. ಸಂಯಮದಿಂದ ವರ್ತಿಸುವುದು ಒಳಿತು. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ಇಷ್ಟು ದಿನ ಮನಸ್ಸಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಹೆಚ್ಚಿನ ಶುಭ ಫಲಗಳಿಗೆ ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆಯಿರಲಿ.

ಮೀನ: ಕೆಳ ಹಂತದ ನೌಕರರಿಗೆ ಉನ್ನತ ಸ್ಥಾನ ಮಾನ ಯೋಗವಿದೆ. ಮಹಿಳೆಯರಿಂದ ಅಪವಾದದ ಭೀತಿಯಿದೆ. ರಾಜಕೀಯ ರಂಗದಲ್ಲಿದ್ದವರಿಗೆ ಮುನ್ನಡೆ ಸಿಗಲಿದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ವ ಸರ್ಪದೋಷಗಳು ನಿವಾರಣೆಯಾಗಲು ಹೀಗೆ ಮಾಡಿ