Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 12 ಫೆಬ್ರವರಿ 2020 (07:27 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಗೃಹ ಬಳಕೆಯ ವಸ್ತುಗಳ ಖರೀದಿಗಾಗಿ ಧನವ್ಯಯ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾಗಬಹುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ಮಾನಸಿಕವಾಗಿ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ.

ವೃಷಭ: ವೃತ್ತಿರಂಗದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಕೆಲವೊಂದು ನಿರ್ಧಾರಗಳಿಂದಾಗಿ ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗಬಹುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಮಿಥುನ: ದಾಂಪತ್ಯದಲ್ಲಿ ಸುಮಧುರ ಕ್ಷಣಗಳು ನಿಮ್ಮದಾಗಲಿದ್ದು, ಸಂತಾನ ಫಲ ಸೂಚನೆಯೂ ಸಿಗಲಿದೆ. ನಿರ್ಧಾರಗಳನ್ನು ಕೈಗೊಳ್ಳುವಾಗ ಮಾನಸಿಕವಾಗಿ ಗೊಂದಲ ಕಾಡಬಹುದು. ಉದ್ಯೋಗದಲ್ಲಿ ಮಹತ್ವದ ಮುನ್ನಡೆ ಸಿಗಲಿದೆ. ಆದರೆ ಕಿರು ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವವಿದ್ದು ಕಾಳಜಿ ಅಗತ್ಯ. ಸರಕಾರಿ ಉದ್ಯೋಗದಲ್ಲಿರುವವರಿಗೆ ಆದಾಯ ವೃದ್ಧಿಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾಗಲಿದೆ.

ಸಿಂಹ: ನೀವು ಬಯಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯುವುದರಿಂದ ಒತ್ತಡ ಕಡಿಮೆಯಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕನ್ಯಾ: ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳು ಸುಸ್ರೂತ್ರವಾಗಿ ನೆರವೇರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಬೇಕಾಗುತ್ತದೆ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿ ಬರಲಿದೆ. ವ್ಯಾಪಾರ,ವ್ಯವಹಾರ ಕ್ಷೇತ್ರದಲ್ಲಿ ಹೆಚ್ಚಿನ ಲಾಭ ಕಂಡುಬರಲಿದೆ. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ.

ವೃಶ್ಚಿಕ: ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ಅನಿವಾರ್ಯತೆ ಬರಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಅಸಹಕಾರ ನೆಮ್ಮದಿ ಹಾಳು ಮಾಡಬಹುದು. ಆದರೆ ಆರ್ಥಿಕವಾಗಿ ನಿಮ್ಮ ಸ್ಥಿತಿಗತಿ ಸುಧಾರಿಸಲಿದೆ. ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

ಧನು: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಕಿರಿ ಕಿರಿ ಉಂಟಾಗಬಹುದು. ಸಂಯಮದಿಂದ ನಡೆದುಕೊಳ್ಳಿ. ಸಂಗಾತಿಯಿಂದ ಉಡುಗೊರೆ ನಿರೀಕ್ಷಿಸಬಹುದು. ನಿಮ್ಮ ಸಮಾಜಮುಖಿ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು.

ಮಕರ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ತಾಳ್ಮೆಯಿಂದಿರಿ. ಆದರೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಸ್ನೇಹಿತರಿಂದ ಲಾಭವಾಗಲಿದೆ. ಅನವಶ್ಯಕವಾಗಿ ಉದ್ವೇಗಕ್ಕೊಳಗಾಗಬೇಡಿ.

ಕುಂಭ: ಚಿಂತಿತ ಕೆಲಸಗಳನ್ನು ಪೂರ್ತಿ ಮಾಡುವಿರಿ. ವೃತ್ತಿರಂಗದಲ್ಲಿ ಮಾನಸಿಕವಾಗಿ ನೆಮ್ಮದಿ ಇರಲಾರದು. ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ದೇಹಾರೋಗ್ಯದ ಕಡೆಗೆ ಗಮನ ಕೊಡಿ. ಸಾಂಸಾರಿಕವಾಗಿ ಇಷ್ಟಮಿತ್ರರ ಆಗಮನ ಮನಸ್ಸಿಗೆ ಸಂತಸ ನೀಡಲಿದೆ.

ಮೀನ: ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಂಡು ಮನ್ನಡೆದಲ್ಲಿ ಯಶಸ್ಸು ಸಿಗಲಿದೆ. ಕೊಡು ಕೊಳ್ಳುವಿಕೆ ವ್ಯವಹಾರದಿಂದ ಲಾಭವಾಗಲಿದೆ. ತಾಂತ್ರಿಕ ವೃತ್ತಿಯವರಿಗೆ ಹಿನ್ನಡೆಯಾಗಬಹುದು. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

Share this Story:

Follow Webdunia kannada

ಮುಂದಿನ ಸುದ್ದಿ

ಚಂಚಲೆಯಾದ ಲಕ್ಷ್ಮೀ ನಿಮ್ಮ ಕೈಯಲ್ಲಿ ಸ್ಥಿರವಾಗಿ ನಿಲ್ಲಬೇಕೆಂದರೆ ಈ ತಂತ್ರ ಬಳಸಿ