Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 27 ಫೆಬ್ರವರಿ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಪ್ರಾಮಾಣಿಕ ಕೆಲಸಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗದಲ್ಲಿ ಮುಂಬಡ್ತಿ ಯೋಗವಿದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರಲಿದೆ. ಹಣಕಾಸಿನ ವಿಚಾರವಾಗಿ ಕೊಂಚ ಕಷ್ಟವಾಗಬಹುದು. ಆದರೂ ಮಾನಸಿಕವಾಗಿ ನೆಮ್ಮದಿಯಿರಲಿದೆ.

ವೃಷಭ: ಸಕಾಲದಲ್ಲಿ ಧನಾಗಮನವಾಗುವುದರಿಂದ ಕಾರ್ಯಸಾಧನೆಯಾಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆ ಗಳಿಸಲು ಸೂಕ್ತ ಅವಕಾಶಗಳು ಒದಗಿಬರಲಿವೆ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡಲಿದ್ದೀರಿ.

ಮಿಥುನ: ಕೆಲಸ ಕಾರ್ಯದ ಒತ್ತಡದಿಂದಾಗಿ ತಾಳ್ಮೆ ಕಳೆದುಕೊಳ್ಳುವಂತಹ ಸಂದರ್ಭಗಳು ಬರಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.

ಕರ್ಕಟಕ: ನೂತನ ವಾಹನ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಗತಿ ಸುಧಾರಣೆಯಾಗುವುದರಿಂದ ಹೊಸ ವ್ಯವಹಾರಗಳಿಗೆ ಕೈ ಹಾಕಬಹುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.

ಸಿಂಹ: ಇಷ್ಟ ಮಿತ್ರರೊಂದಿಗೆ ಪ್ರವಾಸಾದಿಗಳಿಗೆ ಸಾಕಷ್ಟು ಹಣ ಖರ್ಚು ಮಾಡಲಿದ್ದೀರಿ. ಹೊಸದಾಗಿ ಆರಂಭಿಸಿದ ಉದ್ಯಮದಿಂದ ಲಾಭ ಕೈಗೆ ಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ದುಡಿದರೂ ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ ಎಂಬ ಅಸಮಾಧಾನ ಕಾಡಲಿದೆ. ಬಾಳ ಸಂಗಾತಿಯೊಂದಿಗೆ ಇಷ್ಟ ಸ್ಥಳಕ್ಕೆ ಭೇಟಿ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ಆಲಸ್ಯತನದಿಂದ ಹಿನ್ನಡೆಯಾಗಲಿದೆ. ದುರ್ಜನರ ಸಂಗದಿಂದ ದೂರವಿರಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಮೆಚ್ಚುಗೆ ಗಳಿಸಲಿದ್ದೀರಿ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡರೆ ಮುನ್ನಡೆ ಸಿಗುವುದು. ವಿವಾಹ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ನೌಕರ ವರ್ಗದವರಿಗೆ ವರ್ಗಾವಣೆ ಭೀತಿಯಿದೆ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಆರ್ಥಿಕವಾಗಿ ಎಚ್ಚರಿಕೆಯಿಂದಿರಬೇಕಾದ ದಿನ. ಹಿರಿಯರಿಗೆ ಪ್ರವಾಸದ ಯೋಗವಿರಲಿದೆ.

ಧನು: ಗೃಹ ಸಂಬಂಧೀ ಕೆಲಸಗಳಲ್ಲಿ ಮುಳುಗಿ ಹೋಗಲಿದ್ದೀರಿ. ಸಹೋದರರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗವಿದೆ. ದೇವರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ.

ಮಕರ: ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ, ಉನ್ನತ ಸ್ಥಾನ ಮಾನದ ಯೋಗವಿದೆ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ವರ್ಗಾವಣೆಯ ಭೀತಿಯಿದೆ. ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕುಂಭ: ದಾಂಪತ್ಯದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಮೂಡಿಬರಲಿದೆ. ಇದನ್ನು ಸರಿದೂಗಿಸಿಕೊಂಡು ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ಭವಿಷ್ಯದ ಯೋಜನೆ ರೂಪಿಸುವಿರಿ. ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಬಹುದು.

ಮೀನ: ನಿಮ್ಮ ಗೊಂದಲದ ಮನಸ್ಥಿತಿಯಿಂದ ಕಾರ್ಯಕ್ಷೇತ್ರದಲ್ಲಿ ಉನ್ನತ ಅವಕಾಶವನ್ನು ಕಳೆದುಕೊಳ್ಳಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಅವಿವಾಹಿತರಿಗೆ ಅನಿರೀಕ್ಷಿತ ರೂಪದಲ್ಲಿ ವಿವಾಹ ಸಂಬಂಧ ಹುಡುಕಿಕೊಂಡು ಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾತ್ರಿ ವೇಳೆ ಮಾಡುವ ಈ ಕೆಲಸದಿಂದ ನಕರಾತ್ಮಕ ಶಕ್ತಿಗಳು ನಮ್ಮನ್ನ ಆವರಿಸುತ್ತವೆ