ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 28 ಫೆಬ್ರವರಿ 2020 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕವಾಗಿ ಹೆಚ್ಚಿನ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನೀವು ಅಂದುಕೊಂಡಂತೆ ನಡೆಯುತ್ತಿಲ್ಲ ಎಂಬ ಬೇಸರ ಕಾಡಬಹುದು. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ. ದುಂದುವೆಚ್ಚಗಳಿಗೆ ಕಡಿವಾಣವಿರಲಿ.

ವೃಷಭ: ಮಹಿಳೆಯರಿಗೆ ಗೃಹಕೃತ್ಯಗಳಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವ್ಯವಹಾರದಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಕುಲದೇವರ ಪ್ರಾರ್ಥನೆಯಿಂದ ಶುಭವಾಗಲಿದೆ.

ಮಿಥುನ: ಪಾಲುದಾರಿಕೆ ವ್ಯವಹಾರ ಮಾಡುತ್ತಿದ್ದವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗಲಿದೆ. ನಯವಂಚಕರ ಬಗ್ಗೆ ಎಚ್ಚರಿಕೆಯಿಂದಿರುವುದು ಉತ್ತಮ. ಖಾಸಗೀ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ.

ಕರ್ಕಟಕ: ವೃತ್ತಿರಂಗದಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ಇದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಹಿನ್ನಡೆಯುಂಟಾಗಬಹುದು. ಗೃಹ ಸಂಬಂಧೀ ಹೊಸ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಸಿಂಹ: ಅಂದುಕೊಂಡ ಕೆಲಸಗಳನ್ನು ನಿರ್ವಿಘ್ನವಾಗಿ ಪೂರ್ತಿ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ಅವಿವಾಹಿತರಿಗೆ ಶೀಘ್ರವೇ ಕಂಕಣ ಭಾಗ್ಯವಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಹಿರಿಯರಿಗೆ ತೀರ್ಥ ಯಾತ್ರೆಯ ಭಾಗ್ಯ. ಮಹಿಳೆಯರಿಗೆ ಮುನ್ನಡೆ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಚಟುವಟಿಕೆಗಳನ್ನು ಗಮನಿಸುವವರು ಯಾರೋ ಇದ್ದಾರೆ ಎಂಬುದನ್ನು ಮರೆಯಬೇಡಿ. ದುರ್ಜನರ ಸಂಗದಿಂದ ದೂರವಿರುವುದು ಉತ್ತಮ. ಸಂಗಾತಿಯ ಮನಸ್ಸಿಗೆ ಇಷ್ಟವಾಗುವಂತೆ ನಡೆದುಕೊಳ್ಳುತ್ತೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ, ಭವಿಷ್ಯಕ್ಕೆ ಕೂಡಿಡುವ ಯೋಜನೆಗಳನ್ನು ರೂಪಿಸಬೇಕಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ  ಕರೆ ಬರಲಿದೆ. ಬಾಳಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರ.

ವೃಶ್ಚಿಕ: ನೂತನ ವಿವಾಹಿತರಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗಿಸಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವಿರಿ. ಚಾಲನೆಯಲ್ಲಿ ಎಚ್ಚರವಿರಲಿ.

ಧನು: ನಿಮ್ಮ ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಹಿರಿಯರು ಬಾಕಿ ಉಳಿಸಿದ್ದ ಧಾರ್ಮಿಕ ಕೆಲಸಗಳನ್ನು ಪೂರ್ತಿ ಮಾಡುವಿರಿ. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು, ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಮಕರ: ಸಮಾಜದಲ್ಲಿ ನಿಮ್ಮ ಕೀರ್ತಿ, ಸ್ಥಾನ ಮಾನ ವೃದ್ಧಿಯಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವಿವಾಹ ಪ್ರಸ್ತಾಪಗಳು ಬರಲಿವೆ. ನಿರುದ್ಯೋಗಿಗಳಿಗೆ ನಾನಾ ಅವಕಾಶಗಳು ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಚಿಂತೆ ಬೇಡ.

ಕುಂಭ: ಸಂಗಾತಿಯ ಮನಸ್ಸಿನ ಇಷ್ಟಕ್ಕೆ ವಿರುದ್ಧವಾಗಿ ಹೋದರೆ ಇಂದು ಮನಸ್ತಾಪ ಗ್ಯಾರಂಟಿ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ಮಕ್ಕಳಿಂದ ಸಂತಸ ನಿರೀಕ್ಷಿಸಬಹುದು. ಇಷ್ಟ ಭೋಜನ ಮಾಡುವ ಭಾಗ್ಯವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಸ್ತ್ರೀಯರಿಗೆ ಸ್ತ್ರೀಯರಿಂದಲೇ ತೊಂದರೆಯಾಗುವಂತಹ ಸಂದರ್ಭಗಳು ಎದುರಾಗಬಹುದು. ವ್ಯವಹಾರ ಕ್ಷೇತ್ರದಲ್ಲಿ ಅಪರಿಚಿತರಿಂದ ಲಾಭವಾಗಲಿದೆ. ಅನವಶ್ಯಕ ವಾದ ವಿವಾದಗಳಿಗೆ ಮೂಗು ತೂರಿಸಲು ಹೋಗಬೇಡಿ. ಯೋಚಿಸಿ ಮುಂದೆ ಹೆಜ್ಜೆಯಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ದಿನ ಈ ಕೆಲಸಗಳನ್ನು ತಪ್ಪಿಯೂ ಮಾಡಬೇಡಿ

ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರಂ ತಪ್ಪದೇ ಓದಿ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಗ್ರಹಗತಿಗಳ ದೋಷ ನಿವಾರಣೆಗೆ ನವಗ್ರಹ ಕವಚಂ ಸ್ತೋತ್ರ ಓದಿ

ದೀಪಾವಳಿ ಸಂದರ್ಭದಲ್ಲಿ ಯಾವ ರಾಶಿಯವರು ಯಾವ ಲಕ್ಷ್ಮೀ ಮಂತ್ರ ಹೇಳಬೇಕು ನೋಡಿ

ಮುಂದಿನ ಸುದ್ದಿ
Show comments