ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 4 ಮಾರ್ಚ್ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಇರುವ ಅಡೆತಡೆಗಳನ್ನು ನಿವಾರಿಸುವಿರಿ. ಮೇಲಧಿಕಾರಿಗಳ ಸಲಹೆ ಸೂಚನೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಆದರೆ ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವಿನಾಕಾರಣ ಚಿಂತೆ ಬೇಡ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ದೂರ ಪ್ರಯಾಣಕ್ಕೆ ಇದ್ದಕ್ಕಿದ್ದಂತೆ ರದ್ದಾಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನದಿಂದ ಅಭ್ಯಾಸದಲ್ಲಿ ಹಿನ್ನಡೆಯಾದೀತು. ನಿರೀಕ್ಷಿತ ಆದಾಯ ಬರದೇ ಹಣಕಾಸಿಗೆ ಪರದಾಡಬೇಕಾದೀತು.

ಮಿಥುನ: ಅಧಿಕಾರಿ ವರ್ಗದವರಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡಲಿವೆ. ಸಂಗಾತಿಯಿಂದ ಸಾಂತ್ವನ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಅನಗತ್ಯ ವಿವಾದಗಳು ಮೈಗಂಟಿಕೊಳ್ಳಲಿದೆ.

ಕರ್ಕಟಕ: ಅನಿರೀಕ್ಷಿತವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದ್ದು, ಕೈಗೆ ಬಂದ ಆದಾಯ ಉಳಿಸಿಕೊಳ್ಳಲಾಗುತ್ತಿಲ್ಲ ಎಂಬ ಚಿಂತೆ ಕಾಡಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ತೊಂದರೆಯಾಗಬಹುದು. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ರಾಜಕೀಯ ರಂಗದಲ್ಲಿರುವವರಿಗೆ ಸೂಕ್ತ ಸ್ಥಾನ ಮಾನ ಸಿಗಲಿದೆ. ವಾಹನ ಖರೀದಿ ಮಾಡಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸಾಂಸಾರಿಕ ಸುಖದಲ್ಲಿ ತೇಲುತ್ತಾ ಮಾಡಬೇಕಾದ ಕರ್ತವ್ಯ ಮರೆತು ಹೋಗಬೇಡಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು. ಕಾರ್ಯರಂಗದಲ್ಲಿ ವಿಘ‍್ನ ಭೀತಿ ಎದುರಾಗಲಿದೆ. ತಾಳ್ಮೆ ಅಗತ್ಯ.

ತುಲಾ: ಕ್ರಯ ವಿಕ್ರಯ ವ್ಯವಹಾರ ಮಾಡುವವರಿಗೆ ಹೆಚ್ಚಿನ ಲಾಭವಾಗಲಿದೆ. ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರಿಗೆ ಮುನ್ನಡೆಯ ಯೋಗವಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಶುಭ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಅದೃಷ್ಟದ ಬಲವಿರುವುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.

ಧನು: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ವಿದೇಶ ಯಾನ ಮಾಡುವ ಯೋಗವಿದೆ. ನಿರುದ್ಯೋಗಿಗಳಿಗೆ ಹಲವು ಉದ್ಯೋಗಾವಕಾಶಗಳು ಒದಗಿ ಬರಲಿವೆ. ಜಾಣ್ಮೆಯಿಂದ ಬಳಸಿಕೊಳ್ಳಿ. ವರ್ತಕ ವರ್ಗದವರಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಪಾಲು ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವ ಮುನ್ನ ಸಾಕಷ್ಟು ಎಚ್ಚರಿಕೆ ವಹಿಸುವುದು ಉತ್ತಮ. ಸಂಗಾತಿಯಲ್ಲಿ ಅನಿರೀಕ್ಷಿತವಾಗಿ ಆಗುವ ಪರಿವರ್ತನೆಯಿಂದ ಗೊಂದಲಾವಾದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಎಚ್ಚರಿಕೆ ವಹಿಸುವುದು ಮುಖ್ಯ.

ಕುಂಭ: ಬಿಡುವಿಲ್ಲದ ಕೆಲಸದಿಂದಾಗಿ ತಾಳ್ಮೆ ಕಳೆದುಕೊಳ್ಳುವ ಪ್ರಸಂಗಗಳು ಎದುರಾದೀತು. ಸಂಗಾತಿಯೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳದೇ ಇದ್ದರೆ ಕಲಹ ತಪ್ಪಿದ್ದಲ್ಲ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಆರ್ಥಿಕವಾಗಿ ಆದಾಯ ದ್ವಿಗುಣವಾಗಲಿದೆ.

ಮೀನ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಎದುರಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.  ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments