ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 5 ಮಾರ್ಚ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಆಕಸ್ಮಿಕವಾಗಿ ಧನಾಗಮನವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ವೃಷಭ: ನಿಮ್ಮ ಮಾನಸಿಕ ಸ್ಥೈರ್ಯದಿಂದ ಬರುವಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ವ್ಯವಹಾರದಲ್ಲಿ ಇರುವವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ಉದ್ಯೋಗ ವ್ಯವಹಾರದಲ್ಲಿ ಮೇಲ್ದರ್ಜೆಗೇರುವ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಮಿಥುನ: ವೃತ್ತಿರಂಗದಲ್ಲಿ ಅನಗತ್ಯ ಅಪವಾದಗಳು ಎದುರಾಗಲಿವೆ. ತಾಳ್ಮೆಯಿಂದ ನಿಭಾಯಿಸಿ. ಹಿರಿಯರ ಸಲಹೆಯಿಂದ ದಾಯಾದಿ ಕಲಹಗಳು ಸುಖಾಂತ್ಯವಾಗಲಿದೆ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಲಿದೆ. ಅನಗತ್ಯ ವಾದ ವಿವಾದಗಳಲ್ಲಿ ಮೂಗುತೂರಿಸಬೇಡಿ.

ಸಿಂಹ: ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಉದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವಿದ್ಯಾರ್ಥಿಗಳು ಪ್ರಯತ್ನ ಬಲದಿಂದ ಯಶಸ್ಸು ಸಾಧಿಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಮೇಲಧಿಕಾರಿಗಳ ಕಿರಿ ಕಿರಿ ನಿಮ್ಮ ತಾಳ್ಮೆ ಪರೀಕ್ಷೆ ಮಾಡಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ತುಲಾ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗಲಿದೆ. ವಾಹನ ಖರೀದಿಗೆ ಧನವ್ಯಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ದೈವಾನುಗ್ರಹದಿಂದ ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿವೆ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಗೃಹ ನಿರ್ಮಾಣ ಕಾರ್ಯಗಳನ್ನು ಆರಂಭಿಸಲು ಇದು ಸಕಾಲ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಅನವಶ್ಯಕವಾಗಿ ನೆರೆಹೊರೆಯವರಿಂದ ಮಾತು ಕೇಳಬೇಕಾಗಿಬರುತ್ತದೆ. ಅನಿರೀಕ್ಷಿತವಾಗಿ ದೇವಾಲಯ ಸಂದರ್ಶನ ಮಾಡುವ ಯೋಗವಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಕೋರ್ಟು ಕಚೇರಿ ಕಲಾಪಗಳಲ್ಲಿ ಮುನ್ನಡೆ ಸಿಗಲಿದೆ.

ಮಕರ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ವೃತ್ತಿರಂಗದಲ್ಲಿ ಇದುವರೆಗೆ ಇದ್ದ ಕಷ್ಟ ನಿವಾರಣೆಯಾಗಿ ನೆಮ್ಮದಿಯಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯಮಾಡಲಿದ್ದೀರಿ. ಹಿರಿಯರ ಸಲಹೆಗೆ ಕಿವಿಗೊಡಿ.

ಕುಂಭ: ಸಂಗಾತಿಯ ಹಠಮಾರಿ ಸ್ವಭಾವ ನಿಮ್ಮನ್ನು ಪೇಚಿಗೆ ಸಿಲುಕಿಸಲಿದೆ. ಕೌಟುಂಬಿಕವಾಗಿ ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಭೂ ಖರೀದಿ, ಗೃಹ ನಿರ್ಮಾಣಕ್ಕೆ ಇದು ಸಕಾಲ. ಸಾಲ ಪಾವತಿಯಾಗಲಿದ್ದು, ಆರ್ಥಿಕ ಸಂಕಷ್ಟಗಳು ನಿವಾರಣೆಯಾಗಲಿವೆ.

ಮೀನ: ಕನ್ಯಾಮಣಿಗಳಿಗೆ ಮನಸ್ಸಿಗೆ ಹಿಡಿಸಿದ ವಿವಾಹ ಪ್ರಸ್ತಾಪಗಳು ಬರಲಿವೆ. ಮನಸ್ಸಿಗೆ ಮುದ ನೀಡುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments