Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 10 ಮಾರ್ಚ್ 2020 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ನಿಮ್ಮ ಸಮಸ್ಯೆಗಳ ನಿವಾರಣೆಗೆ ಮಾತುಕತೆಯೇ ಪರಿಹಾರವಾಗಲಿದೆ. ಆತ್ಮವಿಶ್ವಾಸದ ಕೊರತೆ ಕಾಡಲಿದೆ. ವೃತ್ತಿರಂಗದಲ್ಲಿ ನೀವು ಅಂದುಕೊಂಡಿದ್ದನ್ನು ಸಾಧಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸರಿಯಾದ ಯೋಜನೆ ಅಗತ್ಯ.

ವೃಷಭ: ಯೋಗಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಪರಿಸ್ಥಿತಿಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕ್ಕೆ ಪೂರಕವಾದ ಶುಭ ಸುದ್ದಿ ಬರಲಿದೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಕರ್ಕಟಕ: ಹೊಸ ಕೆಲಸಗಳನ್ನು ಆರಂಭಿಸಲು ಇದು ಉತ್ತಮ ಸಮಯ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಅನವಶ್ಯಕವಾಗಿ ಇತರರೊಡನೆ ವಾದ ವಿವಾದದಲ್ಲಿ ತೊಡಗಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಗೆ ಪೂರಕವಾದ ಸನ್ನಿವೇಶ ಒದಗಿಬರಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೇ ಅಸೂಯೆಪಡವಂತೆ ಮೇಲುಗೈ ಸಾಧಿಸಲಿದ್ದೀರಿ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಆರ್ಥಿಕ ಪರಿಸ್ಥಿತಿಯಲ್ಲಿ ಹಣಕಾಸಿನ ಮುಗ್ಗಟ್ಟುಗಳು ತೋರಿಬಂದು, ಅಂದುಕೊಂಡ ಕೆಲಸ ಕಾರ್ಯ ಪೂರ್ತಿ ಮಾಡಲು ಅಡೆತಡೆಗಳು ತೋರಿಬಂದೀತು. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಸಂಶಯ ಪ್ರವೃತ್ತಿಯಿಂದ ಸಂಬಂಧ ಹಾಳಾಗಬಹುದು, ಎಚ್ಚರಿಕೆಯಿಂದಿರಿ.

ತುಲಾ: ನಿಮ್ಮ ವೃತ್ತಿರಂಗದಲ್ಲಿ ಕ್ರಿಯಾಶೀಲತೆಗೆ ಬೆಲೆ ಸಿಗದೇ ಬೇಸರವಾಗಬಹುದು. ಎಲ್ಲಾ ವಿಚಾರದಲ್ಲಿ ಆತ್ಮವಿಶ್ವಾಸವೇ ಮುಖ್ಯವಾಗಲಿದೆ. ನ್ಯಾಯಾಲಯದ ಕಾರ್ಯ ಕಲಾಪದಲ್ಲಿ ಹಿನ್ನಡೆಯಾಗಬಹುದು. ಚಿಂತೆ ಬೇಡ. ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ.

ವೃಶ್ಚಿಕ: ಬಂಧು ಮಿತ್ರರ ಸಮಾಗಮದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಧನು: ವೃತ್ತಿರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ ಕೇಳಿಬರಲಿದೆ.

ಮಕರ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಮುಖ್ಯ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು, ಎಚ್ಚರಿಕೆಯಿಂದಿರಿ.

ಕುಂಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಗೃಹಕೃತ್ಯಗಳಿಗೆ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ.

ಮೀನ: ನಿರುದ್ಯೋಗಿಗಳಿಗೆ ಹಲವಾರು ಅವಕಾಶಗಳು ಒದಗಿಬರಲಿದ್ದು, ಯೋಗ್ಯವಾದ ವೃತ್ತಿಯನ್ನೇ ಆರಿಸಿ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಆದಾಯದಷ್ಟೇ ಖರ್ಚೂ ಇರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments