Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 11 ಮಾರ್ಚ್ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ಅಡೆತಡೆಗಳು ತೋರಿಬಂದೀತು. ದೂರ ಸಂಚಾರದಲ್ಲಿ ಹೆಚ್ಚಿನ ಗಮನ ಅಗತ್ಯವಿರುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೃಷಭ: ಹಿತ ಶತ್ರುಗಳಿಂದ ನಿಮ್ಮ ಕೆಲಸ ಕಾರ್ಯಗಳಿಗೆ ತೊಂದರೆಯಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರಲಿದೆ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಿರಿಯರ ತೀರ್ಥ ಯಾತ್ರೆಗೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಯ ಯೋಗವಿದೆ. ಆರ್ಥಿಕವಾಗಿ ಸಕಾಲದಲ್ಲಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ.

ಕರ್ಕಟಕ: ಸಾಂಸಾರಿಕವಾಗಿ ದಿಡೀರ್ ಆಗಿ ಕೆಲವೊಂದು ಬದಲಾವಣೆಗಳು ಸಂಭವಿಸಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ವ್ಯವಹಾರ ನಡೆಸುವಾಗ ಅಪವಾದಗಳು ಬರದಂತೆ ಎಚ್ಚರಿಕೆ ವಹಿಸಿ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಲಿದ್ದೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಬಹುದು. ದೂರ ಸಂಚಾರದಿಂದ ಕಾರ್ಯ ಸಿದ್ಧಿಯಾಗಲಿದೆ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಸವಿಯುವ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಇಷ್ಟು ದಿನ ವ್ಯವಹಾರದಲ್ಲಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗೆ ಅಚಾನಕ್ ಆಗಿ ಪರಿಹಾರದ ದಾರಿ ಕಂಡುಬರಲಿದೆ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಬಗ್ಗೆ ಕಾಳಜಿವಹಿಸಿ.

ತುಲಾ: ಉದ್ಯೋಗ ರಂಗದಲ್ಲಿ ಸಹೋದ್ಯೋಗಿಗಳಿಂದಲೇ ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆ ಬರಬಹುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ.

ವೃಶ್ಚಿಕ: ಮನೆಯಲ್ಲಿ ಸಾಮಾಧಾನಕರ ವಾತಾವರಣವಿರಲಿದ್ದು, ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯಲಿದ್ದೀರಿ. ವಾಹನ ಚಾಲನೆ ವೃತ್ತಿಯವರಿಗೆ ದೂರ ಸಂಚಾರ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲಿದ್ದೀರಿ. ಆದರೆ ನಿಮ್ಮ ಅನಗತ್ಯ ಮಾತುಗಳಿಂದ ಪಾಲಿಗೆ ಬಂದ ಅವಕಾಶ ಕಳೆದುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ.

ಮಕರ: ವ್ಯವಹಾರ ಕ್ಷೇತ್ರದಲ್ಲಿ ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನೆರೆಹೊರೆಯವರೊಂದಿಗೆ ಸಣ್ಣ ಮಟ್ಟಿನ ಮನಸ್ತಾಪ ಕಂಡುಬರಬಹುದು. ಸಂಯಮದಿಂದ ವರ್ತಿಸಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಕಾಳಜಿಯಿರಲಿ.

ಕುಂಭ: ಅನ್ಯರೊಂದಿಗೆ ವಿನಾ ಮನಸ್ತಾಪಕ್ಕೆ ಎಡೆ ಮಾಡಿಕೊಡದಿರಿ. ಸಂಗಾತಿಯ ದುಡುಕು ಮಾತಿನಿಂದ ಸಂಸಾರದಲ್ಲಿ ಭಿನ್ನಾಭಿಪ್ರಾಯ ಮೂಡೀತು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ಮೀನ: ಆರಾಮದಾಯಕ ಜೀವನಕ್ಕೆ ದಾರಿ ಹುಡುಕಲಿದ್ದೀರಿ. ಆರ್ಥಿಕವಾಗಿ ಕೂಡಿಟ್ಟ ಹಣ ಖರ್ಚಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಸ್ತ್ರೀಯರಿಗೆ ವೈವಾಹಿಕ ಭಾಗ್ಯ ಒದಗಿಬರಲಿದೆ. ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments