Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 12 ಮಾರ್ಚ್ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದ ವೇತನ ಹೆಚ್ಚಳ ಸಾಧ್ಯತೆಯಿದೆ. ಆದರೆ ಕಾರ್ಯದೊತ್ತಡ ಅಧಿಕವಾಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕೌಟುಂಬಿಕವಾಗಿ ನಿಮ್ಮ ಚಿಂತನೆಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ವೃಷಭ: ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಆದರೆ ವೃತ್ತಿರಂಗದಲ್ಲಿ ಕಠಿಣ ಸವಾಲುಗಳು ಎದುರಾಗಲಿವೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗುವುದು.

ಮಿಥುನ: ಸಾಂಸಾರಿಕವಾಗಿ ಉಲ್ಲಾಸದ ದಿನವಿದು. ಪತ್ನಿ, ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ದತೆ ನಡೆಸುವಿರಿ. ನೂತನ ದಂಪತಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಸರಕಾರಿ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಅಪರಿಚಿತರೂ ಇಂದು ನಿಮ್ಮ ನೆರವಿಗೆ ಬರಲಿದ್ದಾರೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.

ಸಿಂಹ: ನೀವು ಇಷ್ಟು ದಿನ ಯೋಚಿಸುತ್ತಿದ್ದ ಕೆಲಸಗಳು ನಿಧಾನಗತಿಯಲ್ಲಾದರೂ ಹಂತ ಹಂತವಾಗಿ ನಡೆಯುವುದು. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿವೆ. ಮಾನಸಿಕವಾಗಿ ಋಣಾತ್ಮಕ ಚಿಂತೆ ಬೇಡ. ದಿನದಂತ್ಯಕ್ಕೆ ಶುಭ ಸುದ್ದಿ ಕಾದಿದೆ.

ಕನ್ಯಾ: ಸಾಂಸಾರಿಕವಾಗಿ ರಾಜಿಮನೋಭಾವವಿದ್ದರೆ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬಹುದು. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆ ಉತ್ತಮ. ದೇಹ ಪರಿಸ್ಥಿತಿಯಲ್ಲಿ ಏರುಪೇರಾಗಲಿದ್ದು, ಆಸ್ಪತ್ರೆಗೆ ಅಲೆದಾಡಬೇಕಾದೀತು. ಕೆಲಸ ಕಾರ್ಯಗಳಲ್ಲಿ ಯಶಸ್ಸಿಗೆ ದೇವರ ಪ್ರಾರ್ಥನೆ ಮಾಡಿ.

ತುಲಾ: ವೃತ್ತಿರಂಗದಲ್ಲಿ ಹೊಸದಾಗಿ ಕೆಲವು ನೂತನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಸಂಗಾತಿಯು ನಿಮ್ಮ ನಿರ್ಧಾರದಿಂದ ಅಸಮಾಧಾನಗೊಳ್ಳಬಹುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ ವಹಿಸಲು ನಾನಾ ಅಡೆತಡೆಗಳು ಉಂಟಾಗಬಹುದು. ಸಾಮಾಜಿಕವಾಗಿ ಜನಮನ್ನಣೆ ಗಳಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಹಿನ್ನಡೆಯಾದೀತು. ಆದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ.

ಧನು: ಇಷ್ಟು ದಿನ ನೀವು ಅತಿಯಾಗಿ ನಂಬಿದ್ದವರೊಂದಿಗೆ ಮನಸ್ತಾಪವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರ ಚಾಡಿ ಮಾತಿಗೆ ಕಿವಿಗೊಡಬೇಡಿ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ಶುಭ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮಕರ: ನಿಮ್ಮ ಸಹಾಯ ಮಾಡುವ ಗುಣದಿಂದಲೇ ಕೈಸುಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾದೀತು. ನಯ ವಂಚಕರಿಂದ ದೂರವಿರುವುದು ಉತ್ತಮ. ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಶ್ರಮ ಅಗತ್ಯ.

ಕುಂಭ: ಸಂಗಾತಿಯೊಂದಿಗೆ ದೂರ ಸಂಚಾರ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಹಳೆಯ ಸಂಬಂಧಗಳು ಮತ್ತೆ ಕೂಡಲಿವೆ. ಸಾಂಸಾರಿಕವಾಗಿ ಸಂತೋಷ ಸಿಗುವುದು. ಆದರೆ ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ತಾಳ್ಮೆಯಿರಲಿ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿಯ ಯೋಗವಿದೆ. ಕನ್ಯಾಮಣಿಗಳಿಗೆ ಮನಸ್ಸಿಗೆ ಒಪ್ಪುವ ವರ ಸಿಗುವನು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿಯಿದ್ದರೂ ನಿಮ್ಮ ಮುನ್ನಡೆ ಯಾರೂ ತಡೆಯಲಾಗದು. ತಾಳ್ಮೆ, ಸಮಾಧಾನವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments