Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 24 ಮಾರ್ಚ್ 2020 (09:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರಲಿವೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳ ಕುರಿತು ಚಿಂತನೆ ನಡೆಸಲಿದ್ದೀರಿ. ಮೇಲಧಿಕಾರಿಗಳೊಂದಿಗೆ ವಿನಾಕಾರಣ ಸಂಘರ್ಷ ಬೇಡ. ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಕೆಲಸ ಕಾರ್ಯ ನೆರವೇರಿಸಲು ಅಡೆತಡೆಗಳು ತೋರಿಬರಲಿವೆ. ಆತ್ಮವಿಶ್ವಾಸದಿಂದ ಎದುರಿಸಬೇಕಾಗುತ್ತದೆ. ನಿಮ್ಮ ತಾಳ್ಮೆ ಪರೀಕ್ಷಿಸುವ ಪರಿಸ್ಥಿತಿ ಎದುರಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ವೃತ್ತಿರಂಗದಲ್ಲಿ ಹೊಸ ಎದುರಾಳಿಗಳ ಸೃಷ್ಟಿಯಾಗಲಿದೆ. ಆತ್ಮವಿಶ್ವಾಸದಿಂದ ಎದುರಿಸಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಭೂ ಖರೀದಿ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಕೆಲವು ದಿನ ಕಾಯುವುದು ಒಳಿತು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕೊರತೆ ಉಂಟಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸರಕಾರಿ ಉದ್ಯೋಗಿಗಳು ಬಿಡುವಿನ ಸದುಪಯೋಗಪಡಿಸಿಕೊಳ್ಳಲಿದ್ದಾರೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು. ಧಾರ್ಮಿಕವಾಗಿ ಭಕ್ತಿಭಾವ ಹೆಚ್ಚಲಿದೆ.

ಕನ್ಯಾ: ಅಂದುಕೊಂಡ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಲಿದೆ. ಚಿಂತಿತ ಕೆಲಸ ಪೂರೈಸಲು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ತುಲಾ: ಅಧಿಕ ಧನಾರ್ಜನೆಗೆ ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ. ನಿಮ್ಮ ಕ್ರಿಯಾಶೀಲತೆ ಪ್ರಕಟಿಸಲು ವೇದಿಕೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಿಗಳೇ ಅಸೂಯೆಪಡಲಿದ್ದಾರೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ವಾಹನ ಸವಾರರಿಗೆ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ.

ಧನು: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಕಠಿಣ ಪರಿಶ್ರಮ ಅಗತ್ಯವಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಇಷ್ಟ ಭೋಜನ, ಇಷ್ಟ ಮಿತ್ರರ ಭೇಟಿ ಸಾಧ‍್ಯತೆಯಿದೆ. ವ್ಯವಹಾರದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಾಗಲಿದೆ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ  ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರವಹಿಸಬೇಕು.

ಕುಂಭ: ಕಾರ್ಯಕ್ಷೇತ್ರದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಮಹಿಳೆಯರಿಗೆ ವೃತ್ತಿರಂಗದಲ್ಲಿ ಮುನ್ನಡೆ ಸಿಗಲಿದೆ. ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದಾರೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ವ್ಯವಹಾರಗಳಲ್ಲಿ ಬರುವ ಅಡೆತಡೆ ಅಸಹನೆಗೆ ಕಾರಣವಾಗಲಿದೆ. ಕಾರ್ಯ ಕ್ಷೇತ್ರದಲ್ಲಿ ಕಷ್ಟಗಳು ಬಂದಾಗ ಮಿತ್ರರ ಸಹಾಯ ದೊರೆಯಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಹಿಳೆಯರಿಗೆ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿರುವ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸಲು ಏಕಾದಶಿಯಂದು ತುಳಸಿ ಎಲೆಯಿಂದ ಹೀಗೆ ಮಾಡಿ