Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 30 ಮಾರ್ಚ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಯಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವಿರಿ. ಮೇಲಧಿಕಾರಿಗಳೊಂದಿಗೆ ಸಂಘರ್ಷ ಬೇಡ. ಕೌಟುಂಬಿಕವಾಗಿ ಯೋಚಿಸಿ ಮಾತನಾಡದೇ ಇದ್ದರೆ ಮನಸ್ತಾಪವಾಗಬಹದು. ಎಚ್ಚರ.

ವೃಷಭ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಪೈಪೋಟಿ ನಡೆಸಬೇಕಾಗುತ್ತದೆ. ಹೆಚ್ಚಿನ ಧನಪ್ರಾಪ್ತಿಗಾಗಿ ನಾನಾ ದಾರಿಗಳನ್ನು ಹುಡುಕುವಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ಮಿಥುನ: ಇಷ್ಟ ಭೋಜನ ಮಾಡುವ ಯೋಗವಿದೆ. ಎಷ್ಟೋ ದಿನಗಳಿಂದ ಕಾದಿದ್ದ ಮಿತ್ರನ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಬಗ್ಗೆ ಯೋಚನೆ ನಡೆಸಲಿದ್ದೀರಿ. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರಿಕೆ ಅಗತ್ಯ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಅನಗತ್ಯ ಸಮಸ್ಯೆಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಮಹಿಳೆಯರಿಂದ ಅಪವಾದ ಬರುವ ಭೀತಿಯಿದೆ. ಎಚ್ಚರಿಕೆಯಿಂದ ವರ್ತಿಸಿ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾಗಬಹುದು. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಜನಮನ್ನಣೆ ಸಿಗಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನವಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ಒಂದನ್ನು ಪಡೆಯಬೇಕಾದರೆ ಇನ್ನೊಂದನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದೆ. ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಬಹುದು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ತುಲಾ: ಮಿತ್ರರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಹೊಸ ಯೋಚನೆಗಳು, ಯೋಜನೆಗಳು ಹೊಳೆಯಲಿವೆ. ಚಿಂತಿತ ಕಾರ್ಯಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ವೃಶ್ಚಿಕ: ವೃತ್ತಿರಂಗದಲ್ಲಿ ಹೆಚ್ಚುವರಿ ಹೊಣೆಗಾರಿಕೆ ಹೆಗಲಿಗೇರಲಿದೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಲಾಭವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಂಗಾತಿಯ ಪ್ರೀತಿ ಸಂಪಾದಿಸಲಿದ್ದೀರಿ.

ಧನು: ನಿರುಪಯುಕ್ತ ಯೋಚನೆಗಳ ಬಗ್ಗೆ ಕಡಿವಾಣ ಹಾಕಬೇಕಿದೆ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಅಂದುಕೊಂಡ ಕೆಲಸಗಳನ್ನು ನೆರವೇರಿಸಲು ಅಡ್ಡಿ ಆತಂಕಗಳು ಎದುರಾಗಬಹುದು. ತಾಳ್ಮೆಯಿಂದ ವ್ಯವಹರಿಸಿ. ನೂತನ ದಂಪತಿಗಳಿಗೆ ಶುಭ ದಿನ.

ಮಕರ: ಹಣಕಾಸಿನ ಅಡಚಣೆಗಳು ದೂರವಾಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಸಾಲಗಾರರಿಂದ ಮುಕ್ತಿ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ತೊಡಕುಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ದೇವರ ಆರಾಧನೆ ಮಾಡುವಿರಿ.

ಮೀನ: ಮಹಿಳೆಯರಿಗೆ ಸಂಪತ್ತು ಕಳೆದುಕೊಳ್ಳುವ ಭಯ ಕಾಡಲಿದೆ. ವೃತ್ತಿರಂಗದಲ್ಲಿ ಮುನ್ನಡೆಯಿದ್ದರೂ ಹಣಕಾಸಿನ ಅಡಚಣೆ ತಪ್ಪದು. ಹಿರಿಯರ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಇಷ್ಟದೇವರ ಪ್ರಾರ್ಥನೆಯಿಂದ ನೆಮ್ಮದಿ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಉದ್ಯೋಗ ಸಿಗಬೇಕೆಂದರೆ ಪ್ರತಿದಿನ ಈ ಮಂತ್ರ ಪಠಿಸಿ