Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 10 ಏಪ್ರಿಲ್ 2020 (09:17 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸ ಕಾರ್ಯಗಳನ್ನು ನಿರ್ವಹಿಸಲಾಗದೇ ಒದ್ದಾಡಬೇಕಾದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆಯಿರಲಿ.

ವೃಷಭ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ತೋರಿಬಂದೀತು. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಪಡೆಯಬಹುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ಮಿಥುನ: ಇಷ್ಟು ದಿನ ಮಾಡಬೇಕೆಂದಿದ್ದ ನಿಮ್ಮ ಇಷ್ಟದ ಕೆಲಸಗಳನ್ನು ಮಾಡಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟಾಗುವಂತಹ ಮಾತನಾಡಬೇಡಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ  ಶ್ರಮ ಪಡಬೇಕಾಗುತ್ತದೆ. ಮೇಲಧಿಕಾರಿಗಳೊಂದಿಗೆ ನಾಜೂಕಿನಿಂದ ವರ್ತಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ರಾಜಕೀಯ ವರ್ಗದವರಿಗೆ ಜವಾಬ್ಧಾರಿ ಹೆಚ್ಚಲಿದೆ.

ಕನ್ಯಾ: ವ್ಯಾಪಾರಿಗಳಿಗೆ ಲಾಭವಾಗಲಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಲೆಕ್ಕಪತ್ರಗಳ ಬಗ್ಗೆ ಸರಿಯಾದ ನಿಗಾ ಇರಲಿ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಕೃಷಿಕರಿಗೆ ನಷ್ಟದ ಚಿಂತೆ ಕಾಡಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಲಿದೆ. ಪರೀಕ್ಷೆಗಳಿಗೆ ಸಿದ್ಧರಾಗಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾಗಬಹುದು. ಮುಂದಿನ ಕಷ್ಟದ ದಿನಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಗಳಿಂದಲೇ ನೋವುಂಟಾಗುವ ಪರಿಸ್ಥಿತಿ ಎದುರಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದನ್ನು ಬಿಟ್ಟು ನಿಮ್ಮ ಕೆಲಸ ಕಾರ್ಯಗಳತ್ತ ಗಮನ ಹರಿಸಿ. ಮಕ್ಕಳ ವಿಚಾರದಲ್ಲಿ ವಿನಾಕಾರಣ ಮೂಗು ತೂರಿಸುವ ಪ್ರಯತ್ನ ಮಾಡಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕು. ಮಹಿಳೆಯರಿಗೆ ಶುಭ ದಿನ.

ಮಕರ: ಮನಸ್ಸು ಬೇಡದ ಆಲೋಚನೆಗಳಿಂದ ತುಂಬಿ ಹೋಗಿರುತ್ತದೆ. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ನಿಮ್ಮ ಕ್ರಿಯಾತ್ಮಕತೆಗೆ ಕೆಲಸ ಕೊಡಿ. ವ್ಯವಹಾರದಲ್ಲಿ ಹೊಸ ದಾರಿಗಳಿಗೆ ಹುಡುಕಾಟ ನಡೆಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಕುಂಭ: ಕಾರ್ಯರಂಗದಲ್ಲಿ ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಆದರೆ ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಮನಸ್ಸಿಗೆ ಇಷ್ಟವಾಗುವವರ ಜತೆ ಮದುವೆಯಾಗಲು ಹಿರಿಯರ ಬೆಂಬಲ ಸಿಗಲಿದೆ. ಸಹೋದರರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮೀನ: ಸಂಗಾತಿಯ ದೇಹಾರೋಗ್ಯದ ಬಗ್ಗೆ ತೀವ್ರ ಕಾಳಜಿವಹಿಸಬೇಕಾಗುತ್ತದೆ. ಅನ್ಯರ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ