Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 11 ಏಪ್ರಿಲ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಕ್ರಿಯಾತ್ಮಕ ಕೌಶಲ್ಯಗಳಿಗೆ ಚಾಲನೆ ನೀಡುವಿರಿ. ಮನಸ್ಸಿನ ಬೇಸರ ಕಳೆಯಲು ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಆದರೆ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.

ವೃಷಭ: ಕಷ್ಟದ ಪರಿಸ್ಥಿತಿ ಎದುರಿಸಲು ಇಂದೇ ತಯಾರಾಗುವುದು ಉತ್ತಮ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದು ಉತ್ತಮ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮಿಥುನ: ಇಷ್ಟ ಮಿತ್ರರ, ಬಾಂಧವರ ಭೇಟಿಗಾಗಿ ಮನಸ್ಸು ಹಾತೊರೆಯಲಿದೆ. ಆದರೆ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಾಗದೇ ಬವಣೆ ಪಡುವಿರಿ. ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ಮೇಲಧಿಕಾರಿಗಳು ನೀಡಿದ ಗುರಿ ತಲುಪಲು ಹೆಣಗಾಡಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯುವಿರಿ. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳಿಂದ ಸಂತಸ ಸಿಗಲಿದೆ.

ಸಿಂಹ: ಸಾಹಿತ್ಯ, ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ ಎದುರಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಜವಾಬ್ಧಾರಿ ಹೆಚ್ಚಾಗಲಿದೆ. ಗೃಹಬಳಕೆ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ವ್ಯವಹಾರದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ತೋರಿಬರಲಿದೆ. ಕೌಟುಂಬಿಕವಾಗಿ ಖುಷಿಯ ದಿನ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ದೂರ ಸಂಚಾರಕ್ಕೆ ಅಡ್ಡಿ ಎದುರಾಗಲಿದೆ.

ತುಲಾ: ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕುವುದು ಅತೀ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಬರುವ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಹೊಸ ಯೋಜನೆಗಳಿಗೆ ಕೈಹಾಕಲು ಕೆಲವು ದಿನ ಕಾಯುವುದು ಸೂಕ್ತ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಆತಂಕವಾಗಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನಿಮ್ಮ ಖುಷಿಯನ್ನು ಯಾರೂ ತಡೆಯಲಾಗದು. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಇಷ್ಟ ದೇವರ ಪ್ರಾರ್ಥನೆ ಮಾಡಿದರೆ ಇನ್ನಷ್ಟು ಶುಭ ಫಲ ಪಡೆಯಬಹುದು. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟದ ಭೀತಿ ಎದುರಾಗಲಿದೆ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಅನಗತ್ಯ ವೈಮನಸ್ಯ ತಂದುಕೊಳ್ಳಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಸಿದವರಿಗೆ ಅನ್ನ ನೀಡುವ ಪುಣ್ಯ ಕೆಲಸ ಮಾಡಲಿದ್ದೀರಿ.

ಮಕರ: ದಂಪತಿಗಳಲ್ಲಿ ಸಾಮರಸ್ಯದ ಕೊರತೆ ಎದುರಾಗಬಹುದು. ತಾಳ್ಮೆಯಿಂದಿದ್ದಷ್ಟೂ ಸಮಾಧಾನ ನೆಲಸಲಿದೆ. ಕೃಷಿಕರಿಗೆ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾಗಬಹುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಮಾನಸಿಕವಾಗಿ ಒಂದು ರೀತಿಯ ಬೇಸರ ಕಾಡಲಿದೆ. ಋಣಾತ್ಮಕ ಚಿಂತನೆಗಳಿಂದ ಕೆಲಸ ಕಾರ್ಯದಲ್ಲಿ ನಿರುತ್ಸಾಹ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅಡೆತಡೆಗಳು ತೋರಿಬಂದೀತು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನ ಹರಿಸುವುದು ಉತ್ತಮ.

ಮೀನ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ಆದರೆ ಹಿರಿಯರ ಹಿತ ವಚನಗಳು ಅಪಥ್ಯವೆನಿಸಲಿದೆ. ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಮಹಿಳೆಯರಿಗೆ ಗೃಹ ಕೃತ್ಯಗಳಲ್ಲಿ ಎಡೆಬಿಡದೇ ತೊಡಗಿಸಿಕೊಳ್ಳಬೇಕಾಗಿರುವುದರಿಂದ ದೇಹಾಯಾಸವಾಗಬಹುದು. ಕಾಳಜಿ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮಗೆ ಯಾವುದೇ ಅನಾರೋಗ್ಯ ಸಮಸ್ಯೆ ಕಾಡಬಾರದಂತಿದ್ದರೆ ಈ ಮಂತ್ರ ಪಠಿಸಿ