Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 14 ಏಪ್ರಿಲ್ 2020 (09:16 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಪ್ರಯಾಸಪಟ್ಟಾದರೂ ಪೂರ್ತಿ ಮಾಡಲಿದ್ದೀರಿ. ಸಾಂಸಾರಿಕವಾಗಿ ಮೌನಕ್ಕೆ ಶರಣಾದರೆ ಉತ್ತಮ. ವಿವಾಹಾದಿ ಕಾರ್ಯಕ್ರಮಗಳು ಮುಂದೂಡಿಕೆಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಮಹಿಳೆಯರಿಗೆ ತವರಿನಿಂದ ಉಡುಗೊರೆ ಸದ್ಯದಲ್ಲೇ ಸಿಗಲಿದೆ. ಸಹೋದರರಿಂದ ಸಂತೋಷದ ವಾರ್ತೆ ಆಲಿಸುವಿರಿ. ವ್ಯವಹಾರದಲ್ಲಿ ಹಣಕಾಸಿನ ತೊಂದರೆ ಎದುರಾಗಲಿದೆ. ಸಾಲಗಾರರ ಕಾಟ ಚಿಂತೆಗೆ ಕಾರಣವಾಗಲಿದೆ.

ಮಿಥುನ: ಮನಸ್ಸಿಗೆ ಖುಷಿ ಕೊಡುವ ವಿಚಾರ ಕೇಳಲಿದ್ದೀರಿ. ಆದರೆ ಅಂದುಕೊಂಡ ಕೆಲಸ ಮಾಡಲಾಗದೇ ಮನಸ್ಸಿಗೆ ಹತಾಶೆ ಕಾಡಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕೃಷಿಕರಿಗೆ ತಮ್ಮ ಬೆಳೆ ಮಾರಾಟಕ್ಕೆ ಹೊಸ ದಾರಿ ಗೋಚರವಾಗಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಣ್ಣ ವ್ಯಾಪಾರಿಗಳಿಗೆ ನಷ್ಟದ ಭೀತಿ ಎದುರಾಗಲಿದೆ. ಕಷ್ಟದ ದಿನಗಳಿಗೆ ಇಂದೇ ಸಿದ್ಧರಾಗಿರಿ.

ಸಿಂಹ: ಕಾರ್ಯರಂಗದಲ್ಲಿ ಇನ್ನೂ ಅನೇಕ ಸವಾಲುಗಳಿದ್ದು, ಆತ್ಮವಿಶ್ವಾಸದಿಂದ ಮುನ್ನುಗ್ಗಲು ಸಿದ್ಧರಾಗಬೇಕು. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಗಳಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಕೆಳ ಹಂತದ ನೌಕರರು ಸ್ವ ಉದ್ಯೋಗದ ಕಡೆಗೆ ಚಿಂತನೆ ನಡೆಸಲಿದ್ದಾರೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆವಹಿಸಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಆಸ್ಥೆ ವಹಿಸಬೇಕಾಗುತ್ತದೆ. ದಿನದಂತ್ಯದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ.

ತುಲಾ: ವ್ಯವಹಾರದಲ್ಲಿ ಶತ್ರುಭಯ ನಾಶವಾಗಲಿದ್ದು, ಹೊಸ ದಾರಿಗಳು ಗೋಚರವಾಗಲಿದೆ. ಮನಸ್ಸಿದ್ದರೆ ಮಾರ್ಗವೂ ಇದೆ ಎನ್ನುವುದನ್ನು ಮರೆಯಬೇಡಿ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರುವುದು. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ.

ವೃಶ್ಚಿಕ: ಹಣಕಾಸಿನ ಅಡಚಣೆಗಳು ತೋರಿಬಂದು ಅಂದುಕೊಂಡ ಯೋಜನೆಗಳನ್ನು ಅರ್ಧಕ್ಕೇ ನಿಲ್ಲುಸುವಿರಿ. ಭೂ, ಮನೆ ಖರೀದಿ ವ್ಯವಹಾರಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ.

ಧನು: ಅನಗತ್ಯವಾಗಿ ಅನ್ಯರ ವಿಚಾರಗಳಿಗೆ ತಲೆಕೆಡಿಸಿಕೊಂಡು ನಿಮ್ಮ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಮಕ್ಕಳಿಂದ ಸಮಾಧಾನ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಕಡೆಗೆ ಒಲವು ಮೂಡಲಿದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಇಂದಿನ ದಿನ ಶುಭ ದಿನವಾಗಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ದೈವ ಭಕ್ತಿ ಹೆಚ್ಚುವುದು. ಸಾಧು ಸಂತರ ಭೇಟಿ ಸಾಧ‍್ಯತೆ.

ಕುಂಭ: ಕ್ಷುಲ್ಲುಕ ಕಾರಣಗಳಿಗೆ ಸಂಗಾತಿಯೊಂದಿಗೆ ಮನಸ್ತಾಪವಾಗಲಿದೆ. ಮಾತಿನ ಮೇಲೆ ಸಂಯಮವಿರಲಿ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಗೃಹ ಬಳಕೆ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ.

ಮೀನ: ವಾಹನಾದಿ ಸಂಚಾರದಿಂದ ಅಪಾಯ ತಪ್ಪಿದ್ದಲ್ಲ. ಹಿತಶತ್ರುಗಳ ಹುನ್ನಾರ ಬೆಳಕಿಗೆ ಬರಲಿದೆ. ಮನೆಯಲ್ಲಿ ನಡೆಯಬೇಕಾಗಿದ್ದ ಶುಭ ಮಂಗಲ ಕಾರ್ಯ ತಪ್ಪಿ ಹೋಗುವುದು. ಕುಲದೇವರ ಪ್ರಾರ್ಥನೆ ಮಾಡಿದರೆ ನೆಮ್ಮದಿ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments